
ಬೆಂಗಳೂರು(ಜ.18): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾದ ಪ್ರಕರಣ ಸಂಬಂಧ ಐದು ತಿಂಗಳಿಂದ ನಿರಂತರ ತನಿಖೆ ಕೈಗೊಂಡ ಜಾರಿ ನಿರ್ದೇಶನಾಲಯ (ಇ.ಡಿ.)ವು ಇದೀಗ 300 ಕೋಟಿ ರು. ಮೌಲ್ಯದ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿರುವ ಸ್ಥಿರಾಸ್ತಿಗಳು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ನೋಂದಣಿಯಾಗಿವೆ. ಮುಡಾದಿಂದ ಪಡೆದ ನಿವೇಶನಗಳನ್ನು ಭಾರಿ ಲಾಭಕ್ಕೆ ಮಾರಾಟ ಮಾಡಿ ಗಳಿಸಿದ ಹಣದಿಂದ ಸಂಪಾದಿಸಿದ ಆಸ್ತಿಗಳು ಇವಾಗಿವೆ ಎಂದು ತಿಳಿಸಿದೆ.
ಕಾಂಗ್ರೆಸ್ ಮುಖಂಡನಿಂದ ಸ್ನೇಹಮಯಿ ಕೃಷ್ಣಗೆ ಜೀವ ಬೆದರಿಕೆ; ರಕ್ಷಣೆ ಕೋರಿ ಮೋದಿ, ಅಮಿತ್ ಶಾಗೆ ಪತ್ರ!
ಸ್ನೇಹಮಯಿ ಕೃಷ್ಣ ದೂರು:
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಐದು ತಿಂಗಳ ಹಿಂದೆ ಸಲ್ಲಿಸಿದ ದೂರು ಮತ್ತು ಮೈಸೂರು ಲೋಕಾಯುಕ್ತ ಪೊಲೀಸರು ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇ.ಡಿ. ತನಿಖೆ ಕೈಗೊಂಡಿತ್ತು ಮುಡಾ ಕಚೇರಿ, ಏಜೆಂಟರು, ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ಜಪ್ತಿ ಮಾಡಿ ಪರಿಶೀಲನೆ ನಡೆಸಿತ್ತು. ಅಲ್ಲದೆ, ಸಿದ್ದರಾಮಯ್ಯ ಅವರ ಆಪ್ತರನ್ನು ಮತ್ತು ಮುಡಾದ ಹಿಂದಿನ ಹಿರಿಯ ಅಧಿಕಾರಿಗಳನ್ನು ತೀವ್ರ ವಿಚಾರಣೆಗೊಳಪಡಿಸಲಾಗಿತ್ತು. ಈ ವೇಳೆ ಲಭ್ಯ ಮಾಹಿತಿ ಪ್ರಕಾರ ಮೇರೆಗೆ ಮೇಲ್ನೋಟಕ್ಕೆ ಭ್ರಷ್ಟಾಚಾರ ನಡೆದಿರುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಇ.ಡಿ. ಅಧಿಕಾರಿಗಳು 300 ಕೋಟಿ ರು. ಮೌಲ್ಯದ 142 ಸ್ಥಿರಾಸ್ತಿ ಜಪ್ತಿ ಮಾಡಿ ತನಿಖೆ ಮುಂದುವರಿಸಿದ್ದಾರೆ.
ನಟೇಶ್ ಪಾತ್ರ ಪ್ರಮುಖ:
ಸಿದ್ದರಾಮಯ್ಯ ತಮ್ಮ ರಾಜಕೀಯ ಪ್ರಭಾವ ಬಳಸಿ ಪತ್ನಿ ಹೆಸರಲ್ಲಿ 14 ನಿವೇಶನಗಳ ಪರಿಹಾರ ಪಡೆದಿದ್ದಾರೆ. ಭೂಮಿಯನ್ನು ಮುಡಾ 3.24 ಲಕ್ಷ ರು.ಗೆ ಸ್ವಾಧೀನಪಡಿಸಿಕೊಂಡಿದೆ. 14 ನಿವೇಶನಗಳ ರೂಪದಲ್ಲಿ 56 ಕೋಟಿ ರು. ಪರಿಹಾರ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡು ವಲ್ಲಿ ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ಪಾತ್ರ ಪ್ರಮುಖವಾಗಿದೆ ಎಂದು ಇ.ಡಿ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ:
ತನಿಖೆ ವೇಳೆ 14 ನಿವೇಶನಗಳು ಸಿದ್ದರಾಮಯ್ಯ ಪತ್ನಿಗೆ ಹಂಚಿಕೆ ಯಾಗಿರುವುದು ಹೊರತುಪಡಿಸಿ, ರಿಯಲ್ ಎಸ್ಟೇಟ್ ಉದ್ಯಮಿಗಳಿಗೂ ಮುಡಾ ದಿಂದ ಅಕ್ರಮವಾಗಿ ಹಂಚಿಕೆ ಮಾಡಿರುವುದು ತಿಳಿದುಬಂದಿದೆ. ಉದ್ಯಮಿಗಳು ನಿವೇಶನಗ ಳನ್ನು ಭಾರೀ ಲಾಭಕ್ಕೆ ಮಾರಾಟ ಮಾಡಿ ಅಪಾರ ಪ್ರಮಾಣದಲ್ಲಿ ಹಣ ಗಳಿಕೆ ಮಾಡಿದ್ದಾರೆ. ಬಳಿಕ ಅಕ್ರಮವಾಗಿಹಣವರ್ಗಾವಣೆಮಾಡಲಾಗಿದೆ. ಅಕ್ರಮ ಹಣ ವನ್ನು ಕಾನೂನುಬದ್ದರೂಪಕ್ಕೆ ಪರಿವರ್ತಿಸಿ ಹಿಂಪಡೆಯಲಾಗಿದೆ ಎಂಬುದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.
ಮುಡಾ ಪ್ರಕರಣ: ವಕೀಲರಿಗೆ ಲಕ್ಷ ಲಕ್ಷ ಫೀಸ್ ಕೊಡಲು ಸ್ನೇಹಮಯಿ ಕೃಷ್ಣಗೆ ಹಣ ಎಲ್ಲಿಂದ ಬರುತ್ತೆ?: ಎಂ ಲಕ್ಷ್ಮಣ್ ಪ್ರಶ್ನೆ
ದಿನೇಶ್ ಸಂಬಂಧಿಕರ ಹೆಸರಲ್ಲಿ ಆಸ್ತಿ:
ಪ್ರಭಾವಿ ವ್ಯಕ್ತಿಗಳು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ಬೇನಾಮಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನ ಹಂಚಿಕೆ ಮಾಡಿರುವುದು ಸಹ ತನಿಖೆ ಯಲ್ಲಿ ಬಹಿರಂಗವಾಗಿದೆ. ಹಿಂದಿನ ಮುಡಾ ಅಧ್ಯಕ್ಷರು ಮತ್ತು ಆಯುಕ್ತರಿಗೆ ಸ್ಥಿರಾಸ್ತಿ, ಮುಡಾ ನಿವೇಶನಗಳು, ನಗದು ಇತ್ಯಾದಿಗಳ ರೂಪದಲ್ಲಿ ಅಕ್ರಮವಾಗಿ ಸಂದಾಯವಾಗಿದೆ.
ಈ ಸಂಬಂಧ ಸಾಕ್ಷ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಡಾ ಆಯುಕ್ತರಾಗಿದ್ದ ಜಿ.ಟಿ.ದಿನೇಶ್ ಕುಮಾರ್ ಅವರ ಸಂಬಂಧಿಕರ ಹೆಸರಲ್ಲಿ ಆಸ್ತಿ, ಐಷಾರಾಮಿ ವಾಹನ ಇತ್ಯಾದಿ ಖರೀದಿಗೆ ಸಹ ಕಾರಿ ಸಂಘದ ಮೂಲಕ ಹಣ ವಸೂಲಿ ಮಾಡಿರುವುದು ಕೂಡ ಬಯಲಾಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ