ಕಾಂಗ್ರೆಸ್ ಗ್ಯಾರಂಟಿ ಬಳಿಕ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಚಾಲನೆ!

Published : Aug 18, 2023, 10:46 AM IST
ಕಾಂಗ್ರೆಸ್ ಗ್ಯಾರಂಟಿ ಬಳಿಕ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಚಾಲನೆ!

ಸಾರಾಂಶ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಳಿಕ ಇದೀಗ   ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಮುಂದಾಗಿದೆ. ಇಂದಿನಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಯೋಜನೆಗೆ ಅಧಿಕೃತವಾಗಿ ಚಾಲನೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ(ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ.

ಮಂಡ್ಯ (ಆ.18) ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಬಳಿಕ ಇದೀಗ   ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಮುಂದಾಗಿದೆ. ಇಂದಿನಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಯೋಜನೆಗೆ ಅಧಿಕೃತವಾಗಿ ಚಾಲನೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ(ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ.

ಇಂದು ಮಂಡ್ಯ ಜಿಲ್ಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರವಾಸ ಕೈಗೊಂಡಿದ್ದು, ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮದಲ್ಲಿ ಮೊಟ್ಟೆ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ಬಳಿಕ ಮಂಡ್ಯದ ಜಿಪಂ ಕಾವೇರಿ ಸಭಾಂಗಣದಲ್ಲಿ ಸಭೆ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಲಿರುವ ಸಚಿವರು. ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಕುರಿತ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.

ಸುವರ್ಣ ನ್ಯೂಸ್ ಇಂಪ್ಯಾಕ್ಟ್: ಅಂಗನವಾಡಿಗೆ ಕೊಳೆತ ಮೊಟ್ಟೆ ಸರಬರಾಜು ಮಾಡಿದ ಗುತ್ತಿಗೆದಾರ ಕಪ್ಪುಪಟ್ಟಿಗೆ ಸೇರ್ಪಡೆ

ಸಿಎಸ್‌ಆರ್‌ ನಿಧಿ ಹಣ ಗ್ರಾಮೀಣ ಭಾಗದಲ್ಲಿ ಬಳಕೆಗೆ ಒತ್ತು: ಡಿಕೆಶಿ

ಖಾಸಗಿ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್‌)ಬಳಸಿಕೊಂಡು ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸುವ ಸಂಬಂಧ ಕ್ರಿಯಾ ಯೋಜನೆ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೂಚಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಕಾರ್ಪೊರೇಟ್‌ ಕಂಪನಿಗಳು ನೀಡುವ ಸಿಎಸ್‌ಆರ್‌ ನಿಧಿ ಸಂಬಂಧ ಚರ್ಚಿಸಲು ಬುಧವಾರ ಸರ್ವ ಶಿಕ್ಷಣ ಅಭಿಯಾನ ಕಚೇರಿಯಲ್ಲಿ ಕರೆದಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಕ್ಕಳ ಶಿಕ್ಷಣಕ್ಕಾಗಿ ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಗಳಿಗೆ ಜನರು ವಲಸೆ ಬರುವುದನ್ನು ತಡೆಗಟ್ಟಲು ಶಿಕ್ಷಣದ ಗುಣಮಟ್ಟಉತ್ತಮಗೊಳಿಸಬೇಕಿದೆ. ಪ್ರತಿ ಎರಡು ಅಥವಾ ಮೂರು ಗ್ರಾಮ ಪಂಚಾಯ್ತಿಗೊಂದರಂತೆ ಸರ್ಕಾರಿ ಶಾಲೆಯನ್ನು ಗುರುತಿಸಿ ಖಾಸಗಿ ಕಂಪನಿಗಳ ಸಿಎಸ್‌ಆರ್‌ ನಿಧಿಯಿಂದ ಕಂಪ್ಯೂಟರ್‌, ಪ್ರಯೋಗಾಲಯ ಸೇರಿದಂತೆ ಅಗತ್ಯ ಸೌಲಭ್ಯ ಪಡೆದುಕೊಳ್ಳಬೇಕು. ಇದಕ್ಕಾಗಿ ಸಂಬಂಧಪಟ್ಟಇಲಾಖೆಗಳನ್ನು ಒಳಗೊಂಡ ಒಂದು ಸಮಿತಿ ರಚಿಸಬೇಕು ಎಂದು ತಿಳಿಸಿದರು.

Karnataka Budget 2023: ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ, 10ನೇ ತರಗತಿವರೆಗೆ ವಿಸ್ತರಣೆ

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಪ್ರದೇಶಕ್ಕೆ ಮಾತ್ರ ಸಿಎಸ್‌ಆರ್‌ ನಿಧಿ ಬಳಕೆಯಾಗುತ್ತಿದ್ದು ಗ್ರಾಮೀಣ ಭಾಗದ ಶಾಲೆಗಳನ್ನು ಉನ್ನತೀಕರಿಸಲು ನಿಧಿಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಯೋಜನೆ ರೂಪಿಸಲಾಗುವುದು. ಅತ್ಯುತ್ತಮ ಶಿಕ್ಷಣ ಸಂಸ್ಥೆಗಳು ಸರ್ಕಾರಿ ಶಾಲೆಗಳನ್ನು ದತ್ತುಪಡೆದು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ ಕುಮಾರ್‌ ಸಿಂಗ್‌ ಮತ್ತಿತರರು ಪಾಲ್ಗೊಂಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ