ಕಾಂಗ್ರೆಸ್ ಸರ್ಕಾರದಲ್ಲೂ ಶೇ.40 ಕಮಿಷನ್ ಕಂಟಿನ್ಯೂ ಆಗಿದೆ; ಆಗ ಶಾಸಕರು ಕೇಳ್ತಿದ್ರು, ಈಗ ಅಧಿಕಾರಿಗಳೇ ಕೇಳ್ತಾರೆ!

By Sathish Kumar KHFirst Published Feb 8, 2024, 2:11 PM IST
Highlights

ರಾಜ್ಯದಲ್ಲಿ  ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೂ ಶೇ.40 ಪರ್ಸೆಂಟ್ ಕಮಿಷನ್ ಕೇಳಲಾಗುತ್ತಿದೆ. ಆಗ ಶಾಸಕರು ಕಮಿಷನ್ ಕೇಳಿದರೆ, ಈಗ ಅಧಿಕಾರಿಗಳೇ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದ್ದಾರೆ.

ಬೆಂಗಳೂರು (ಫೆ.08): ರಾಜ್ಯದಲ್ಲಿ ಬಿಜೆಪಿ ಅವಧಿಯಲ್ಲಿ ಗುತ್ತಿಗೆದಾರರಿಂದ ಪ್ರತಿ ಕಾಮಗಾರಿಗೆ ಶೇ.40 ಪರ್ಸೆಂಟ್ ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ, ಈಗ ಕಾಂಗ್ರೆಸ್ ಸರ್ಕಾರದಲ್ಲಿಲೀ ಶೇ.40 ಪರ್ಸೆಂಟ್ ಕಮಿಷನ್ ಕಂಟಿನ್ಯೂ ಆಗುತ್ತಿದೆ. ಈ ಹಿಂದೆ ಶಾಸಕರು ಕಮಿಷನ್ ಕೇಳುತ್ತಿದ್ದರು, ಆದರೆ ಈಗ ಅಧಿಕಾರಿಗಳೇ ಕಮಿಷನ್ ಕೇಳುತ್ತಾರೆ ಎಂದು ಕಾಂಗ್ರೆಸ್ ಸಕಾರ್ಘರದ ಬಗ್ಗೆ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲು ಶಾಸಕರು ನೇರವಾಗಿ ಹಣ ಕೇಳುತ್ತಿದ್ದರು. ಆದರೆ, ಇದೀಗ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರಿಗಳೇ ಹಣ ಕೇಳುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿದ್ದ ಶೇ.40% ಕಮಿಷನ್ ಕಾಂಗ್ರೆಸ್ ಸರ್ಕಾರದಲ್ಲಿಯೂ  ಕಂಟಿನ್ಯೂ ಆಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ನಡೆಯುತ್ತಿರುವ ಅನಾವಶ್ಯಕ ಪ್ಯಾಕೇಜ್ ಟೆಂಡರ್‌ಗಳಲ್ಲಿಯೂ ದೊಡ್ಡ ಮಟ್ಟದ ಕಮಿಷನ್ ಕೇಳಲಾಗುತ್ತಿದೆ. ಕೂಡಲೇ ಸರ್ಕಾರ ಪ್ಯಾಕೇಜ್ ಟೆಂಡರ್‌ಗಳನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು. 

Latest Videos

ಮುಸ್ಲಿಂ ಗುರುಗಳನ್ನು ಬಿಡುಗಡೆ ಮಾಡಿ, ಜ್ಞಾನವ್ಯಾಪಿ ಮಸೀದಿಗೆ ತೊಂದರೆ ಮಾಡಬೇಡಿ; ಮುಸ್ಲಿಮರ ಪ್ರತಿಭಟನೆ

ಈಗಾಗಲೇ ಹಲವು ಭಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ್ದೇವೆ. ಪ್ಯಾಕೇಜ್ ಟೆಂಡರ್ ರದ್ದು ಮಾಡುವಂತೆ ಮನವಿ ಮಾಡಿದ್ದೇವೆ. ಇದಾದ ನಂತರವೂ ಹತ್ತಾರು ಪತ್ರ ಬರೆದು ಸಿಎಂಗೆ ಮನವಿ ಮಾಡಿದ್ದೇವೆ. ಈ ಬಗ್ಗೆ ಸರ್ಕಾರದ ವಿವಿಧ ಇಲಾಖೆಗಳ ಮುಖ್ಯ ಇಂಜಿನಿಯರ್ ಅವರನ್ನ ಪ್ರಶ್ನೆ ಮಾಡಿದ್ರೆ ಮೇಲಾಧಿಕಾರಿಗಳ ಕಡೆ ತೋರಿಸ್ತಾರೆ. ಅವರನ್ನ ಕೇಳಿದ್ರೆ ಸಚಿವರು, ಶಾಸಕರ ಕಡೆ ಬೋಟ್ಟು ಮಾಡಿ ತೋರಿಸ್ತಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ವಸತಿ ಗೃಹ ಅಭಿವೃದ್ಧಿ ನಿಗಮ, ಬೃಹತ್ ಬೆಂಗಳೂರು ‌ಮಹಾನಗರ ಪಾಲಿಕೆ (ಬಿಬಿಎಂಪಿ), ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಲವು ಇಲಾಖೆಗಳಲ್ಲಿ ಪ್ಯಾಕೇಜ್ ಟೆಂಡರ್ ಆಹ್ವಾನ ಮಾಡಲಾಗಿದೆ. ಇದರಿಂದ ಸ್ಥಳೀಯ ಗುತ್ತಿಗೆದಾರರಿಗೆ ಮೋಸವಾಗುತ್ತಿದೆ. ನೆರೆ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ಪ್ಯಾಕೇಜ್ ಟೆಂಡರ್ ಮಾಡ್ತಾ ಇದ್ದಾರೆ. ಪ್ಯಾಕೇಜ್ ಟೆಂಡರ್ ಪದ್ಧತಿ ಭ್ರಷ್ಟಾಚಾರಕ್ಕೆ ಅಸ್ಪದವಾಗಿದೆ. ತಮ್ಮ ಅಪ್ತರಾದ ಗುತ್ತಿಗೆದಾರರಿಗೆ ಈ ಕಾಮಗಾರಿಗಳ ಗುತ್ತಿಗೆ‌ ನೀಡಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಅನ್ಯಾಯ ಸರಿಪಡಿಸದಿದ್ದರೆ ಕೇಂದ್ರ ಸರ್ಕಾರ ಏಕೆ ಬೇಕು?: ಡಿಕೆ ಶಿವಕುಮಾರ ಕಿಡಿ

ಪ್ಯಾಕೇಜ್ ಟೆಂಡರ್‌ಗಳಿಂದ ರಾಜ್ಯದ ಸ್ಥಳೀಯ ಅರ್ಹ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ. ಎಲ್ಲ ರೀತಿಯ ಕಾಮಗಾರಿಗಳ ಟೆಂಡರ್ ಮೂಲಕ ಹಂಚಿಕೆ ಮಾಡಿದ್ರೆ ನ್ಯಾಯ ಸಿಗುತ್ತದೆ. ಪ್ಯಾಕೇಜ್ ಟೆಂಡರ್ ರದ್ದು ಮಾಡದೇ ಇದ್ರೆ ಹೋರಾಟ ಮಾಡಲು ಕರೆ ಕೊಡುತ್ತೇವೆ. ಒಂದು ವಾರದಲ್ಲಿ ಬಿಬಿಎಂಪಿ‌ಯಲ್ಲಿ 300 ಕೋಟಿ ರೂ. ಪ್ಯಾಕೇಜ್ ಟೆಂಡರ್ ಅನ್ನ ಆಹ್ವಾನಿಸಲಾಗಿದೆ. ಈ ಪ್ಯಾಕೇಜ್ ಟೆಂಡರ್ ಮೇಲೆ ಹಲವು ಅನುಮಾನ ಮೂಡಿದೆ. ಇನ್ನು ಗುತ್ತಿಗೆದಾರರಿಗೆ ಕೆಲಸ ಬೇಕು ಅಂದ್ರೆ ಅಧಿಕಾರಿಗಳೇ ಹಣ ಕೇಳುತ್ತಿದ್ದಾರೆ. ಕಾಮಗಾರಿ ‌ಪೂರ್ಣಗೊಳಿಸಿ ಎರಡು ವರ್ಷ ಆದ್ರೂ ಹಣ ಬಿಡುಗಡೆ ಆಗಿಲ್ಲ. 

click me!