ಸಭೆ ಮತ್ತು ವಿಡಿಯೋ ಸಂವಾದಗಳನ್ನು ತಕ್ಷಣ ಸ್ಥಗಿತಗೊಳಿಸಬೇಕು. ಅಲ್ಲದೇ, ಈಗಾಗಲೇ ಸಭೆಗಳು ನಿಗದಿಯಾಗಿದ್ದರೆ, ಅವುಗಳನ್ನು ಮುಂದೂಡಬೇಕು. ಒಂದು ವೇಳೆ ತರ್ತು ಅಗತ್ಯವಿದ್ದರೆ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅನುಮತಿ ಪಡೆದುಕೊಂಡು ಸಭೆ ಮತ್ತು ವಿಡಿಯೋ ಸಂವಾದ ನಡೆಸಬೇಕು ಎಂದು ಸೂಚಿಸಿದ ಚುನಾವಣಾ ಆಯೋಗ
ಬೆಂಗಳೂರು(ಮೇ.28): ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರದ ವಿವಿಧ ಉನ್ನತ ಅಧಿಕಾರಿಗಳು ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಸಭೆ ಮತ್ತು ವಿಡಿಯೋ ಸಂವಾದಗಳನ್ನು ನಡೆಸಿರುವುದಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಗರಂ ಆಗಿದ್ದು, ತುರ್ತು ವಿಚಾರಗಳನ್ನು ಹೊರತುಪಡಿಸಿ ಇನ್ನುಳಿದ ವಿಚಾರಗಳ ಕುರಿತು ಸಭೆ ಮತ್ತು ವಿಡಿಯೋ ಸಂವಾದಗಳನ್ನು ನಡೆಸಬಾರದು ಎಂದು ತಾಕೀತು ಮಾಡಿದ್ದಾರೆ.
ಈ ಸಂಬಂಧ ಸೋಮವಾರ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಪತ್ರ ಬರೆದಿದ್ದಾರೆ.
ಲೋಕಸಭಾ ಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆ ಸಂಬಂಧ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಿರುವಾಗ ಕೆಲವು ಇಲಾಖೆಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಇತರೆ ಉನ್ನತ ಅಧಿಕಾರಿಗಳು ಸಭೆ ಮತ್ತು ವಿಡಿಯೋ ಸಂವಾದ ನಡೆಸಿದ್ದಾರೆ. ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ಮಾಹಿತಿ ಲಭ್ಯವಾಗಿದೆ. ಇದರಿಂದ ಚುನಾವಣಾ ಕಾರ್ಯ ನಿರ್ವಹಣೆಗೆ ಅಡಚಣೆಯಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
undefined
ಸಚಿವರಿಗೆ ಉಪಮುಖ್ಯಮಂತ್ರಿ ಡಿಕೆಶಿ ಔತಣಕೂಟ
ಸಭೆ ಮತ್ತು ವಿಡಿಯೋ ಸಂವಾದಗಳನ್ನು ತಕ್ಷಣ ಸ್ಥಗಿತಗೊಳಿಸಬೇಕು. ಅಲ್ಲದೇ, ಈಗಾಗಲೇ ಸಭೆಗಳು ನಿಗದಿಯಾಗಿದ್ದರೆ, ಅವುಗಳನ್ನು ಮುಂದೂಡಬೇಕು. ಒಂದು ವೇಳೆ ತರ್ತು ಅಗತ್ಯವಿದ್ದರೆ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅನುಮತಿ ಪಡೆದುಕೊಂಡು ಸಭೆ ಮತ್ತು ವಿಡಿಯೋ ಸಂವಾದ ನಡೆಸಬೇಕು ಎಂದು ಸೂಚಿಸಿದ್ದಾರೆ.