
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪ್ರಿಪರೇಟರಿ–1 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ, ರಾಜ್ಯ ಶಾಲಾ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಂದಿನ ಪ್ರಿಪರೇಟರಿ–2 ಮತ್ತು ಪ್ರಿಪರೇಟರಿ–3 ಪರೀಕ್ಷೆಗಳಿಗಾಗಿ ಕಠಿಣ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಸೋರಿಕೆ ಅಥವಾ ಗೌಪ್ಯತಾ ಉಲ್ಲಂಘನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಇಲಾಖೆ ಸ್ಪಷ್ಟಪಡಿಸಿದೆ.
ಪ್ರಿಪರೇಟರಿ ಪರೀಕ್ಷೆಗಳ ನಿರ್ವಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾ ಉಪನಿರ್ದೇಶಕರು (DDPI) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು (BEO) ಗಳಿಗೆ ವಹಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ಅಥವಾ ಪ್ರಶ್ನೆಪತ್ರಿಕೆ ಸೋರಿಕೆ ಕಂಡುಬಂದರೆ, ಸಂಬಂಧಿಸಿದವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಆಯಾ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.
ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಮುಖ್ಯೋಪಾಧ್ಯಾಯರು ಮಾತ್ರ ಖುದ್ದಾಗಿ ಡೌನ್‌ಲೋಡ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ. ಶಾಲಾ ಕೋಡ್‌ನ ವಾಟರ್‌ಮಾರ್ಕ್ ಹೊಂದಿರುವ ಪ್ರಶ್ನೆಪತ್ರಿಕೆಗಳನ್ನೇ ಡೌನ್‌ಲೋಡ್ ಮಾಡಿ ಬಳಸಬೇಕು. ಪ್ರಶ್ನೆಪತ್ರಿಕೆಯ ಗೌಪ್ಯತೆ ಕಾಪಾಡುವುದು ಕಡ್ಡಾಯವಾಗಿದ್ದು, ಯಾವುದೇ ಹಂತದಲ್ಲೂ ಸೋರಿಕೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಆದೇಶಿಸಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಡಯಟ್ ಪ್ರಾಂಶುಪಾಲರು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಲಾಗಿದ್ದು, ಪ್ರಶ್ನೆಪತ್ರಿಕೆಗಳ ಡೌನ್‌ಲೋಡ್, ಮುದ್ರಣ ಮತ್ತು ಪ್ಯಾಕಿಂಗ್ ಪ್ರಕ್ರಿಯೆಗಳನ್ನು ನಿಗದಿತ ಸಮಯ ಮತ್ತು ನಿಯಮಾನುಸಾರ ನಡೆಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಬೇಕು.
ಶಾಲಾ ಶಿಕ್ಷಣ ಇಲಾಖೆ ಪರೀಕ್ಷಾ ದಿನದ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ:
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮೊಬೈಲ್ ಫೋನ್ ತರಲು ಸಂಪೂರ್ಣ ನಿಷೇಧಿಸಲಾಗಿದೆ. ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ವಾಟ್ಸ್‌ಆಪ್, ಯೂಟ್ಯೂಬ್, ಇನ್‌ಸ್ಟಾಗ್ರಾಂ ಅಥವಾ ಇತರೆ ಯಾವುದೇ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಅಥವಾ ಪ್ರಚಾರ ಮಾಡಿದರೆ, ಅಂತಹ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಶ್ನೆಪತ್ರಿಕೆಯ ಗೌಪ್ಯತೆ ಕಾಪಾಡಲು ವಿಫಲವಾದ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಲಿದೆ:
ಪ್ರಿಪರೇಟರಿ–2 ಮತ್ತು 3 ಪರೀಕ್ಷೆಗಳು ಶಿಸ್ತುಬದ್ಧವಾಗಿ, ಪಾರದರ್ಶಕವಾಗಿ ಹಾಗೂ ಯಾವುದೇ ವಿವಾದಗಳಿಲ್ಲದೆ ನಡೆಯುವಂತೆ ಎಲ್ಲಾ ಅಧಿಕಾರಿಗಳು, ಶಾಲಾ ಆಡಳಿತ ಮತ್ತು ಶಿಕ್ಷಕರು ಸಹಕರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ