
ಮೈಸೂರು (ಜೂ.07): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಕಾ.ಪು. ಸಿದ್ದಲಿಂಗಸ್ವಾಮಿ (56) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ತಂದೆ ಕೆ.ಸಿ.ಪುಟ್ಟಸ್ವಾಮಪ್ಪ, ಸಹೋದರರಾದ ಜಿಪಂ ಮಾಜಿ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ, ಸಹೋದರಿ ಇದ್ದಾರೆ. ಅವರು 2013 ರಲ್ಲಿ ವರುಣ ಕ್ಷೇತ್ರದಲ್ಲಿ ಕೆಜಿಪಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದರು. ನಂತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಮೃತರ ಪಾರ್ಥಿವ ಶರೀರವನ್ನು ಜೆ.ಪಿ.ನಗರದ ನಿವಾಸದಲ್ಲಿ ಕೆಲಕಾಲ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಹುಟ್ಟೂರು ನಂಜನಗೂಡು ತಾಲೂಕಿನ ಕಾರ್ಯ ಗ್ರಾಮಕ್ಕೆ ತೆಗೆದುಕೊಂಡು ಹೋಗಿ, ಅಂತ್ಯಸಂಸ್ಕಾರ ನಡೆಸಲಾಯಿತು. ವಿಜಯೇಂದ್ರ ಸಂತಾಪ: ಕಾ.ಪು.ಸಿದ್ದಲಿಂಗಸ್ವಾಮಿ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
ಬಿಜೆಪಿಯಿಂದಲೂ ನಿಗಮ ಹಣ ಅಕ್ರಮ ವರ್ಗ: ದಾಖಲೆಗಳು ಸಿಕ್ಕಿವೆ ಎಂದ ಡಿ.ಕೆ.ಶಿವಕುಮಾರ್
ಶವದ ಮೇಲೆ ಕುಳಿತ ಕೋತಿ: ವ್ಯಕ್ತಿಯೊಬ್ಬರ ಅಂತ್ಯಕ್ರಿಯೆ ವೇಳೆ ಕೋತಿಯೊಂದು ಶವದ ಮೇಲೆ ಕುಳಿತು ಅಚ್ಚರಿ ಮೂಡಿಸಿದ ಘಟನೆ ಇಲ್ಲಿನ ಹೊರವಲಯದ ಸಶ್ಮಾನದಲ್ಲಿ ನಡೆದಿದೆ. ಆ ವಿಡಿಯೋ ಇದೀಗ ವೈರಲ್ ಆಗಿದೆ. ಪಟ್ಟಣದ ಬಸವೇಶ್ವರ ನಗರ ನಿವಾಸಿ ರವಿ ಮೋಘ್ರೆ (35) ಎಂಬಾತ ಮಂಗಳವಾರ ನಿಧನರಾಗಿದ್ದರು. ಅಗ್ನಿ ಸ್ಪರ್ಶ ಮಾಡಬೇಕು ಎಂದು ಸಶ್ಮಾನದಲ್ಲಿ ಎಲ್ಲ ಸಿದ್ಧತೆ ನಡೆದಿತ್ತು. ಈ ವೇಳೆ ಕೋತಿಯೊಂದು ಆಗಮಿಸಿ ಆತನ ಶವದ ಮೇಲೆ ಕುಳಿತುಕೊಂಡಿತು.
ಧಾರ್ಮಿಕ ವಿಧಿ ವಿಧಾನಗಳೆಲ್ಲ ಮುಗಿಯುವವರೆಗೂ ಅಲ್ಲೇ ಕುಳಿತ್ತಿತ್ತು. ಈ ವೇಳೆ ಯಾರೊಬ್ಬರು ಕೋತಿಯನ್ನು ಗದರಿಸಿ ಓಡಿಸುವ ಗೋಜಿಗೂ ಹೋಗಲಿಲ್ಲ. ಬಳಿಕ ಅಗ್ನಿ ಸ್ಪರ್ಶ ಮಾಡುವ ವೇಳೆ ಅಲ್ಲಿಂದ ತನ್ನಿಂದ ತಾನೇ ಹೋಯಿತು. ಶವದ ಮೇಲೆ ಕುಳಿತು ಧಾರ್ಮಿಕ ವಿಧಾನಗಳೆಲ್ಲ ಪೂರ್ಣವಾಗುವವರೆಗೆ ಕುಳಿತ್ತಿದ್ದ ಕೋತಿಯ ವಿಡಿಯೋ ಇದೀಗ ವೈರಲ್ ಆಗಿದೆ. ಮೃತನಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ