ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿದ ಅರ್ಜಿ ಹೈಕೋರ್ಟ್‌ನಲ್ಲಿ ಬುಧವಾರ ವಿಚಾರಣೆಗೆ ಬರಲಿದ್ದು, ಹೈಕೋರ್ಟ್ ನೀಡುವ ನಿರ್ದೇಶನವನ್ನಾಧರಿಸಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಸಾರಿಗೆ ನಿರ್ಧರಿಸಲಿದೆ.
ಬೆಂಗಳೂರು (ಜೂ.12): ಹಳೇ ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸಂಬಂಧಿಸಿದ ಅರ್ಜಿ ಹೈಕೋರ್ಟ್‌ನಲ್ಲಿ ಬುಧವಾರ ವಿಚಾರಣೆಗೆ ಬರಲಿದ್ದು, ಹೈಕೋರ್ಟ್ ನೀಡುವ ನಿರ್ದೇಶನವನ್ನಾಧರಿಸಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಬೇಕೆ? ಅಥವಾ ಬೇಡವೇ? ಎಂಬ ಬಗ್ಗೆ ಸಾರಿಗೆ ನಿರ್ಧರಿಸಲಿದೆ. 2019ರ ಏಪ್ರಿಲ್‌ಗಿಂತ ಹಿಂದೆ ನೋಂದಣಿಯಾದ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಅದರಂತೆ ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕಿದ್ದು, ಈವರೆಗೆ 35ರಿಂದ 40 ಲಕ್ಷ ವಾಹನಗಳು ಮಾತ್ರ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿವೆ. ಹೀಗಾಗಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಕೊನೆಯ ದಿನಾಂಕವನ್ನು ಮೂರು ಬಾರಿ ಮುಂದೂಡಿ ಕಳೆದ ಮೇ 31ನ್ನು ಅಂತಿಮ ದಿನವಾಗಿಸಲಾಗಿತ್ತು.
ಆದರೆ, ಎಚ್‌ಎಸ್‌ಆರ್‌ಪಿಗೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಜೂನ್ 12ರವರೆಗೆ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಬಾರದು ಎಂದು ಸಾರಿಗೆ ಮತ್ತು ಪೊಲೀಸ್ ಇಲಾಖೆ ಸೂಚಿಸಲಾಗಿತ್ತು. ಅದರಂತೆ ಇದೀಗ ಜೂನ್ 12ರಂದು ಅರ್ಜಿ ವಿಚಾರಣೆ ನಡೆಯಲಿದ್ದು, ಹೈಕೋರ್ಟ್ ನೀಡುವ ತೀರ್ಪನ್ನಾಧರಿಸಿ ಸಾರಿಗೆ ಇಲಾಖೆ ಮುಂದಿನ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದೆ. ಒಂದು ವೇಳೆ ಹೈಕೋರ್ಟ್ ಎಚ್‌ಎಸ್‌ಆರ್‌ಪಿ ಅಳವಡಿಸದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಅನುಮತಿಸಿದರೆ, ಗುರುವಾರದಿಂದ ಎಚ್ಎಸ್‌ಆರ್‌ಪಿ ಇಲ್ಲದ ವಾಹನಗಳಿಗೆ 1 ಸಾವಿರ ರು.ವರೆಗೆ ದಂಡ ವಿಧಿಸುವ ಸಾಧ್ಯತೆಗಳಿವೆ.
ಎಚ್‌ಡಿಕೆ ಮಂಡ್ಯಕ್ಕೆ ರಾಜೀನಾಮೆ ನೀಡಿ ಚನ್ನಪಟ್ಟಣ ಉಳಿಸಿಕೊಳ್ತಾರೆ: ಡಿ.ಕೆ.ಸುರೇಶ್
ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಸಂಬಂಧಿಸಿದಂತಹ ಅರ್ಜಿ ಹೈಕೋರ್ಟ್‌ನಲ್ಲಿ ಬುಧವಾರ ವಿಚಾರಣೆಗೆ ಬರಲಿದೆ. ಈ ಹಿಂದೆ ಹೈಕೋರ್ಟ್ ಜೂನ್ 12ರವರೆಗೆ ಎಚ್‌ಎಸ್‌ಆರ್‌ಪಿ ಇಲ್ಲದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳದಂತೆ ತಿಳಿಸಿತ್ತು. ಹೀಗಾಗಿ ಮೇ 31ರ ಗಡುವು ಮುಗಿದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದೀಗ ಬುಧವಾರ ಹೈಕೋರ್ಟ್ ನೀಡುವ ನಿರ್ದೇಶನವನ್ನಾಧರಿಸಿ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವು ವಿಸ್ತರಿಸಬೇಕೆ? ಅಥವಾ ಎಚ್‌ಎಸ್‌ಆರ್‌ಪಿ ಇಲ್ಲದ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆ ಎಂಬ ಬಗ್ಗೆ ನಿರ್ಧರಿಸುತ್ತೇವೆ.
ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ