
ಬೆಂಗಳೂರು (ಮಾ.14): ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊ ಳಗಾಗಿರುವ ನಟಿ ರನ್ಯಾ ರಾವ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಮತ್ತು ಸಿಬಿಐ ಬಳಿಕ ಇದೀಗ ಜಾರಿ ನಿರ್ದೇಶನಾಲಯ (ಇ.ಡಿ) ಎಂಟ್ರಿಯಾಗಿದೆ. ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊ೦ಡ ಇ.ಡಿ. ಅಧಿಕಾರಿಗಳು ಗುರುವಾರ ರನ್ಯಾ ರಾವ್ ಮನೆ ಸೇರಿ ಆಕೆ ಆಪ್ತರ ಮನೆ, ಕಚೇರಿ ಗಳನ್ನು ಶೋಧ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ನಾಲ್ಕಕ್ಕೂ ಅಧಿಕ ಸ್ಥಳಗಳಲ್ಲಿ ಶೋಧ ಕಾರ್ಯ ನಡೆದಿದೆ.
ರನ್ಯಾ ರಾವ್ ವಾಸಿಸುತ್ತಿದ್ದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್, ಡಿಆರ್‌ಐ ವಶದಲ್ಲಿರುವ ರನ್ಯಾ ಗೆಳೆಯ ತರುಣ್ ರಾಜ್ ನಿವಾಸ, ಕೋರಮಂಗಲದಲ್ಲಿನ ವೈಟ್‌ಗೋಲ್ಡ್ ಸಂಸ್ಥೆ ಟಿ.ಜೆ.ರಾವ್ ನಿವಾಸ ಸೇರಿ ಇತರೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ರಾವ್ ಅವರ ಮನೆಯಲ್ಲಿ ಭಾರಿ ಪ್ರಮಾಣದ ಚಿನ್ನದ ದಾಸ್ತಾನು ಪತ್ತೆಯಾಗಿದೆ. ಇದರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದ ಚಿನ್ನ ಎಷ್ಟು ಎಂಬು ದರ ಬಗ್ಗೆ ಪರಿಶೀಲನೆ ನಡೆದಿದೆ. ಈ ನಡುವೆ, ರನ್ಯಾ ರಾವ್ ವಿಮಾನದ ಟಿಕೆಟ್ ಬುಕ್ ಮಾಡಿ ದವರು ಮತ್ತು ವಿದೇಶ ಪ್ರವಾಸಕ್ಕೆ ನೆರವು ನೀಡಿದವರು ಮತ್ತು ವ್ಯವಹಾರದಲ್ಲಿ ಪಾಲುದಾರ ರಾಗಿರುವವರಿಗೂ ಇ.ಡಿ.ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮಾಹಿತಿ ಸಂಗ್ರಹ: ದಾಳಿ ವೇಳೆ ಪ್ರಕರಣ ಸಂಬಂಧ ಕೆಲ ಮಾಹಿತಿಗಳನ್ನು ಕ್ರೋಢೀಕರಿಸಲಾಗಿದೆ. ಹಗರಣದಲ್ಲಿ ಕೋಟ್ಯಂತರ ರು. ಅಕ್ರಮವಾಗಿ ವರ್ಗಾವಣೆಯಾಗಿರುವುದರಿಂದ ಇ.ಡಿ. ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ವಿಚಾರಣೆ ನಡೆಸಿ ಅಗತ್ಯ ವಿಷಯ ಸಂಗ್ರಹಿಸಿದ್ದಾರೆ. ಅಕ್ರಮವಾಗಿ ಹಣ ವರ್ಗಾವಣೆ ಯಾಗಿರುವುದಕ್ಕೆ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಅಲ್ಲದೆ, ದಾಳಿ ವೇಳೆ ಇದ್ದವರ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ರನ್ಯಾ ರಾವ್ ಜಾಮೀನು ತೀರ್ಪು ಬಾಕಿ: ಬಂಧನಕ್ಕೆ ಅರೆಸ್ಟ್ ಮೆಮೋದಲ್ಲಿ ತನಿಖಾಧಿಕಾರಿ ಸೂಕ್ತ ಕಾರಣ ನೀಡಿಲ್ಲ
ಹೊಸ ತಿರುವು: ಇ.ಡಿ. ಪ್ರವೇಶದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಡಿಆರ್‌ಐ ದಾಳಿ ವೇಳೆ 2.16 ಕೋಟಿ ನಗದು, 2.2 ಕೋಟಿ ರು. ಮೌಲ್ಯದ ಚಿನ್ನ ಪತ್ತೆಯಾಗಿದೆ. ಕಾನೂನು ಪ್ರಕಾರ 2 ಲಕ್ಷ ರು.ಗಿಂತ ಹೆಚ್ಚಿನ ನಗದು ಇಟ್ಟುಕೊಳ್ಳುವಂತಿಲ್ಲ. ಒಂದು ವೇಳೆ ಇಟ್ಟುಕೊಳ್ಳುವುದಾದರೆ ಸೂಕ್ತ ದಾಖಲೆ ಒದಗಿಸಬೇಕು. ಕೋಟ್ಯಂತರ ರು. ಲಭ್ಯವಾಗಿರುವ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ವೇಳೆ ಇ.ಡಿ ದಾಳಿ ನಡೆಸಿದೆ. ದಾಳಿ ವೇಳೆ ಕೆಲ ದಾಖಲೆಗಳನ್ನು ಪತ್ತೆ ಮಾಡಲಾಗಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ