
ಬೆಂಗಳೂರು (ಏ.28): ಪರಿಸರ ಸಂರಕ್ಷಣೆ ದೃಷ್ಟಿಯಿಂದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲೆ ತಾಲೂಕುಗಳಲ್ಲಿನ ಮಂಡಳಿಯ ಅಧಿಕಾರಿಗಳು ವಾಣಿಜ್ಯ ಉದ್ದಿಮೆಗಳ ಮೇಲೆ ನಿಗಾವಹಿಸಿ, ನಿಯಮ ಉಲ್ಲಂಘಿಸಿದ ಉದ್ದಿಮೆಗಳನ್ನು ಮುಚ್ಚಲು ಆದೇಶಿಸಿದೆ. ಅದರಂತೆ 2023-24ನೇ ಸಾಲಿನಲ್ಲಿ 131 ಉದ್ದಿಮೆಗಳ ಸ್ಥಗಿತಕ್ಕೆ ಹಾಗೂ ಕ್ರಮಕ್ಕೆ ಆದೇಶಿಸಲಾಗಿದೆ. ರಾಜ್ಯ ದಲ್ಲಿ ಮಾಲಿನ್ಯ ತಡೆಗೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಸಾಕಷ್ಟು ಕ್ರಮಕೈಗೊಳ್ಳುತ್ತಿದೆ. ಜಿಲ್ಲೆ ತಾಲೂಕುಮಟ್ಟದ ಅಧಿಕಾರಿಗಳು ಕಾಲಕಾಲಕ್ಕೆ ಉದ್ದಿಮೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಅಲ್ಲದೆ, ಸಾರ್ವಜನಿಕರಿಂದ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿ ಉದ್ದಿಮೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಈ ವೇಳೆ ಉದ್ದಿಮೆಯಿಂದ ಯಾವುದಾದರು ನಿಯಮ ಉಲ್ಲಂಘನೆ ಕಂಡು ಬಂದರೆ ಹಾಗೂ ನೀರು, ಗಾಳಿ ಸೇರಿದಂತೆ ಪರಿಸರಕ್ಕೆ ಮಾರಕವಾಗುವಂತಹ ಅಂಶಗಳು ಕಂಡು ಬಂದರೆ ಉದ್ದಿಮೆಗಳಿಗೆ ದಂಡ ವಿಧಿಸುವುದರ ಜತೆಗೆ, ಅವುಗಳನ್ನು ಸ್ಥಗಿತಗೊಳಿಸಲೂ ಕ್ರಮ ಕೈಗೊಳ್ಳುತ್ತಿದೆ. ಅದರಂತೆ 2011ರಿಂದ 2022ರವರೆಗೆ ಬೆಂಗಳೂರಿನಲ್ಲಿಯೇ ಜಲಮೂಲಗಳನ್ನು ಹಾಳು ಮಾಡುತ್ತಿರುವ ಕಾರಣಕ್ಕಾಗಿ 100ಕ್ಕೂ ಹೆಚ್ಚಿನ ಕೈಗಾರಿಕೆ, ವಾಣಿಜ್ಯ ಉದ್ಯಮಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.
ರಾಮೇಶ್ವರಂ ಕೆಫೆಬಾಂಬ್ ಸ್ಫೋಟಕ್ಕೆ ಶಂಕಿತರು ಸಾಮಗ್ರಿ ಖರೀದಿಸಿದ್ದು ಚೆನ್ನೈನಲ್ಲಿ!
ಅದನ್ನು ಹೊರತು ಪಡಿಸಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ಪ್ರಕಾರ 2022-23ರಲ್ಲಿ ರಾಜ್ಯಾದ್ಯಂತ ಜಲ ಹಾಗೂ ವಾಯು ಮಾಲಿನ್ಯಕ್ಕೆ ಕಾರಣವಾಗಿದ್ದ 131 ಉದ್ದಿಮೆಗಳ ಸ್ಥಗಿತಕ್ಕೆ ಆದೇಶಿಸಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಡಿರುವ ಆದೇಶದಲ್ಲಿರುವಂತೆ ಬೆಂಗಳೂರಿನಲ್ಲಿನ ಉದ್ದಿಮೆಗಳ ಸಂಖ್ಯೆಯೇ ಹೆಚ್ಚಿದೆ. 131ರ ಪೈಕಿ 100 ಕ್ಕೂ ಹೆಚ್ಚಿನ ಉದ್ದಿಮೆ ಗಳು ಬೆಂಗಳೂರಿನದ್ದಾಗಿವೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆಗಳು ಹೆಚ್ಚಿವೆ. ಅಲ್ಲದೆ, ಅವುಗಳು ಹೆಚ್ಚಿನ ಪ್ರಮಾಣದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಕಾಯ್ದೆ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿ ಉದ್ದಿಮೆ ಸ್ಥಗಿತಗೊಳಿಸುವ ಆದೇಶ ಹೊರಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ