
ಮಾಗಡಿ (ಮಾ.21): ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ದಿನದಿಂದ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಿದೆ ಮತ್ತು ಚುನಾವಣೆಯಲ್ಲಿ ಮತದಾರರಿಗೆ ಹಣ, ಉಡುಗೊರೆಗಳ ಕೊಡುವ ಮೂಲಕ ಮತದಾರರಿಗೆ ಲಂಚ ನೀಡುವುದನ್ನು ತಡೆಯಲು ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಕಟ್ಟೆಚ್ಚರವಹಿಸಿದ್ದಾರೆ.
ಚುನಾವಣಾ ಅಭ್ಯರ್ಥಿ ಪರವಾಗಿ ಮತ ನೀಡುವಂತೆ ಮತದಾರರಿಗೆ ಹಂಚಲು ಕಾಂಗ್ರೆಸ್ ಮುಖಂಡನ ಕುಕ್ಕರ್, ಡಿನ್ನರ್ ಸೆಟ್‌ಗಳು ಇಟ್ಟಿರುವ ಖಚಿತ ಮಾಹಿತಿ ಮೇರೆಗೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಒಟ್ಟು 140 ಡಿನ್ನರ್ ಸೆಟ್‌ಗಳು ವಶಕ್ಕೆ ಪಡೆಯಲಾಗಿದೆ.
ಮಾಗಡಿ ತಾಲೂಕು ತಟವಾಳು ಗ್ರಾಮದ ಕಾಂಗ್ರೆಸ್ ಮುಖಂಡ ಪ್ರಕಾಶ ಎಂಬುವವರ ಮನೆಯಲ್ಲಿ ಮತದಾರರಿಗೆ ಹಂಚಲು ಕುಕ್ಕರ್, ಡಿನ್ನರ್ ಸೆಟ್‌ಗಳನ್ನು ಇಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು. ಇಂದು ಮನೆಯ ಮೇಲೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡ ಅಧಿಕಾರಿಗಳು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ