ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ

By Girish Goudar  |  First Published Jul 10, 2024, 9:00 AM IST

ಡಾಲರ್ಸ್‌ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ. 

ಬೆಂಗಳೂರು(ಜು.10):  ಇಂದು ಬೆಳ್ಳಂ ಬೆಳಗ್ಗೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ ಇ.ಡಿ ದಾಳಿ ನಡೆದಿದೆ. 

ಡಾಲರ್ಸ್‌ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ. 

Latest Videos

undefined

ವಾಲ್ಮೀಕಿ ನಿಗಮದ ಹಗರಣದ ಆಡಿಯೋ ಬಾಂಬ್‌..!

ಯಲಹಂಕದಲ್ಲಿರುವ ಬಸವನಗೌಡ ದದ್ದಲ್ ನಿವಾಸದ ಮೇಲೂ ದಾಳಿ ನಡೆದಿದೆ. ಬೆಳಗ್ಗೆ 7 ಗಂಟೆಗೆ ಇಡಿ ತಂಡ ದಾಳಿ ನಡೆಸಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇಡಿಯಲ್ಲಿ ಪ್ರಕರಣ ದಾಖಲಾಗಿತ್ತು, ಹೀಗಾಗಿ ಇಡಿ ಅಧಿಕಾರಿಗಳು ನಡೆಸಿದ್ದಾರೆ. 

ವಾಲ್ಮಿಕಿ ಅಭಿವೃದ್ದಿ ನಿಗಮ ಮಂಡಳಿಯಲ್ಲಿ ಐವರು ಇಡಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಬೆಳಿಗ್ಗೆ 3:30 ಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಉದ್ಯೋಗಿ ದೀಪ ಎಂಬುವವರ ಮನೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೀಪ ಅವರ ವಿಜಯನಗರದ ಮನೆ ಮೇಲೆ ಇಡಿ ಅಧಿಕಾರಿಗಳ ದಾಳಿ ನಡೆಸಿ ದಾಖಲೆಗಳಿಗಾಗಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. 

click me!