
ಬೆಂಗಳೂರು (ಜು.20) : ಚಂದ್ರಯಾಣ 3.0 ಯೋಜನೆಗೆ ‘ತಿರುಪತಿ ನಾಮ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಉಪನ್ಯಾಸಕ ಹುಲಿಕುಂಟೆ ಮೂರ್ತಿ ಅವರಿಗೆ ಪದವಿ ಪೂರ್ಣ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ದಲಿತ ಸಂಘಟನೆಯ ಕಾರ್ಯಕರ್ತರು ಆಗಿರುವ ಮೂರ್ತಿ, ಮಲ್ಲೇಶ್ವರದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿದ್ದು ಚಂದ್ರಯಾನ 3.0 ಯೋಜನೆ ವಿಫಲವಾಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.
ಇದಕ್ಕೆ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಬಿಜೆಪಿ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದನ್ನು ಗಮನಿಸಿದ ಶಿಕ್ಷಣ ಇಲಾಖೆ ಉಪನ್ಯಾಸಕನಿಗೆ ನೋಟಿಸ್ ನೀಡಿದೆ. ವಿವರಣೆ ನೀಡುವಂತೆ ಮೂರ್ತಿ ಅವರಿಗೆ ನೋಟಿಸ್ ನೀಡಲಾಗಿದೆ. ವಿವರಣೆ ನೀಡಿದ ಬಳಿಕ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಇಲಾಖೆ ತಿಳಿಸಿದೆ.
ಸದನವನ್ನು ತಾಜ್ ವೆಸ್ಟ್ ಆ್ಯಂಡ್ ಗೆ ಶಿಪ್ಟ್ ಮಾಡಿ ಎಂದ ಸುರೇಶ್ ಕುಮಾರ್, ನಕ್ಕ ಖಾದರ್ ಹೇಳಿದ್ದಿಷ್ಟು
ಮೂರ್ತಿ ಅವರ ಪೋಸ್ಟ್ ಗಮನಿಸಿದ್ದ ಮಾಜಿ ಶಿಕ್ಷಣ ಸಚಿವ,ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದು ಗಮನ ಸೆಳೆದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ,‘ಇಡೀ ದೇಶವೇ ಚಂದ್ರಯಾನದ ಬಗ್ಗೆ ಸಂಭ್ರಮ ಪಡುತ್ತಿರುವಾಗ, ಈ ಉಪನ್ಯಾಸಕ ಈ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಸರಿ ಅಲ್ಲ. ಇಂಥಹವರು ವಿದ್ಯಾರ್ಥಿಗಳಿಗೆ ಹೇಗೆ ತಾನೆ ಸ್ಫೂರ್ತಿಯಾಗುತ್ತಾರೆ? ಈ ಬಗ್ಗೆ ಸ್ಪಷ್ಟನೆ ಕೇಳಲಾಗುವುದು’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ