ಕೇಂದ್ರ ಸರ್ಕಾರ ಡಿಸ್‌ಇನ್ವೆಸ್ಟ್‌ಮೆಂಟ್ ಯೋಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಶಿವಮೊಗ್ಗ (ಫೆ.08): ಕೇಂದ್ರ ಸರ್ಕಾರ ಡಿಸ್‌ಇನ್ವೆಸ್ಟ್‌ಮೆಂಟ್ ಯೋಜನೆ ಅಡಿಯಲ್ಲಿ ಈ ಕಾರ್ಖಾನೆ ಮುಚ್ಚಲು ಪ್ರಕ್ರಿಯೆ ಆರಂಭಿಸಿದ್ದಾರೆ. ಇದು ಆತಂಕಕ್ಕೆ ಕಾರಣವಾಗಿದೆ. ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಬುಧವಾರ ಶಿವಮೊಗ್ಗಕ್ಕೆ ಭೇಟಿ ನೀಡಿದ ವೇಳೆ ತಮ್ಮನ್ನು ಭೇಟಿ ಮಾಡಿದ ವಿಐಎಸ್‌ಎಲ್ ಕಾರ್ಮಿಕರ ನಿಯೋಗದೊಂದಿಗೆ ಮಾತನಾಡಿದ ಅವರು, ರಾಜ್ಯದ ಕಬ್ಬಿಣದ ಅದಿರಿಗೆ ಸಾಕಷ್ಟುಬೆಲೆ ಇದೆ. ಈ ಸಂಸ್ಥೆ ಉಳಿಸಲು ನಾವು ಪ್ರಯತ್ನ ಮಾಡುತ್ತೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ತಿಳಿಸಿದರು.
ವಿಐಎಸ್‌ಎಲ್ ಅತ್ಯಂತ ಮಹತ್ವದ ಕಾರ್ಖಾನೆ. ಜಾಗತೀಕರಣದ ಪರಿಣಾಮ ಅನೇಕ ಸಾರ್ವಜನಿಕ ಸಂಸ್ಥೆಗಳು ಮುಚ್ಚಿವೆ. ಬಿ.ಎಸ್. ಯಡಿಯೂರಪ್ಪ ಅವರ ಪ್ರಯತ್ನದಿಂದ ವಿಐಎಸ್‌ಎಲ್ ಕಾರ್ಖಾನೆಯು ಉಳಿದುಕೊಂಡು ಬಂದಿದೆ. ಈಗ ಮತ್ತೆ ಮುಚ್ಚುವ ಹಂತಕ್ಕೆ ಹೋಗಿದೆ. ಮೊದಲು ಕ್ಲೋಸರ್ ಪ್ರಕ್ರಿಯೆ ನಿಲ್ಲಿಸಲು ಪ್ರಯತ್ನ ಮಾಡಲಾಗುವುದು. ಬೇರೆ ಕಂಪನಿಗಳೊಂದಿಗೆ ಮಾತುಕತೆ ನಡೆಸುತ್ತೇವೆ ಎಂದು ಭರವಸೆ ನೀಡಿದರು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ಇದ್ದರು.
ವಿಮಾನ ನಿಲ್ದಾಣಕ್ಕೆ ಬಿಎಸ್‌ವೈ ಹೆಸರು, ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಿಎಂ ಬೊಮ್ಮಾಯಿ
ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಗರದ ಹೊರವಲಯದ ಗೋವಿಂದಪುರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳಡಿ ನಿರ್ಮಿಸಲಾಗುತ್ತಿರುವ 3 ಸಾವಿರ ಮನೆಗಳ ಪೈಕಿ ಪೂರ್ಣಗೊಂಡಿರುವ 288 ಮನೆಗಳನ್ನು ಹಸ್ತಾಂತರಿಸಿ 700 ಫಲಾನುಭವಿಗಳಿಗೆ ಅಂತಿಮ ಹಂಚಿಕೆ ಪತ್ರ ವಿತರಿಸಿದರು. ಶಿವಮೊಗ್ಗ ನಗರದಲ್ಲಿ 3.48 ಕೋಟಿ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗಿರುವ 2 ಕೆರೆಗಳ ಲೋಕಾರ್ಪಣೆ, ನಗರದಲ್ಲಿ 25.30 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಾಂಕ್ರೀಟ್ ರಸ್ತೆ, 1.74 ಕೋಟಿ ವೆಚ್ಚದ ಸ್ಮಾರ್ಚ್ ಎಜುಕೇಶನ್ ಪ್ರಾಜೆಕ್ಟ್, 58 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಒಳಚರಂಡಿ ಮತ್ತು ಮಲಿನ ನೀರು ಶುದ್ಧೀಕರಣ ಘಟಕ, ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನ 15.41 ಕೋಟಿ ವೆಚ್ಚದ ಕಟ್ಟಡ ಕಾಮಗಾರಿ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಿದರು.
21.60 ಕೋಟಿ ವೆಚ್ಚದ ಅಂಗನವಾಡಿ, ಶಾಲೆ ಅಭಿವೃದ್ಧಿ, ರಸ್ತೆ, ಬಾಕ್ಸ್ ಚರಂಡಿ, ಉದ್ಯಾನವನ ಅಭಿವೃದ್ಧಿ, .6.45 ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್‌ಗಳಲ್ಲಿ ಅಭಿವೃದ್ಧಿ, .15.15 ಕೋಟಿ ವೆಚ್ಚದಲ್ಲಿ ತುಂಗಾ ನದಿಗೆ ಸೇರುತ್ತಿರುವ ಮಲಿನ ನೀರನ್ನು ಪ್ರತಿಬಂಧಿಸುವುದು ಮತ್ತು ತಿರುಗಿಸುವ ಕಾಮಗಾರಿ. .10.62 ಕೋಟಿ ವೆಚ್ಚದಲ್ಲಿ ವಿವಿಧ ವಾರ್ಡ್‌ಗಳಲ್ಲಿ ರಸ್ತೆ, ಬಾಕ್ಸ್ ಚರಂಡಿ, ಸಮುದಾಯ ಭವನ ಹಾಗೂ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಕರ್ನಾಟಕದಿಂದ ಅಯೋಧ್ಯೆಗೆ ಹೋಗ್ತಿದೆ ಪುಣ್ಯ ಜಲ: ಬಜರಂಗದಳದಿಂದ ವಿಶೇಷ ಕಾರ್ಯ
ಶೀಘ್ರದಲ್ಲೇ ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರ: ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಪರಿಹರಿಸುವ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸರ್ವೆ ಕಾರ್ಯ ಪೂರ್ಣಗೊಂಡಿದ್ದು, ಇದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶೀಘ್ರವೇ ಶಾಶ್ವತ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು. ಇದುವರೆಗೆ ಎಲ್ಲರೂ ಶರಾವತಿ ಸಂತ್ರಸ್ತರ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ರಾಜಕಾರಣ ಮಾಡಿದ್ದಾರೆ ಹೊರೆತು ಅವರಿಗೆ ನ್ಯಾಯ ಕೊಡುವ ಕೆಲಸವನ್ನು ಯಾರು ಮಾಡಿಲ್ಲ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರ ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಸಿಗಲು ಸಾಧ್ಯ. ಕೇಂದ್ರ ಸರ್ಕಾರ ಅನುಮತಿ ಪಡೆದ ಮುಳುಗಡೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.