ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್‌ಗೆ 50ರಿಂದ 60 ಪೈಸೆಯಷ್ಟು ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ.
ಬೆಂಗಳೂರು (ಜ. 5) ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೇರಿದಂತೆ ರಾಜ್ಯದ ಐದೂ ಎಸ್ಕಾಂಗಳು ಪ್ರತಿ ಯುನಿಟ್‌ಗೆ 50ರಿಂದ 60 ಪೈಸೆಯಷ್ಟು ದರ ಏರಿಕೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ.
ಯುನಿಟ್‌ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಬೆಸ್ಕಾಂ ಪ್ರಸ್ತಾವನೆ ಸಲ್ಲಿಸಿದ್ದು ಕೆಇಆರ್‌ಸಿಯು ಪರಿಶೀಲನೆ ನಡೆಸಿ ಬೆಸ್ಕಾಂ ಹಾಗೂ ಗ್ರಾಹಕರು ಇಬ್ಬರಿಗೂ ಹೊರೆಯಾಗದ ರೀತಿಯಲ್ಲಿ ಸದ್ಯದಲ್ಲೇ ದರ ಪರಿಷ್ಕರಣೆ ಮಾಡಲಿದೆ. ಪರಿಷ್ಕೃತ ದರವು 2024ರ ಏ.1ರಿಂದ ಅನ್ವಯವಾಗಲಿದೆ ಎಂದು ಮೂಲಗಳು ತಿಳಿಸಿವೆ.
undefined
ನಾನೂ ಸಹ ರಾಮಭಕ್ತ, ರಾಮೋತ್ಸವ ಮಾಡುತ್ತೇನೆ: ಇಕ್ಬಾಲ್ ಹುಸೇನ್
ಇತರೆ ಎಸ್ಕಾಂಗಳಿಂದಲೂ ದರ ಪರಿಷ್ಕರಣೆಗೆ ಪ್ರಸ್ತಾಪ:
ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ), ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ), ಕಲಬುರಗಿ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸೆಸ್ಕ್-ಮೈಸೂರು) ಸಹ ವಿದ್ಯುತ್ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ.
ಕೆಇಆರ್‌ಸಿ ಮೂಲಗಳ ಪ್ರಕಾರ ನಾಲ್ಕೂ ಎಸ್ಕಾಂಗಳು ಪ್ರತಿ ಯುನಿಟ್‌ಗೆ 50 ರಿಂದ 60 ಪೈಸೆಯಷ್ಟು ವಿದ್ಯುತ್ ದರ ಪರಿಷ್ಕರಣೆಗೆ ಮನವಿ ಮಾಡಿವೆ ಎಂದು ತಿಳಿದುಬಂದಿದೆ.
ಕಲ್ಲಿದ್ದಲು ಖರೀದಿ, ವಿದ್ಯುತ್ ಖರೀದಿ ಹಾಗೂ ವಿದ್ಯುತ್ ಸರಬರಾಜು ವೆಚ್ಚ ಸೇರಿದಂತೆ ಹಲವು ಕಾರಣಗಳಿಂದ ನಿರ್ವಹಣೆಗೆ ಹೊರೆಯಾಗುತ್ತಿದೆ. ಹೀಗಾಗಿ ನಷ್ಟ ಸರಿತೂಗಿಸಲು 2024-25ನೇ ಸಾಲಿಗೆ ವಿದ್ಯುತ್ ದರ ಪರಿಷ್ಕರಣೆ ಮಾಡುವಂತೆ ಕೆಇಆರ್‌ಸಿಗೆ ಮನವಿ ಮಾಡಿವೆ.
ವಿಜಯಪುರ: ದಲಿತರ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಿದ ಪೇಜಾವರ ಶ್ರೀಗಳು
ಎಸ್ಕಾಂಗಳು ಪ್ರತಿ ವರ್ಷದಂತೆ ಈ ವರ್ಷವೂ ದರ ಪರಿಷ್ಕರಣೆ ಪ್ರಸ್ತಾವನೆ ಸಲ್ಲಿಸಿವೆ. ಗೃಹ ಜ್ಯೋತಿ ಯೋಜನೆ ಜಾರಿ ಬಳಿಕ ಮೊದಲ ಬಾರಿಗೆ ಎಸ್ಕಾಂಗಳು ಬೆಲೆ ಏರಿಕೆ ಪ್ರಸ್ತಾಪ ಮಾಡಿವೆ. ದರ ಪರಿಷ್ಕರಣೆಯಿಂದ ಗೃಹ ಜ್ಯೋತಿ ಗ್ರಾಹಕರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ ಗೃಹಜ್ಯೋತಿ ಯೋಜನೆಗೆ ಅರ್ಹತೆ ಪಡೆಯದ ಗೃಹ ಬಳಕೆದಾರರು ಹಾಗೂ ವಾಣಿಜ್ಯ ಗ್ರಾಹಕರಿಗೆ ಹೊರೆಯಾಗಲಿದೆ ಎಂದು ತಿಳಿದುಬಂದಿದೆ.