ಮುಂದಿನ ದಿನಗಳಲ್ಲಿ ವಿಚಾರಣೆಯ ಭಾಗವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೂ ನೋಟಿಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆ ವಿಷಯ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಅಧಿಕಾರಿಗಳ ವಿಚಾರಣೆಗಾಗಿ ನೋಟಿಸ್ ಜಾರಿಗೊಳಿಸಲಾಗಿದೆ.
ಬೆಂಗಳೂರು(ಡಿ.03): ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇದೀಗ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ವಿಚಾರಣೆಯ ಭಾಗವಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೂ ನೋಟಿಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಡಾ ನಿವೇಶನ ಹಂಚಿಕೆ ವಿಷಯ ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವುದರಿಂದ ಅಧಿಕಾರಿಗಳ ವಿಚಾರಣೆಗಾಗಿ ನೋಟಿಸ್ ಜಾರಿಗೊಳಿಸಲಾಗಿದೆ.
ಸಿದ್ದರಾಮಯ್ಯ ಪತ್ನಿಗೆ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಬಿಗ್ ಟ್ವಿಸ್ಟ್; ಹೊಸದಾಗಿ ಎಂಟ್ರಿ ಕೊಟ್ಟ ಜಮುನಾ!
ಬೆಂಗಳೂರಿನ ಶಾಂತಿನಗರದಲ್ಲಿನ ಇ.ಡಿ. ಕಚೇರಿಗೆ ಮುಡಾ ಹಗರಣ ಸಂಬಂಧದ ದಾಖಲೆಗಳ ಸಮೇತ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಇಲಾಖೆ ಕಾರ್ಯದರ್ಶಿಗೆ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.
ಬೈರತಿಗೆ ವಿಚಾರಣೆ ಬಿಸಿ?:
ಬೈರತಿ ಸುರೇಶ್ ಅವರು ಮುಡಾ ಕಚೇರಿಯಿಂದ ದಾಖಲೆ ಗಳನ್ನು ತೆಗೆದುಕೊಂಡು ಹೋಗಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಇ.ಡಿ ದಾಳಿ ವೇಳೆ ಕೆಲ ದಾಖಲೆಗಳು ಪತ್ತೆಯಾಗದಿರುವ ಕಾರಣ ಈ ಬಗ್ಗೆ ಅವರನ್ನು ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ ಎಂದು ಎಂದು ಹೇಳಲಾಗಿದೆ.
ಸಿಎಂ ಆಪ್ತಗೂ ನೋಟಿಸ್:
ಈ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಎಂದು ಹೇಳಲಾದ ರವಿಕುಮಾರ್ ಅವರಿಗೆ ಮತ್ತೊಮ್ಮೆ ಇ.ಡಿ ನೋಟಿಸ್ ಜಾರಿಗೊಳಿಸಿದೆ ಎನ್ನಲಾಗಿದೆ. ಈ ಹಿಂದೆಯೂ ರವಿಕುಮಾರ್ ರನ್ನು ಸುದೀರ್ಘವಾಗಿ ವಿಚಾರಣೆ ನಡೆಸಲಾ ಗಿತ್ತು. ಇದೀಗ ಮತ್ತೊಮ್ಮೆ ವಿಚಾರಣೆ ನಡೆಸಬೇಕಾಗಿರುವ ಕಾರಣ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.
ಈಗಾಗಲೇ ಪ್ರಕರಣದ ಮೂರನೇ ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಮತ್ತು ಜಮೀನು ಮಾಲೀಕ ದೇವರಾಜು ಅವರ ವಿಚಾರಣೆ ನಡೆಸಲಾಗಿದೆ. ಮಾಜಿ ಮುಡಾ ಆಯುಕ್ತರು ಸೇರಿ ಹಲವರನ್ನು ವಿಚಾರಣೆ ಗೊಳಪಡಿಸಿ ಮಾಹಿತಿ ಪಡೆದುಕೊಳ್ಳಲಾಗಿದೆ.
ಲೋಕಾಯುಕ್ತ ತನಿಖೆಯಲ್ಲಿ ಹಸಕ್ಷೇಪ ಮಾಡಿಲ್ಲ, ನಾನು ಯಾವ ತಪ್ಪು ಮಾಡಿಲ್ಲ, ಯಾರಿಗೂ ಹೆದರಲ್ಲ: ಬೈರತಿ ಸುರೇಶ್
ಬೆಂಗಳೂರು: ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ತನಿಖೆ ವಿಚಾರದಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಿಲ್ಲ ಹಾಗೂ ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಯಾರಿಗೂ ಹೆದರುವ ಅವಶ್ಯಕತೆಯಿಲ್ಲ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಬಿ.ಎಸ್. ಸುರೇಶ್ ತಿಳಿಸಿದ್ದರು.
ಲೋಕಾಯುಕ್ತ ಪೊಲೀಸರು ಮುಡಾ ಯಾರಿಗೂ ಹೆದರಲ್ಲ:
ಸಚಿವ ಕಚೇರಿ ಪರಿಶೀಲನೆಗೂ ಮುನ್ನ ಸಚಿವ ಬಿ. ಎಸ್. ಸುರೇಶ್ ಅವರಿಗೆ ಮಾಹಿತಿ ನೀಡಿದ್ದರು' ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದೆ ಅವರು, ಮುಡಾ ಪ್ರಕರಣದ ತನಿಖೆಯಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡಿಲ್ಲ. ನಾನು ಯಾರಿಗೂ ಹೆದರಬೇಕಿಲ್ಲ. ನಗರಾಭಿವೃದ್ಧಿ ಇಲಾಖೆ ಸಚಿವನಾಗಿ ನನ್ನ ವ್ಯಾಪ್ತಿಯ ಕಚೇರಿಗೆ ಹೋಗುವುದಕ್ಕೆ ಯಾರ ಅನುಮತಿ ಪಡೆಯುವ ಅವಶ್ಯಕತೆಯಿಲ್ಲ ಎಂದರು.
ಸೈಟ್ ಕೊಡದಿದ್ದಕ್ಕೆ ವಿಶ್ವನಾಥ್‌ಗೆ ಸಿಟ್ಟು, ಕಡಿಮೆ ಬೆಲೆಗೆ ಎಕರೆಗಟ್ಟಲೆ ನಿವೇಶನ ಕೇಳಿದ್ದರು: ಸಚಿವ ಬೈರತಿ ಸುರೇಶ್
ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತು ಅವರ ಮಗ ನನ್ನ ಬಳಿ ಬಂದು ಕಡಿಮೆ ಬೆಲೆಗೆ ಎಕರೆಗಟ್ಟಲೆ ಸಿಎ ನಿವೇಶನ ನೀಡುವಂತೆ ಕೇಳಿದ್ದರು. ಕಾನೂನು ಬಾಹಿರವಾದ್ದರಿಂದ ಕೊಡಲಾಗದು ಎಂದಿದ್ದಕ್ಕೆ ನನ್ನ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಆರೋಪಿಸಿದ್ದರು.
ಮುಡಾ ಹಗರಣ: ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ, ಬಿಜೆಪಿ ಶಾಸಕ ಶ್ರೀವತ್ಸ
ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ವಿಶ್ವನಾಥ್ ಒಬ್ಬ ವಿಚಿತ್ರ ಹುಚ್ಚ. ಬೆಳಗ್ಗೆ ಎದ್ದು ಯಾರ ಮೇಲಾದರೂ ಸುಳ್ಳು ಆರೋಪ ಮಾಡದಿದ್ದರೆ ತಿಂದಿದ್ದೂ ಕರಗಲ್ಲ, ನಿದ್ರೆಯೂ ಬರುವುದಿಲ್ಲ ಎಂದು ಕೆಂಡಕಾರಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸೊಸೆ ಹೆಸರಲ್ಲಿ ಹೋಟೆಲ್, ಪಬ್ ನಡೆಸುತ್ತಿದ್ದಾರೆ. ಇದರ ಬೆಲೆ ಇನ್ನೂರು- ಮುನ್ನೂರು ಕೋಟಿ ರುಪಾಯಿ. ಅದು ಬೈರತಿ ಸುರೇಶ್ ಕ್ಷೇತ್ರದಲ್ಲಿದೆ. ಅವರೇ ಅದರ ಮಾಸ್ಟರ್ ಮೈಂಡ್ ಎಂಬ ಸುಳ್ಳು ಹೇಳಿಕೆಯನ್ನು ವಿಶ್ವನಾಥ್ ನೀಡಿದ್ದಾರೆ. ಆ ವಿಶ್ವನಾಥ್ ಮಾಡಿರುವ ಆರೋಪದಲ್ಲಿ ಶೇ.1ರಷ್ಟು ಸತ್ಯ ಇದ್ದರೂ ಅವರು ಹೇಳಿದ ಶಿಕ್ಷೆಗೆ ಗುರಿಯಾ ಗಲು ನಾನು ಸಿದ್ದ, ಇಲ್ಲದಿದ್ದರೆ ನಾವು ಹೇಳುವ ಶಿಕ್ಷೆಯನ್ನು ಅವರು ಅನುಭವಿಸಲಿ ಎಂದು ಸವಾಲು ಹಾಕಿದ್ದರು.
ವಿಶ್ವನಾಥ್ ಬ್ಲ್ಯಾಕ್ಟೇಲರ್, ರೋಲ್‌ಕಾಲರ್:
ಬೈರತಿ ಎಚ್.ವಿಶ್ವನಾಥ್ ಒಬ್ಬ ಥರ್ಡ್ ಗ್ರೇಡ್ ವ್ಯಕ್ತಿ. ರೋಲ್ ಕಾಲ್ ಹಾಗೂ ನೂರಕ್ಕೆ ನೂರು ಬ್ಲಾಕ್ ಮೇಲ್ ರಾಜಕಾರಣಿ. ಸಹಾಯ ಮಾಡಿದವರನ್ನೇ ಕಚ್ಚುವ ಸ್ವಭಾವ ವಿಶ್ವನಾಥ್‌ಗಿದೆ. ಗೊಬೆಲ್ಸ್ ವಂಶಸ್ಥ. ಅವರಿಗೆ ಬುದ್ದಿ ಭ್ರಮಣೆ ಆಗಿದೆ. ನಿಮ್ಹಾನ್ಸ್‌ಗೆ ಸೇರಿಸುವುದು ಬಾಕಿ ಇದೆ. ಕಾಂಗ್ರೆಸ್ ಪಕ್ಷ ವಿಶ್ವನಾಥ್ ಅವರ ಅಪ್ಪನ ಮನೆ ಆಸ್ತಿಯಲ್ಲ. ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ಗೆ ಕರೆತಂದಿದ್ದು ಸೋನಿಯಾ ಗಾಂಧಿ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ತಿಳಿಸಿದ್ದರು.