ಕಿಡ್ನಿ ಸಮಸ್ಯೆಯುಳ್ಳ ಪುರುಷರಿಗೂ ಶಕ್ತಿ ಯೋಜನೆ ವಿಸ್ತರಿಸಿ; ಸ್ಪೀಕರ್ ಯು.ಟಿ. ಖಾದರ್

Published : Feb 26, 2025, 01:07 PM ISTUpdated : Feb 26, 2025, 01:32 PM IST
ಕಿಡ್ನಿ ಸಮಸ್ಯೆಯುಳ್ಳ ಪುರುಷರಿಗೂ ಶಕ್ತಿ ಯೋಜನೆ ವಿಸ್ತರಿಸಿ; ಸ್ಪೀಕರ್ ಯು.ಟಿ. ಖಾದರ್

ಸಾರಾಂಶ

ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್, ಮೂತ್ರಪಿಂಡ ಸಮಸ್ಯೆ ಇರುವ ಪುರುಷರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದಾರೆ. ಡಯಾಲಿಸಿಸ್‌ಗಾಗಿ ನಗರಗಳಿಗೆ ಹೋಗುವ ಬಡ ರೋಗಿಗಳಿಗೆ ಅನುಕೂಲವಾಗುವಂತೆ ಕೋರಿದ್ದಾರೆ.

ಬೆಂಗಳೂರು (ಫೆ.26): ರಾಜ್ಯದಲ್ಲಿ ಶಕ್ತಿ ಯೋಜನೆಯ ಮೂಲಕ ಎಲ್ಲ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅದೇ ರೀತಿ ರಾಜ್ಯದಲ್ಲಿ ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿರುವ ಪುರುಷರು ಡಯಾಲಿಸಿಸ್‌ಗಾಗಿ ವಾರಕ್ಕೊಮ್ಮೆ ಬೆಂಗಳೂರು ಸೇರಿದಂತೆ ನಗರ ಪ್ರದೇಶಗಳಿಗೆ ಹೋಗಬೇಕಿದೆ. ಹೀಗಾಗಿ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಪುರುಷರಿಗೂ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಪತ್ರ ಬರೆದಿದ್ದಾರೆ.

ನಗರ ಪ್ರದೇಶಗಳಲ್ಲಿ ಹಾಗೂ ರಾಜ್ಯದಾದ್ಯಂತ ಕಡು ಬಡ ಕುಟುಂಬಕ್ಕೆ ಸೇರಿರುವ ಸಾವಿರಾರು ಮಂದಿ ಮೂತ್ರಪಿಂಡದ ಸಮಸ್ಯೆಯಿಂದ ಬಳಲಿ ಡಯಾಲಿಸೀಸ್‌ಗಾಗಿ ನೂರಾರು ಕಿಲೋಮೀಟರ್ ಪ್ರಯಾಣ ಕೈಗೊಂಡು ಬೆಂಗಳೂರಿನಂತಹ ನಗರದಲ್ಲಿ ಚಿಕಿತ್ಸೆಯನ್ನು ಪಡೆಯಲು ಪುರುಷ ರೋಗಿಗಳು ಹಣಕಾಸಿನ ತೊಂದರೆಯಿಂದ ಬಳಲುತ್ತಿದ್ದಾರೆ. ಅವರುಗಳಿಗೆ ನಗರ ಸಾರಿಗೆ ಬಸ್ಸುಗಳಲ್ಲಿ ಹಾಗೂ ರಾಜ್ಯ ಸಾರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆಯನ್ನು ಜಾರಿಗೊಳಿಸಬೇಕೆಂದು ಕೋರಿರುತ್ತಾರೆ. 

ಇದನ್ನೂ ಓದಿ: ಗಣಿ ಕೇಸ್‌: ಎಚ್‌.ಡಿ.ಕುಮಾರಸ್ವಾಮಿಗೆ ಮತ್ತೆ ಪ್ರಾಸಿಕ್ಯೂಷನ್ ಸಂಕಷ್ಟ

ಆದ್ದರಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಗೂ ರಾಜ್ಯ ನಗರ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಬಡ ಕುಟುಂಬದ ರೋಗಿಗಳಿಗೆ ಉಚಿತ ಪ್ರಯಾಣ ವ್ಯವಸ್ಥೆಯನ್ನು ಕಲ್ಪಿಸಬೇಕು. ಈ ಮೂಲಕ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವವರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ತಮ್ಮಲ್ಲಿ ಕೋರುತ್ತೇನೆ. ಜೊತೆಗೆ, ಸಾಮಾಜಿಕ ಕಾರ್ಯಕರ್ತ ಸೈಯದ್ ಮೆಹೀಬುರ್ ರೆಹಮಾನ್ ಸಮೀನ್ ನೀಡಿರುವ ಮನವಿಯನ್ನು ತಮ್ಮ ಅವಗಾಹನೆಗಾಗಿ ಲಗತ್ತಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಷರೀಫ್ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌