
ಬೆಂಗಳೂರು (ಡಿ.7) ವಿಶ್ವವಿಖ್ಯಾತ, ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮಕ್ಕೆ ಇದೇ ಡಿಸೆಂಬರ್ 11 ರಿಂದ ವಿದ್ಯುತ್ ರೈಲು ಆರಂಭಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ದೇವನಹಳ್ಳಿಯಿಂದ ಚಿಕ್ಕಬಳ್ಳಾಪುರಕ್ಕೆ ವಿಮಾಣ ನಿಲ್ದಾಣ ಮಾರ್ಗದಲ್ಲಿ ಕಾರ್ಯನಿರ್ವಹಿಸಲಿರುವ ರೈಲು. ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲುಗಳನ್ನು ವಿಸ್ತರಿಸಲು ಇಲಾಖೆ ನಿರ್ಧರಿಸಿದೆ.
6531/06532 ಬೆಂಗಳೂರು ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ-ಕಂಟೋನ್ಮೆಂಟ್, 06535/06583 ಬೆಂಗಳೂರು, ಕಂಟೋನ್ಮೆಂಟ್-ಚಿಕ್ಕಬಳ್ಳಾಪುರ, 06593/06594 ಯಶವಂತಪುರ-ಚಿಕ್ಕಬಳ್ಳಾಪುರ-ಯಶವಂತಪುರ ರೈಲುಗಳು ಸಂಚರಿಸಲಿವೆ, ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯನ್ನು ನೋಡಲ ವಿದ್ಯಾರ್ಥಿಗಳು ಸೇರಿದಂತೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಚಿಕ್ಕಬಳ್ಳಾಪುರಕ್ಕೆ ರೈಲು ಸೇವೆಗಳನ್ನು ವಿಸ್ತರಿಸುವುದರಿಂದ ಪ್ರಯೋಜನವಾಗಲಿದೆ
ನಂದಿ ಬೆಟ್ಟಕ್ಕೆ ಹರಿದು ಬಂದ ಪ್ರವಾಸಿಗರ ದಂಡು: ಟ್ರಾಫಿಕ್ ಕಿರಿಕಿರಿ
ಹೊಸ ವರ್ಷಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಳ:
ಹೊಸವರ್ಷಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಪ್ರತಿವರ್ಷ ಹೊಸವರ್ಷಾಚಾರಣೆಗೆ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು. ಈ ವರ್ಷ ರೈಲ್ವೆ ಇಲಾಖೆ ಎಲೆಕ್ಟ್ರಿಕ್ ರೈಲು ಸೇವೆ ಒದಗಿಸಿರುವ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ