ವಾಲ್ಮೀಕಿ ನಿಗಮ ಹಗರಣ: ಬೆಂಗಳೂರು-ಬಳ್ಳಾರಿ-ವಿಜಯನಗರ ಸಂಸದ, ಶಾಸಕರ ಮೇಲೆ ಇಡಿ ದಾಳಿ

Published : Jun 11, 2025, 09:13 AM IST
Ballari ED Raid

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಯುತ್ತಿದೆ.

ಬಳ್ಳಾರಿ (ಜೂ.11): ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ.

ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 20 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಹಂಚಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ. ಇದೀಗ ಈ ಹಣಕಾಸು ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲೆಯ ಪ್ರಮುಖ ರಾಜಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ದಾಳಿಗೆ ಒಳಗಾದ ಪ್ರಮುಖ ನಾಯಕರು:

  • ಬಳ್ಳಾರಿ ಲೋಕಸಭಾ ಸಂಸದ - ತುಕಾರಾಂ (ಸಂಡೂರು)
  • ಬಳ್ಳಾರಿ ನಗರ ಶಾಸಕ - ಭರತ್ ರೆಡ್ಡಿ
  • ಕೂಡ್ಲಿಗಿ - ಶಾಸಕ ಡಾ. ಶ್ರೀನಿವಾಸ
  • ಕಂಪ್ಲಿ ಶಾಸಕ - ಗಣೇಶ
  • ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಮಾಜಿ ಸಚಿವ - ನಾಗೇಂದ್ರ

ಎಂಟು ತಂಡಗಳಲ್ಲಿ ಕಾರ್ಯಾಚರಣೆ:

ಇಡಿ ಅಧಿಕಾರಿಗಳು ಎಂಟು ತಂಡಗಳಲ್ಲಿ ವಿಭಜನೆಯಾಗಿ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲಿಸಲಾಗಿದೆ.

ಇಡಿ ದಾಳಿ ಸ್ಥಳಗಳ ವಿವರ:

  • ಕಂಪ್ಲಿ ಮತ್ತು ಕುರುಗೋಡು ಶಾಸಕರಾದ ಗಣೇಶರ ನಿವಾಸದಲ್ಲಿ ಶೋಧ
  • ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ ಅವರ ಮನೆ ಹಾಗೂ ಕಚೇರಿ ಪರಿಶೀಲನೆ
  • ಬಳ್ಳಾರಿ ನಗರದ ಶಾಸಕರುಗಳಾದ ಭರತ್ ರೆಡ್ಡಿ ಮತ್ತು ನಾಗೇಂದ್ರ ಅವರ ಮನೆ ಮತ್ತು ಕಚೇರಿ ಪರಿಶೀಲನೆ
  • ಸಂಡೂರಿನ ಸಂಸದ ತುಕಾರಾಂ ಅವರ ನಿವಾಸದಲ್ಲಿಯೂ ಶೋಧ ಕಾರ್ಯಾಚರಣೆ

ಇಡಿ ಅಧಿಕಾರಿಗಳು ಮೊದಲು ಸ್ಥಳೀಯ ಪೊಲೀಸ್ ಮತ್ತು ಕಂದಾಯ ಇಲಾಖೆಯ ಸಹಕಾರದೊಂದಿಗೆ ದಾಳಿ ಆರಂಭಿಸಿದ್ದು, ಹಣಕಾಸು ದಾಖಲೆಗಳು, ಬ್ಯಾಂಕ್‌ ವ್ಯವಹಾರಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಮುಂಗಡವಾಗಿದ್ದ ಅನುದಾನಗಳ ದುರ್ಬಳಕೆ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಆರೋಪಗಳು ಕೇಳಿಬಂದಿದ್ದು, ಅದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ತನಿಖಾ ಸಂಸ್ಥೆ ಈ ಕ್ರಮಕೈಗೊಂಡಿದೆ.

ಹಳೆಯ ದಾಖಲೆಗಳ ಪರಿಶೀಲನೆ, ಲೆಕ್ಕಪತ್ರಗಳ ಪರಿಶೋಧನೆ ಹಾಗೂ ಹಣದ ಸಾಗಣೆಯನ್ನು (money trail) ಪತ್ತೆಹಚ್ಚುವ ಕೆಲಸ ಈ ದಾಳಿಯ ಪ್ರಮುಖ ಉದ್ದೇಶವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದು, ಅನೇಕ ನಾಯಕರು ಇದನ್ನು ರಾಜಕೀಯ ಪ್ರೇರಿತ ಕ್ರಮವೆಂದು ಆರೋಪಿಸುತ್ತಿದ್ದಾರೆ. ಆದರೆ ಇಡಿ ಮೂಲಗಳ ಪ್ರಕಾರ, ದಾಖಲೆಗಳ ಆಧಾರದ ಮೇಲೆ ಮಾತ್ರವೇ ದಾಳಿ ನಡೆಯುತ್ತಿದೆ ಎಂದು ತಿಳಿಸಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌