ಮಲೆನಾಡಲ್ಲಿ ಆನೆ ಹಾವಳಿ ತಡೆಗೆ ಆನೆ ವಿಹಾರಧಾಮ: ದೇಶದಲ್ಲೇ ಮೊದಲ ಯೋಜನೆ

Published : Jan 04, 2025, 07:25 AM IST
ಮಲೆನಾಡಲ್ಲಿ ಆನೆ ಹಾವಳಿ ತಡೆಗೆ ಆನೆ ವಿಹಾರಧಾಮ: ದೇಶದಲ್ಲೇ ಮೊದಲ ಯೋಜನೆ

ಸಾರಾಂಶ

ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲೆ ಜಿಲ್ಲೆ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚಿನ ಆನೆಗಳು ಕಾಡಂಚಿನ ಗ್ರಾಮಗಳಿಗೆ ಪದೇ ಪದೆ ದಾಳಿ ಮಾಡಿ ಬೆಳೆ ಮತ್ತು ಪ್ರಾಣ ಹಾನಿ ಮಾಡುತ್ತಿವೆ. ಇದರಿಂದಾಗಿ ಆ ಭಾಗದ ರೈತರು ಸಮಸ್ಯೆಗೊಳಗಾಗಿದ್ದು, ಆನೆಗಳ ದಾಳಿ ತಪ್ಪಿಸು ವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸುತ್ತಿ ದ್ದಾರೆ. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಆನೆಗಳ ವಿಹಾರಧಾಮ ಯೋಜನೆ ಅನುಷ್ಠಾನಕ್ಕೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. 

ಬೆಂಗಳೂರು(ಜ.04): ಮಲೆನಾಡು ಭಾಗದ ಜಿಲ್ಲೆಗಳಲ್ಲಿನ ಆನೆಗಳ ಹಾವಳಿತಡೆಗೆಭದ್ರಾ ವನ್ಯ ಜೀವಿಸಂರಕ್ಷಿತಾರಣ್ಯ ವ್ಯಾಪ್ತಿಯ 2 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಯೋಜನೆ ರೂಪಿಸುತ್ತಿದ್ದು, 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಯೋಜನೆ ಘೋಷಿಸುವ ಸಾಧ್ಯತೆಗಳಿವೆ. 

ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲೆ ಜಿಲ್ಲೆ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚಿನ ಆನೆಗಳು ಕಾಡಂಚಿನ ಗ್ರಾಮಗಳಿಗೆ ಪದೇ ಪದೆ ದಾಳಿ ಮಾಡಿ ಬೆಳೆ ಮತ್ತು ಪ್ರಾಣ ಹಾನಿ ಮಾಡುತ್ತಿವೆ. ಇದರಿಂದಾಗಿ ಆ ಭಾಗದ ರೈತರು ಸಮಸ್ಯೆಗೊಳಗಾಗಿದ್ದು, ಆನೆಗಳ ದಾಳಿ ತಪ್ಪಿಸು ವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸುತ್ತಿ ದ್ದಾರೆ. ಈ ಸಮಸ್ಯೆಗೆ ಪರಿಹಾರ ಎನ್ನುವಂತೆ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಯೋಜನೆ ಅನುಷ್ಠಾನಕ್ಕೆ ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ಯೋಜನೆಯಂತೆ ಭದ್ರಾ ವನ್ಯಜೀವಿ ಸಂರಕ್ಷಿತಾರಣ್ಯದ 2 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದಲ್ಲಿ ಆನೆಗಳ ವಿಹಾರಧಾಮ ಅನುಷ್ಠಾನಕ್ಕೆ ನಿರ್ಧರಿಸಲಾಗಿದೆ.

ಪ್ರವಾಸಿಗರಿದ್ದಾಗಲೇ ಸಫಾರಿ ವಾಹನವನ್ನು ಮೇಲೆತ್ತಿದ್ದ ಒಂಟಿ ಸಲಗ: ವೀಡಿಯೋ ವೈರಲ್

ದೇಶದಲ್ಲೇ ಮೊದಲ ಯೋಜನೆ:

ಆನೆಗಳ ಹಾವಳಿ ತಡೆಗಾಗಿ ದೇಶದಲ್ಲೇ ಮೊದಲ ಬಾರಿ ರಾಜ್ಯದಲ್ಲಿ ಆನೆಗಳ ವಿಹಾರಧಾಮ ನಿರ್ಮಿಸಲಾಗುತ್ತಿದೆ. ಈವರೆಗೆ ಆನೆ ಹಾವಳಿ ತಡೆಗೆ ಕಾಡಂಚಿನಲ್ಲಿ ಸೋಲಾರ್ ಫೆನ್ಸಿಂಗ್, ರೈಲ್ವೆ ಬ್ಯಾರಿಕೇಡ್ ಅಳವಡಿಕೆ ಹಾಗೂ ಟ್ರಂಚ್‌ಗಳನ್ನು ನಿರ್ಮಿಸಲಾಗುತ್ತಿದೆ. ಆದರೆ, ಆನೆ-ವನ್ಯಜೀವಿ ಸಂಘರ್ಷ ತಡೆಗಾಗಿ 2 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶದ ಸುತ್ತಲೂ ಸೋಲಾರ್ ಫೆನ್ಸಿಂಗ್, ರೈಲ್ವೆ ಬ್ಯಾರಿಕೇಡ್‌ಗಳ ಅಳವಡಿಕೆ ಹಾಗೂ ಟ್ರಂಚ್‌ಗಳನ್ನು ಮಾಡಲಾಗುತ್ತದೆ. ಅದರ ಜತೆಗೆ ಆನೆಗಳಿಗೆ ಇಷ್ಟವಾದ ಬಿದಿರನ್ನು ಗುಂಪು ಗುಂಪಾಗಿ ಬೆಳೆಸಲೂ ಯೋಜಿಸಲಾಗಿದೆ. ಆ ಮೂಲಕ ನೈಸರ್ಗಿಕ ಬೇಲಿ ನಿರ್ಮಾಣ ಮಾಡು ವಯೋಜನೆಯೂ ಇದೆ. ಅದರ ಜತೆಗೆ ಅರಣ್ಯ ಪ್ರದೇಶದಲ್ಲಿ ಹಲಸು ಸಸಿಗಳನ್ನು ನೆಡುವುದು, ಹುಲ್ಲುಗಾವಲು ಬೆಳೆಸುವ ಮೂಲಕ ಆನೆ ಗಳನ್ನು 2 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶ ದಿಂದ" ಹೊರಬರದಂತೆ ನೋಡಿಕೊಳ್ಳಲಾಗುತ್ತದೆ. 

ಚಿಕ್ಕಮಗಳೂರಲ್ಲಿ ನಿಲ್ಲದ ಕಾಡಾನೆಗಳ ಮರಣ ಮೃದಂಗ: ವಿದ್ಯುತ್ ತಂತಿ ತುಳಿದು ಒಂಟಿ ಸಲಗ ಸಾವು!

200ಕ್ಕೂ ಹೆಚ್ಚಿನ ಆನೆಗಳು ಆನೆ ವಿಹಾರ ಧಾಮಕ್ಕೆ: 

ಅರಣ್ಯ ಇಲಾಖೆ ಗುರುತಿಸಿರುವಂತೆ ಕೊಡಗು ಜಿಲ್ಲೆಯಲ್ಲಿ 120, ಹಾಸನದಲ್ಲಿ 63 ಹಾಗೂ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 15ರಿಂದ 20 ಆನೆಗಳು ಪದೇ ಪದೆ ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುತ್ತಿವೆ. ಆ ಆನೆಗಳನ್ನು ಹಂತಹಂತವಾಗಿ ಹಿಡಿದು ಆನೆ ವಿಹಾರಧಾಮಕ್ಕೆ ಬಿಡಲಾಗುತ್ತದೆ. ಅದರಿಂದ ಆನೆಗಳು ಮತ್ತೆ ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುವುದನ್ನು ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ. 

ರಾಜ್ಯ ಬಜೆಟ್‌ನಲ್ಲಿ ಘೋಷಣೆ?: 

ಆನೆ ವಿಹಾರಧಾಮ ಯೋಜನೆಯ ರೂಪುರೇಷೆ ಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸಿದ್ಧ ಪಡಿಸುತ್ತಿದ್ದಾರೆ. ಸದ್ಯದ ಅಂದಾಜಿನಂತೆ ಯೋಜನೆಗೆ 100 ಕೋಟಿ ರು. ವೆಚ್ಚವಾಗಲಿದೆ. 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಯೋಜನೆ ಘೋಷಿಸಿ, ಅಗತ್ಯ ಅನುದಾನ ಮೀಸಲಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಶೀಘ್ರ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ. ಜತೆಗೆ ಮುಖ್ಯಮಂತ್ರಿಗಳ ಜತೆ ನಡೆ ಯಲಿರುವ ಬಜೆಟ್ ಮುಂಚಿನ ಸಭೆಯಲ್ಲೂ ಈ ಬಗ್ಗೆ ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: BBK 12 - ಸ್ಪಂದನಾ ಸೋಮಣ್ಣ ಮುಂದೆ ರಜತ್‌ ಅಸಭ್ಯ ವರ್ತನೆ ಮಾಡಿದ್ರು - ಧ್ರುವಂತ್‌ ವಿರುದ್ಧ ರಜತ್‌ ಆರೋಪ