Latest Videos

ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ ಅನಾರೋಗ್ಯದಿಂದ ನಿಧನ!

By Govindaraj SFirst Published May 22, 2024, 9:22 PM IST
Highlights

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ (40) ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಬೆಳಗಾವಿ (ಮೇ.22): ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ (40) ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಯಶ್ರೀ ಅವರು ಉತ್ತರ ಕರ್ನಾಟಕ ಭಾಗದಲ್ಲಿ ರೈತರ ಪರ ಹೋರಾಟ ಮಾಡಿದ್ದರು. ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡಿದ್ದರು. 

ಕಬ್ಬಿನ ಬಾಕಿ ಬಿಲ್ ಪಾವತಿಗಾಗಿ ಒತ್ತಾಯಿಸಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ ಹೋರಾಟ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತಾಡಿ ಟೀಕೆಗೆ ಒಳಗಾಗಿದ್ದರು. ಬಳಿಕ ರಾಜ್ಯಾದ್ಯಂತ ಸಂಚಾರ ಮಾಡಿ ಮಹಿಳೆಯರನ್ನು ರೈತ ಸಂಘಟನೆಯಲ್ಲಿ ತೊಡಗಿಸಿದ್ದರು. ಸದ್ಯ ಜಯಶ್ರೀ ಗುರನ್ನವರ್ ಓರ್ವ ಮಗನನ್ನ ಅಗಲಿದ್ದಾರೆ.

ಮಾನವ ಆನೆ ಸಂಘರ್ಷ: ಏಕಕಾಲದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಆನೆ ಗಣತಿ!

ಕಬ್ಬಿಗೆ ಸೂಕ್ತ ದರ ನಿಗದಿ ಮಾಡುವುದು, ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತ ಬಂದಿದ್ದರು. ರೈತಪರ, ಕಾರ್ಮಿಕರ ಪರ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಜಯಶ್ರೀ ಬೆಳಗಾವಿ ಜಿಲ್ಲೆಯ ಮುಂಚೂಣಿ ರೈತ ಹೋರಾಟಗಾರ್ತಿಯಾಗಿದ್ದರು. ಅವರ ಅಕಾಲಿಕ ನಿಧನದಿಂದ ರೈತ ಪರ ಹೋರಾಟದ ಕೊಂಡಿಯೊಂದು ಕಳಚಿದಂತಾಗಿದೆ.

click me!