ಕಾಡಾನೆ ಹಾವಳಿ ತಡೆಗೆ ಆನೆ ಶಿಬಿರ ಸ್ಥಾಪನೆ: ಸಚಿವ ಈಶ್ವರ ಖಂಡ್ರೆ

By Kannadaprabha News  |  First Published Oct 5, 2024, 8:05 AM IST

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗ ದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದರು.


ಶಿವಮೊಗ್ಗ (ಅ.05): ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗ ದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಘೋಷಿಸಿದರು. ಕುವೆಂಪು ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ರಜತ ಮಹೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. 

ರಾಜ್ಯದಲ್ಲಿ ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ, 'ಎಲಿಫೆಂಟ್ ಸಾಫ್ಟ್ ರಿಲೀಸ್‌ ಸೆಂಟರ್' ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯ ಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.  ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಬೆಳೆಸಲಾಗುವುದು. ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಾನೆ ಆಗುತ್ತಿರುವ ತೊಂದರೆ ತಪ್ಪಿಸಲು  ಸಾಧ್ಯವಾಗುತ್ತದೆ ಎಂದು ವಿವರಿದರು.

Tap to resize

Latest Videos

undefined

ಮಹಾರಾಷ್ಟ್ರ ವಿಧಾನಸೌಧದ 3ನೇ ಮಹಡಿಯಿಂದ ಜಿಗಿದು ಉಪಸ್ಪೀಕರ್, ಸಂಸದನಿಂದ ಹೈಡ್ರಾಮಾ!

40 ಹುಲಿಗಳ ತಾಣ: ಭದ್ರಾ ಅರಣ್ಯವಾಸಿಗಳ ಪುನರ್ವ ಸತಿಯಾದ ನಂತರದಲ್ಲಿ ಮಾನವ ವನ್ಯಜೀವಿ ಸಂಘರ್ಷ ಗಣನೀಯ ವಾಗಿ ಕಡಿಮೆಯಾಗಿದೆ. ಆರಂಭದಲ್ಲಿ 8 ಹುಲಿಗಳನ್ನು ಹೊಂದಿದ್ದ ಈ ಸಂರಕ್ಷಿತ ಪ್ರದೇಶದಲ್ಲಿ ಪ್ರಸ್ತುತ 40 ಹುಲಿಗಳಿವೆ. ಇದಕ್ಕೆ ಕಾರಣ ಹುಲಿ ಗಳ ಆವಾಸಸ್ಥಾನದ ಸಂರಕ್ಷಣೆಯೇ ಆಗಿದೆ. ಇಲ್ಲಿ ದಟ್ಟವಾದ ಕಾನನ ವಿದ್ದು, ಸುಮಾರು 400ಕ್ಕೂ ಅಧಿಕ ಆನೆಗಳಿವೆ ಎಂದು ಖಂಡ್ರೆ ತಿಳಿಸಿದರು.

ವನ್ಯಜೀವಿಯೊಂದಿಗೆ ಸಹಬಾಳ್ವೆ ಮುಖ್ಯ: ವನ್ಯಜೀವಿಗಳ ಸಂಖ್ಯೆಯಲ್ಲಿನ ಹೆಚ್ಚಳ ಹಾಗೂ ಅರಣ್ಯ ಪ್ರದೇಶ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಕಾಡಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಅನಿವಾರ್ಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅಭಿಪ್ರಾಯಪಟ್ಟರು. 70ನೇ ವನ್ಯಜೀವಿ ಸಪ್ತಾಹದ ಅಂಗವಾಗಿ ಕಬ್ಬನ್‌ ಉದ್ಯಾನದಿಂದ ಲಾಲ್‌ಬಾಗ್‌ವರೆಗೆ ನಡೆದ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಕೃತಿ ಮತ್ತು ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ವನ್ಯಜೀವಿಗಳ ಪಾತ್ರ ಮಹತ್ವದ್ದಾಗಿದೆ. 

ಗ್ಯಾರಂಟಿ ಜಾರಿ ಬಳಿಕ ದಿವಾಳಿ: ಹಿಮಾಚಲ ಪ್ರದೇಶದಲ್ಲಿ ಟಾಯ್ಲೆಟ್‌ಗೆ ತೆರಿಗೆ!

ಆದರೆ, ಹಲವು ಕಾರಣಗಳಿಂದ ಹಲವು ವನ್ಯಜೀವಿಗಳು ಅಳಿವಿನಂಚಿನಲ್ಲಿವೆ. ಅದರಲ್ಲಿ ಕೆಲವು ನಶಿಸಿ ಹೋಗಿವೆ. ಹೀಗಾಗಿ ಅರಣ್ಯ ಮತ್ತು ವನ್ಯಜೀವಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ. ಜತೆಗೆ ಕಾಡಂಚಿನ ಜನರು ವನ್ಯಜೀವಿಗಳೊಂದಿಗೆ ಸಹಬಾಳ್ವೆ ನಡೆಸಬೇಕಿದೆ. ಈ ಬಾರಿಯ ವನ್ಯಜೀವಿ ಸಂರಕ್ಷಣೆಯ ಧ್ಯೇಯ ವಾಕ್ಯವೂ ವನ್ಯಜೀವಿಗಳೊಂದಿಗೆ ಸಹಬಾಳ್ವೆ ಎಂಬುದಾಗಿದೆ ಎಂದರು. ಜಾಗೃತಿ ನಡಿಗೆಯಲ್ಲಿ ಚಲನಚಿತ್ರ ನಟ ರಿಷಬ್‌ ಶೆಟ್ಟಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್‌, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್‌ ಕುಮಾರ್‌ ದೀಕ್ಷಿತ್‌, ಸುಭಾಷ್‌ ಮಾಲ್ಕಡೆ ಇದ್ದರು.

click me!