
ಬೆಂಗಳೂರು : ಇಸ್ಫೋಸಿಸ್ ಫೌಂಡೇಶನ್‌ನ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರ ಹೆಸರಿನಲ್ಲಿ ನಕಲಿ ಲೆಟರ್‌ಹೆಡ್ ಸೃಷ್ಟಿಸಿ, ಹೊಸ ಮೊಬೈಲ್ ಅಪ್ಲಿಕೇಷನ್‌ನ ಪ್ರಚಾರ ರಾಯಭಾರಿಯಾಗುವಂತೆ ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ ದೇವರಕೊಂಡ ಅವರಿಗೆ ಪತ್ರ ಬರೆದಿರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಇಸ್ಫೋಸಿಸ್ ಫೌಂಡೇಶ್‌ನಲ್ಲಿ ಕೆಲಸ ನಿರ್ವಹಿಸುವ ನಿವೃತ್ತ ಸೇನಾಧಿಕಾರಿ ಎಂ.ರಮೇಶ್ ಎಂಬುವವರು ಕೃಷ್ಣ ಎಂಬಾತನ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.
ಸುಧಾಮೂರ್ತಿ ಅವರ ಹೆಸರಿನಲ್ಲಿ ಕೃಷ್ಣ ನಕಲಿ ಲೆಟರ್‌ಹೆಡ್ ಸೃಷ್ಟಿಸಿದ್ದ. ಬಳಿಕ ಸುಧಾಮೂರ್ತಿ ಅವರ ಸಹಿಯನ್ನು ನಕಲು ಮಾಡಿ ಅದನ್ನು ತೆಲುಗು ನಟ ವಿಜಯ್ ದೇವರಕೊಂಡ ಅವರ ಹೈದರಾಬಾದ್ ವಿಳಾಸಕ್ಕೆ ಕಳುಹಿಸಿದ್ದಾನೆ. ಈ ನಕಲಿ ಲೆಟರ್‌ಹೆಡ್‌ನಲ್ಲಿ ಸುಧಾಮೂರ್ತಿ ಅವರ ಪ್ರಾಯೋಜಕತ್ವದಲ್ಲಿ ‘ಆಫರ್ಸ್ ನಿಯರ್ ಬೈ’ ಎಂಬ ಮೊಬೈಲ್ ಅಪ್ಲಿಕೇಷನ್ ನಿರ್ಮಿಸಿರುವುದಾಗಿ ಸುಳ್ಳು ವಿವರವನ್ನು ಆರೋಪಿ ನೀಡಿದ್ದ. ಜತೆಗೆ, ರಾಯಭಾರಿ ಆಗುವಂತೆ ಚಿತ್ರನಟನನ್ನು ಕೋರಿ ಸ್ಪೀಡ್ ಪೋಸ್ಟ್ ಮಾಡಿದ್ದ.
ಆದರೆ, ಕೆಲ ತಾಂತ್ರಿಕ ಕಾರಣಗಳಿಂದ ನಟ ವಿಜಯ ದೇವರಕೊಂಡ ಅವರ ಕಚೇರಿ ಸಿಬ್ಬಂದಿ ಪೋಸ್ಟ್ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಪತ್ರ ನೇರವಾಗಿ ಇಸ್ಫೋಸಿಸ್ ಫೌಂಡೇಶನ್ ಕಚೇರಿಗೆ ವಾಪಸ್ ಬಂದಿದೆ. ಇದರಿಂದ ಅಚ್ಚರಿಗೊಂಡ ಕಚೇರಿ ಸಿಬ್ಬಂದಿ ಕೂಡಲೇ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಶೀಘ್ರ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ