
ವಿಜಯಪುರ: ಜಿಲ್ಲೆಯ ಬಿಜೆಪಿ ಮುಖಂಡರಲ್ಲಿದ್ದ ಭಿನ್ನಮತ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಸ್ಫೋಟವಾಗಿದ್ದು, ಇದು ಬಿಜೆಪಿ ನಾಯಕರಲ್ಲಿ ಇರುಸು ಮುರುಸು ಉಂಟು ಮಾಡಿದೆ. ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವಿನ ಭಿನ್ನಮತ ಫೇಸ್‌ಬುಕ್‌ನಲ್ಲಿ ಹೊರಬಂದಿದೆ.
ಜಿಗಜಿಣಗಿ ಗುರುವಾರವಷ್ಟೇ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ವಿಜಯಪುರ ಮಾರುಕಟ್ಟೆಯಲ್ಲಿ ಶಾಸಕ ಯತ್ನಾಳ್ ಹಣ ಸಂಗ್ರಹಿಸಿದ್ದಾರೆ ಎಂದು ಪರೋಕ್ಷವಾಗಿ ಕುಟುಕಿದ್ದರು.
ಶಾಸಕ ಯತ್ನಾಳ್ ಇದಕ್ಕೆ ಕೌಂಟರ್ ಆಗಿ ಫೇಸ್‌ಬುಕ್‌ನಲ್ಲಿ 10 ವರ್ಷದ ಸಂಸದರ ನಿಧಿ ಎಲ್ಲಿ? ಅದು ಯಾವ ಹಳ್ಳಿಗೆ ತಲುಪಿದೆ? ಸಂಸದರ ದತ್ತು ಗ್ರಾಮವಾದ ಮಕಣಾಪುರ ಇನ್ನೂ ಹಿಂದುಳಿದೆ. ನಿಮಗೆ ನಾಚಿಕೆಯಾಗಬೇಕು. ವಿನಾಶ ಕಾಲಕ್ಕೆ ವಿಪರೀತ ಬುದ್ದಿ ಎಂದು ಜಿಗಜಿಣಗಿ ವಿರುದ್ಧ ಫೇಸ್ ಬುಕ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದಾಗಿ ಬೂದಿ ಮುಚ್ಚಿದ ಕೆಂಡದಂತಿದ್ದ ಬಿಜೆಪಿಯಲ್ಲಿನ ಭಿನ್ನಮತ ಈಗ ಬಹಿರಂಗಗೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ