
ಬೆಂಗಳೂರಿನ 17 ಕಡೆ ಕೇಂದ್ರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ನಿವಾಸದ ಮೇಲೆಯೂ ದಾಳಿ ನಡೆದಿದೆ. ಅಶೋಕ್ ನಗರದಲ್ಲಿರುವ ನಲಪಾಡ್ ನಿವಾಸದ ಮೇಲೆ ಇಡಿ ದಾಳಿ ನಡೆಸಿದ್ದು, ನಿವಾಸದಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
ಕಾಂಗ್ರೆಸ್ ಶಾಸಕ ನಲಪಾಡ್ ಹ್ಯಾರಿಸ್ ಬಿಡಿಎ ಅಧ್ಯಕ್ಷರಾಗಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಜೊತೆ ಇವರಿಗೆ ಲಿಂಕ್ ಇರುವ ಆರೋಪ ಕೇಳಿ ಬಂದಿದೆ. ಶಾಸಕ ನಲಪಾಡ್ ಹ್ಯಾರಿಸ್ ಹಾಗೂ ಪುತ್ರ ಮೊಹಮ್ಮದ್ ನಲಪಾಡ್ ಇಬ್ಬರ ನಿವಾಸದ ಮೇಲೆ ಇಡಿ ದಾಳಿ ನಡೆಸಿದೆ.
ಅಶೋಕ್ ನಗರದಲ್ಲಿರುವ ನಿವಾಸದಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಸಿಆರ್‌ಪಿಎಫ್ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದ್ದು, ಭಾರಿ ಭದ್ರತೆಯಲ್ಲಿ ಈ ಇಡಿ ರೈಡ್ ನಡೆದಿದೆ. ಬೆಳಗ್ಗೆ 6 ಗಂಟೆಗೆ ಇಡಿ ಅಧಿಕಾರಿಗಳು ನಿವಾಸಕ್ಕೆ ಆಗಮಿಸಿದ್ದು, ಹ್ಯಾರಿಸ್ ನಿವಾಸದಲ್ಲಿ ಶೋಧ ನಡೆಸುತ್ತಿದ್ದಾರೆ. ಸುಮಾರು 12 ಮಂದಿ ಇಡಿ ಅಧಿಕಾರಿಗಳಿಂದ ಶೋಧ ನಡೆಯುತ್ತಿದೆ.
ಇದನ್ನೂ ಓದಿ: ಆಡುಗಳ ಸಾಯಿಸಿದ ನಾಯಿ, ನಾಯಿಗೆ ವಿಷವಿಟ್ಟ ಮನುಷ್ಯ: ವಿಷಪೂರಿತ ನಾಯಿಗಳ ತಿಂದು 25ಕ್ಕೂ ಹೆಚ್ಚು ಅತೀ ಅಪರೂಪದ ರಣಹದ್ದುಗಳು ಸಾವು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ