ಕಲ್ಯಾಣ ಕರ್ನಾಟಕ ಭಾಗ ಹಾಗೂ ಬಿಬಿಎಂಪಿ ವ್ಯಾಪ್ತಿ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ನಡೆಸುತ್ತಿರುವ ಸಾರ್ವಜನಿಕ ಶಿಕ್ಷಣ ಇಲಾಖೆ.
ಕೊಪ್ಪಳ(ಏ.27): ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಜ್ಜಾಗಿದೆ. ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗ ಹಾಗೂ ಬಿಬಿಎಂಪಿ ವ್ಯಾಪ್ತಿ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಅಭ್ಯರ್ಥಿಗಳ ದಾಖಲೆ ಪರಿಶೀಲನೆಗೆ ಸಿದ್ಧತೆ ನಡೆಸುತ್ತಿದೆ.
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಬಳ್ಳಾರಿ, ವಿಜಯನಗರ, ರಾಯಚೂರು, ಯಾದಗಿರಿ ಮತ್ತು ಕೊಪ್ಪಳ ಹಾಗೂ ಬಿಬಿಎಂಪಿ ವ್ಯಾಾಪ್ತಿಯಲ್ಲಿನ ಬೆಂಗಳೂರು ದಕ್ಷಿಣ ಮತ್ತು ಉತ್ತರ ಜಿಲ್ಲೆಗಳ ನೇಮಕ ಪ್ರಕ್ರಿಯೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
undefined
ಪ್ರಾಥಮಿಕ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು: ಹೈಕೋರ್ಟ್ ಮಹತ್ವದ ಆದೇಶ
ಹೀಗಾಗಿ ಉಳಿದ 26 ಜಿಲ್ಲೆಗಳ ನೇಮಕ ಪ್ರಕ್ರಿಯೆಯನ್ನು ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ 26 ಜಿಲ್ಲೆಗಳ 1:1 ಅಂತಿಮ ಪಟ್ಟಿಯಲ್ಲಿ ಆಯ್ಕೆ ಆಗಿರುವ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳ ವೈದ್ಯಕೀಯ ಪ್ರಮಾಣ ಪತ್ರ, ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ, ಸಿಂಧುತ್ವ ಗ್ರಾಮೀಣ ಪತ್ರ, ಗ್ರಾಮೀಣ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಪ್ರಮಾಣ ಪತ್ರ, ಮಾಜಿ ಸೈನಿಕರ ಪ್ರಮಾಣ ಪತ್ರ, ಅಂಗವಿಕಲ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ ಸೇರಿದಂತೆ ಸಂಬಂಧಿಸಿದ ಎಲ್ಲ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರ, ಸೇವಾನಿರತ ಶಿಕ್ಷಕರು ಸಲ್ಲಿಸಿರುವ ನಿರಾಪೇಕ್ಷಣ ಪ್ರಮಾಣ ಪತ್ರದ ನೈಜತ್ವ ಪರಿಶೀಲನೆ ನಡೆಯಲಿದೆ.
ಈ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖೆಯು ಮಾರ್ಚ್ 8 ರಂದು ಶಿಕ್ಷಕರ ನೇಮಕಾತಿಯ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅಂತಿಮ ಪಟ್ಟಿಯಲ್ಲಿ 13,351 ಅಭ್ಯರ್ಥಿಗಳಿದ್ದು ಈ ಪೈಕಿ 4,194 ಮಂದಿ ಕಲ್ಯಾಣ ಕರ್ನಾಟಕ ಭಾಗದವರಾಗಿದ್ದಾರೆ.