ರಾಜ್ಯದಲ್ಲಿ 'ಸ್ಪೋರ್ಟ್ಸ್‌ ಸಿಟಿ' ನಿರ್ಮಾಣಕ್ಕೆ ಒತ್ತು: ಗೃಹ ಸಚಿವ ಡಾ.ಜಿ.ಪರಮೇಶ್ವರ

By Sathish Kumar KHFirst Published Dec 26, 2023, 10:51 PM IST
Highlights

ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ 'ಸ್ಪೋರ್ಟ್ಸ್ ಸಿಟಿ' ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು.

ಬೆಂಗಳೂರು (ಡಿ.26): ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಎಪ್ಪತ್ತು ಎಕರೆ ವ್ಯಾಪ್ತಿಯ 'ಸ್ಪೋರ್ಟ್ಸ್ ಸಿಟಿ' ನಿರ್ಮಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದ್ದು, ಮುಂಬರುವ ದಿನಗಳಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

ರಾಜಭವನದ ಗಾಜಿನ ಮನೆಯಲ್ಲಿ ಮಂಗಳವಾರ ನಡೆದ ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ 2023ನೇ ಸಾಲಿನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾ ಅಭ್ಯಾಸ ನಡೆಸಿ, ರಾಜ್ಯಕ್ಕೆ ಮತ್ತು ದೇಶಕ್ಕೆ ಕೀರ್ತಿ ತಂದು ಕೊಡಬೇಕು. ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ  ಎಂದು ತಿಳಿಸಿದರು.

Latest Videos

ರೈತರ ಹಾಲು ಖರೀದಿ ದರ 4 ರೂ. ತಗ್ಗಿಸಿದ ಕೆಎಂಎಫ್: ಬರದ ನಡುವೆಯೂ ರೈತರಿಗೆ ಬರೆ ಎಳೆದ ಸರ್ಕಾರ!

ಆಸ್ಟ್ರೇಲಿಯಾ, ಅಮೆರಿಕ, ಚೀನಾ ದೇಶಗಳಲ್ಲಿ ಕ್ರೀಡಾ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ.ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದರೆ, ಯುವಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು. ಯುವಕರನ್ನು ಕ್ರೀಡಾ ಕ್ಷೇತ್ರಕ್ಕೆ ಸೆಳೆಯಲು ಪೊಲೀಸ್ ಇಲಾಖೆಯ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3ರಷ್ಟು ಮೀಸಲಾತಿ‌ ಕಲ್ಪಿಸಲಾಗಿದೆ. ಇದನ್ನು ರಾಜ್ಯದ ಎಲ್ಲ ಇಲಾಖೆಗಳ ನೇಮಕಾತಿಗೆ ಅನ್ವಯಿಸಲಾಗುವುದು ಎಂದರು. 

ಸುಸಜ್ಜಿತವಾದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 5 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ 15ಕ್ಕು ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ತುಮಕೂರಿನಲ್ಲಿ 58 ಕೋಟಿ ರೂ. ಅನುದಾನದಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು ಸರ್ಕಾರ ನಿರ್ಮಿಸಿದೆ. ಕಂಠೀರವ ಸ್ಟೇಡಿಯಂಗಿಂತ ಸುಸಜ್ಜಿತವಾಗಿದೆ. ಸುಮಾರು 800 ಅಥ್ಲೆಟಿಕ್‌ಗಳು ಭಾಗವಹಿಸಬಹುದು. ಇದೇ ಮಾದರಿಯ ಕ್ರೀಡಾಂಗಣಗಳನ್ನು ಬೇರೆ ಜಿಲ್ಲೆಗಳಲ್ಲಿಯು ನಿರ್ಮಿಸಲಾಗುವುದು ಎಂದು ಹೇಳಿದರು.

'ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ' ಹೇಳಿಕೆಗೆ ಕಲ್ಲಡ್ಕ ಪ್ರಭಾಕರ್ ವಿರುದ್ಧ ಎಫ್‌ಐಆರ್!

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವ ಬಿ.ನಾಗೇಂದ್ರ, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಗೋವಿಂದರಾಜು ಉಪಸ್ಥಿತರಿದ್ದರು.

click me!