
ಬೆಂಗಳೂರು (ಏ.13): ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಏರ್ತಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ರಣಕಹಳೆ ಊದಲು ಸಿದ್ದರಾಗ್ತಿದ್ದಾರೆ. ಇನ್ನು ಕೆಲವು ಕಡೆ ಬಂಡಾಯದ ಕೂಗು ಕೂಡ ಇದೆ. ಈ ನಡುವೆ ಇಂದು ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 221 ನಾಮಪತ್ರ ಸಲ್ಲಿಕೆಯಾಗಿದೆ. ಚುನಾವಣಾ ಆಯೋಗದಿಂದ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ.
ಮೊದಲ ದಿನ ಸಲ್ಲಿಕೆಯಾದ ನಾಮಪತ್ರಗಳ ವಿವರ ಇಂತಿದೆ.
ಪುರುಷರು - 197
ಮಹಿಳೆಯರು - 24
ಒಟ್ಟು - 221
ಅಂದು ಭವಾನಿ ರೇವಣ್ಣಗಾಗಿ ಇಂದು ವೈಎಸ್‌ವಿ ದತ್ತಾಗಾಗಿ, ದಳಪತಿಗಳ ನಡುವೆ ಕಿಚ್ಚು!
ಪಕ್ಷಗಳಿಂದ ಅನುಮೋದಿಸ್ಪಟ್ಟ ನಾಮಪತ್ರಗಳು
ಬಿಜೆಪಿ - 27
ಕಾಂಗ್ರೆಸ್ - 26
ಎಎಪಿ - 10
ಬಿಎಸ್‌ಪಿ - 1
ಸಿಪಿಐಎಂ - 0
ಜೆಡಿಎಸ್ - 12
ಇನ್ನು
ಪಕ್ಷೇತರ - 45
ನೋಂದಣಿಯಾದ ಗುರುತಿಸಲ್ಪಡದ ಪಕ್ಷಗಳು - 100
ಟಿಕೆಟ್ ಘೋಷಣೆಗೂ ಮೊದಲೇ ನಾಮಪತ್ರ ಸಲ್ಲಿಸಿದ ಮಾಜಿ ಮೇಯರ್ ಗಂಗಾಬಿಕೆ!
ಏಪ್ರಿಲ್ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ