Rainfall Forecast ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ, ಬೇಗ ಮನೆ ಸೇರ್ಕೊಳ್ಳಿ

By Suvarna NewsFirst Published Jun 15, 2022, 4:01 PM IST
Highlights

* ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
 * ಅಲ್ಲಲ್ಲಿ ಅಧಿಕ ಮಳೆಯಾಗಲಿದೆ ಎಂದ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ
* ಬಿಬಿಎಂಪಿಯಿಂದಲೂ ಮಳೆ ಮುನ್ಸೂಚನೆ

ಬೆಂಗಳೂರು, (ಜೂನ್.15): ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆಯಾಗಲಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಸೂಚೆನೆ ಕೊಟ್ಟಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದು(ಬುಧವಾರ) ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆಯಾಗಲಿದ್ದು. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ  ತಿಳಿಸಿದೆ.

ಮಳೆ ಮುನ್ಸೂಚನೆ: ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಕರಾವಳಿ ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. pic.twitter.com/a0mX4P3Az6

— KSNDMC (@KarnatakaSNDMC)

ಬಿಬಿಎಂಪಿ ಮಳೆ ಮುನ್ಸೂಚನೆ:
ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಮಳೆ ಸಾಧ್ಯತೆ ಇದೆ ಎಂದು ಬಿಬಿಎಂಪಿ ಮುನ್ಸೂಚನೆ ನೀಡಿದೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. 

ಬಿಬಿಎಂಪಿ ಮಳೆ ಮುನ್ಸೂಚನೆ: ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ. pic.twitter.com/ptfV9RTmPC

— KSNDMC (@KarnatakaSNDMC)

Karnataka Monsoon ನೈಋತ್ಯ ಮಾನ್ಸೂನ್ ಪ್ರವೇಶ: ಕರ್ನಾಟಕದಲ್ಲಿ ಮಳೆ ಮುನ್ಸೂಚನೆ

ಕರ್ನಾಟಕದಲ್ಲೂ ಮಳೆ
ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ಮಂಗಳವಾರದಿಂದ 3 ದಿನ ವರುಣನ ಆರ್ಭಟ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ. ಹೀಗಾಗಿ, ಕರಾವಳಿಯಲ್ಲಿ ಹಳದಿ ಅಲರ್ಟ್​ (Yellow Alert) ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಜೂನ್ 15ರಿಂದ ಮಳೆ ಹೆಚ್ಚಾಗಲಿದೆ. ಜೂನ್ 16ರಿಂದ ಉತ್ತರ ಒಳನಾಡಿನಲ್ಲಿ ಚದುರಿದ ಮಳೆ ಯಾಗಲಿದೆ ಎಂದು IMD ಮುನ್ಸೂಚನೆ ನೀಡಿತ್ತು

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂ. 15ರಿಂದ ಹಾಗೂ ಉತ್ತರ ಒಳನಾಡಿನಲ್ಲಿ ಜೂ. 16ರಿಂದ ಮಳೆ ಬಿರುಸು ಪಡೆಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೆಳಗಾವಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

24 ಗಂಟೆಗಳ ಬಿಬಿಎಂಪಿ ಮಳೆ ನಕ್ಷೆ: 
14 ಜೂನ್ 2022ರ 8.30AM ರಿಂದ 15th ಜೂನ್ 2022ರ 8.30AM ರವರೆಗೆ, ಅತ್ಯಧಿಕ 38ಮಿಮೀ ಮಳೆಯಾಗಿದೆ. ಬೆಂಗಳೂರು ದಕ್ಷಿಣದ ಕೋರಮಂಗಲದಲ್ಲಿ 38ಮಿಮೀ ಅಧಿಕ ಮಳೆಯಾಗಿದೆ ಎಂದು KSNDMC ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದೆ.

ಇನ್ನು ಇದೇ ಸಮಯದಲ್ಲಿ ಕರ್ನಾಟಕದಲ್ಲಿ ಅತ್ಯಧಿಕ 156ಮಿಮೀ ಮಳೆಯಾಗಿದೆ. ಅದು ಕೋಲಾರದ ಕೆಜಿಎಫ್‌ ಘಟ್ಟಮಾದಮಂಗಲದಲ್ಲಿ 156ಮಿಮೀ ಸುರಿದಿದೆ.

ಮಳೆ ಮುನ್ಸೂಚನೆ: ರಾಜ್ಯದ, ಮಲೆನಾಡು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧರಣ ಮಳೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ಜೂನ್ 13ರಂದು ತಿಳಿಸಿತ್ತು.

ನೈಋತ್ಯ ಮಾನ್ಸೂನ್ ಪ್ರವೇಶ
ಇನ್ನು ನೈಋತ್ಯ ಮುಂಗಾರು ಮಾರುತಗಳು ಅವಧಿಗಿಂತಲೂ ಮುನ್ನವೇ ಪ್ರವೇಶಿಸಿದ್ದು, ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳಲ್ಲಿ ಈಶಾನ್ಯ ಭಾರತದ ಹಲವು ಭಾಗಗಳಲ್ಲೂ ಭಾರಿ ಮಳೆ ಸಾಧ್ಯತೆಯಿದೆ. ಜೂನ್ 15 ಮತ್ತು 17 ರ ನಡುವೆ ಬಿಹಾರ, ಜಾರ್ಖಂಡ್, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಗಂಗಾನದಿ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

click me!