ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಬೆಳ್ಳಂಬೆಳಗ್ಗೆ ಮನೆ, ಕಚೇರಿ ಸೇರಿದಂತೆ 17 ಕಡೆಗಳಲ್ಲಿ ದಾಳಿ

Published : Sep 09, 2026, 08:09 AM IST
ED raid on satish jarkiholi

ಸಾರಾಂಶ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಬಾಮೈದನಿಗೆ ಸಂಬಂಧಿಸಿದ 15ಕ್ಕೂ ಹೆಚ್ಚು ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅನಧಿಕೃತ ಅಬಕಾರಿ ಲೈಸೆನ್ಸ್ ಹಂಚಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬೆಳಗಾವಿ ಸೇರಿದಂತೆ ಹಲವೆಡೆ ಈ ಶೋಧ ಕಾರ್ಯ ನಡೆಯುತ್ತಿದೆ.

ಬೆಂಗಳೂರು (ಸೆ.09): ಕರ್ನಾಟಕ ಸರ್ಕಾರದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರಿಗೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅನಧಿಕೃತ ಅಬಕಾರಿ ಲೈಸೆನ್ಸ್ ಹಂಚಿಕೆ ಮತ್ತು ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ಜಾರಕಿಹೊಳಿ ಹಾಗೂ ಅವರ ಬಾಮೈದ ಮಂಜುನಾಥ್‌ಗೆ ಸೇರಿದ 15ಕ್ಕೂ ಹೆಚ್ಚು ಕಡೆ ಮಂಗಳವಾರ ಮುಂಜಾನೆಯಿಂದಲೇ ಇಡಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರದ 5 ಪ್ರಮುಖ ಸ್ಥಳಗಳು, ಬೆಳಗಾವಿ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು 15ಕ್ಕೂ ಅಧಿಕ ಕಡೆಗಳಲ್ಲಿ ಈ ಶೋಧ ಕಾರ್ಯ ತೀವ್ರಗೊಂಡಿದೆ. ಸಿಆರ್‌ಪಿಎಫ್ (CRPF) ಯೋಧರ ಭದ್ರತೆಯೊಂದಿಗೆ ಕಚೇರಿ ಹಾಗೂ ನಿವಾಸಗಳಿಗೆ ನುಗ್ಗಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಏನಿದು ಅಬಕಾರಿ ಲೈಸೆನ್ಸ್ ಅಕ್ರಮದ ಆರೋಪ?

ಈ ದಾಳಿಯು ಮೂಲತಃ ಸತೀಶ್ ಜಾರಕಿಹೊಳಿ ಅವರ ಬಾಮೈದ ಮಂಜುನಾಥ್ ಅವರಿಗೆ ಸಂಬಂಧಿಸಿದ್ದು ಎನ್ನಲಾಗಿದೆ. ಮಂಜುನಾಥ್ ವಿರುದ್ಧ ಈ ಹಿಂದೆಯೂ ಅಬಕಾರಿ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಶೋಧ ನಡೆಸಿತ್ತು. ಸತೀಶ್ ಜಾರಕಿಹೊಳಿ ಅವರು ಸಚಿವರಾಗಿದ್ದ ಪ್ರಭಾವ ಬಳಸಿ ನಿಯಮಬಾಹಿರವಾಗಿ ಬರೋಬ್ಬರಿ 18 ಬಾರ್‌ಗಳಿಗೆ ಅನಧಿಕೃತ ಲೈಸೆನ್ಸ್ ಕೊಡಿಸಲು ಸಹಾಯ ಮಾಡಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಅಲ್ಲದೆ, ಈ ಬಾರ್‌ಗಳ ಮೂಲಕ ಬಂದ ಹಣವನ್ನು ಅಕ್ರಮವಾಗಿ ವಿದೇಶಗಳಲ್ಲಿ ಹೂಡಿಕೆ ಮಾಡಲು ಸಚಿವರು ನೆರವಾಗಿದ್ದಾರೆ ಎನ್ನಲಾಗಿದ್ದು, ಈ ಹಿಂದೆ ನಡೆಸಿದ ತನಿಖೆಯಲ್ಲಿ ಸುಮಾರು 3 ಕೋಟಿ ರೂಪಾಯಿಗೂ ಅಧಿಕ ಅಕ್ರಮ ವಿದೇಶಿ ಹಣದ ವಹಿವಾಟು ಪತ್ತೆಯಾಗಿತ್ತು. ಇದೀಗ ಈ ಹಣ ವರ್ಗಾವಣೆಯ ಮೂಲ ಹಾಗೂ ಅಕ್ರಮ ಸಂಪಾದನೆಯ ಕೊಂಡಿಗಳನ್ನು ಬೆನ್ನತ್ತಿರುವ ಇಡಿ ಅಧಿಕಾರಿಗಳು ದಾಖಲೆಗಳನ್ನು ಜಾಲಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಾ.ರಾಜ್ ಕುಮಾರ್-ಲೀಲಾವತಿ ಸಂಬಂಧ: ತಿಂಗಳಲ್ಲಿ 10 ಮುದ್ರಣ ಕಂಡ 'ಲೀಲಮ್ಮ ನಿನ್ನ ಗಂಡ ಯಾರಮ್ಮ?' ಕೃತಿ!
Karnataka News Live: ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್ - ಬೆಳ್ಳಂಬೆಳಗ್ಗೆ ಮನೆ, ಕಚೇರಿ ಸೇರಿದಂತೆ 17 ಕಡೆಗಳಲ್ಲಿ ದಾಳಿ