ದೈವಾರಾಧನೆ ಪ್ರದರ್ಶನವಲ್ಲ; ಪ್ರತಿಭಾ ಕಾರಂಜಿಯಲ್ಲಿ ಬಳಸಬೇಡಿ: ಸುನೀಲ್ ಕುಮಾರ್

By Ravi JanekalFirst Published Jul 6, 2023, 1:29 PM IST
Highlights

ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ. ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದು ಕೈಬಿಡಬೇಕು ಎಂದು ಶೂನ್ಯವೆಳೆಯಲ್ಲಿ ಮಾಜಿ ಸಚಿವ ಸುನೀಲ್ ಕುಮಾರ ಒತ್ತಾಯಿಸಿದರು.

ಬೆಂಗಳೂರು (ಜು.6) : ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ. ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದು ಕೈಬಿಡಬೇಕು ಎಂದು ಮಾಜಿ ಸಚಿವ ಸುನೀಲ್ ಕುಮಾರ ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ದೈವರಾಧಾನೆ ಕುರಿತ ಪ್ರಸ್ತಾಪಿಸಿದ ಅವರು, ಕೋಲ, ದೈವರಾಧಾನೆ ಮಕ್ಕಳು ಪ್ರತಿಭಾ ಕಾರಂಜಿಯಲ್ಲಿ ಪ್ರದರ್ಶನ ಮಾಡುವಂತದ್ದಲ್ಲ. ಹೀಗಿದ್ದೂ ಶಿಕ್ಷಣ ಇಲಾಖೆ ಪ್ರತಿಭಾ ಕಾರಂಜಿಯಲ್ಲಿ ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ.  ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ದನಿಗೂಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ. ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನಿಡಿದರು.

ತುಳುನಾಡಿನ ಆರಾಧನೆಗಳಲ್ಲಿ ಪ್ರಮುಖವಾಗಿರು ಭೂತರಾಧನೆ.  ಇದನ್ನು 'ದೈವಾರಾಧನೆ' ಎಂದೂ ಕರೆಯುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಕೇರಳ ರಾಜ್ಯದ ಉತ್ತರ ಜಿಲ್ಲೆಗಳಲ್ಲಿ ವಿಶೇಷವಾಗಿ ಕಂಡುಬರುವ ಒಂದು ರೀತಿಯ ಆರಾಧಾನೆ. ತುಂಬಾ ಭಯ, ಭಕ್ತಿಯಿಂದ ಆರಾಧಿಸಲಾಗುತ್ತದೆ. 

ಇದು ಕರಾವಳಿಯಲ್ಲಿ ನಡೆಯುವ ಏಕೈಕ ನವ ಗುಳಿಗ ಸೇವೆ: ವಿಶೇಷತೆ ಏನು ಗೊತ್ತಾ?

click me!