ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ. 6ರವರೆಗೆ ಕಾಯುವುದು ಯಾಕೆ? ಈಗಿನಿಂದಲೇ ಹೋರಾಟ ಮಾಡಲಿ, ಬೇಡ ಎಂದವರು ಯಾರು? ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕಾಗಿತ್ತೋ ಅದನ್ನು ಮಾಡದೆ ಬೇಡದ ವಿಷಯದ ಬಗ್ಗೆ ಮಾತ ನಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಛೇಡಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಕನಕಪುರ(ಜೂ.01): ವಾಲ್ಮೀಕಿ ನಿಗಮದ ಹಣ ದುರುಪಯೋಗ ಹಾಗೂ ಅಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ಬೇಡಿಕೆಗೆ ಸಂಬಂಧಿಸಿ ನಾನು ಮತ್ತು ಮುಖ್ಯಮಂತ್ರಿ ವಾಸ್ತ ವಾಂಶಏನೆಂಬುದನ್ನು ಪರಿಶೀಲಿಸುತ್ತೇವೆ, ಆ ಬಳಿಕ ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಶುಕ್ರವಾರ ಮಾತನಾಡಿದ ಅವರು, ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂ. 6ರವರೆಗೆ ಕಾಯುವುದು ಯಾಕೆ? ಈಗಿನಿಂದಲೇ ಹೋರಾಟ ಮಾಡಲಿ, ಬೇಡ ಎಂದವರು ಯಾರು? ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕಾಗಿತ್ತೋ ಅದನ್ನು ಮಾಡದೆ ಬೇಡದ ವಿಷಯದ ಬಗ್ಗೆ ಮಾತ ನಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಛೇಡಿಸಿದರು. ಈಶ್ವರಪ್ಪ ಪ್ರಕರಣಕ್ಕೂ ಇದು ಒಂದೇ ಎಂದು ಹೇಳಲಾಗದು ಎಂದು ತಿಳಿಸಿದರು.
ಸಿದ್ದು ಸರ್ಕಾರದ ಮೊದಲ ವಿಕೆಟ್ ಪತನ ನಿಶ್ಚಿತ: ಅಶೋಕ್
ಇದೇ ವೇಳೆ ರಾಜ್ಯದಲ್ಲಿ ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕೆಗೆ ಪ್ರತಿಕ್ರಿಯಿ ಸಿದಅವರು, ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದ ವೇಳೆ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಮರೆತಿರುವಂತಿದೆ ಎಂದರು.