ಏಳು ದಿನಗಳ ಹಿಂದೆ ಕಾಣೆಯಾಗಿದ್ದ ಕೃಷಿಕ; ಅರಣ್ಯಪ್ರದೇಶದಲ್ಲಿ ಮೃತದೇಹ ಪತ್ತೆ!

Published : May 27, 2023, 10:48 AM ISTUpdated : May 27, 2023, 10:52 AM IST
ಏಳು ದಿನಗಳ ಹಿಂದೆ ಕಾಣೆಯಾಗಿದ್ದ ಕೃಷಿಕ; ಅರಣ್ಯಪ್ರದೇಶದಲ್ಲಿ ಮೃತದೇಹ ಪತ್ತೆ!

ಸಾರಾಂಶ

ವಾರದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮನೆ ಹಿಂಭಾಗವೇ ಇರುವ ದಟ್ಟ ಅರಣ್ಯಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಶಿವಮೊಗ್ಗ (ಮೇ.27) : ವಾರದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತ ದುರ್ದೈವಿ. ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದರು. ಕುಟುಂಬಸ್ಥರು ಎಲ್ಲ ಕಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಎಲ್ಲಿಯೂ ಸುಳಿವು ಸಿಗದಿದ್ದಾಗ ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ(Ripponpete police station)ಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಏಳು ದಿನಗಳ ಬಳಿಕ ವೀರಪ್ಪ ಅವರ ಮನೆ ಹಿಂಭಾಗವೇ ಇರುವ ದಟ್ಟ ಅರಣ್ಯಪ್ರದೇಶದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.  ವೀರಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಅದ್ಯಾಗೂ ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೊಲೀಸ್ ತನಿಖೆಯ ಬಳಿಕವೇ ಪ್ರಕರಣ ಬಗ್ಗೆ ಮಾಹಿತಿ ಸಿಗಲಿದೆ.

Ramanagara: ಬ್ಯಾಂಕ್‌ ನೋಟಿಸ್‌ಗೆ ಹೆದರಿ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

₹4 ಲಕ್ಷ ಸಾಲ ತೀರಿಸಲು ಆಗದ್ದಕ್ಕೆ ರೈತ ಆತ್ಮಹತ್ಯೆ

ಹರಪನಹಳ್ಳಿ:  ಕೃಷಿಗಾಗಿ ಮಾಡಿದ ಸಾಲ ತೀರಿಸಲು ಆಗದೆ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹುಲ್ಲಿಕಟ್ಟಿಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕುದುರೆ ಹನುಮಂತಪ್ಪ (53) ಆತ್ಮಹತ್ಯೆಗೆ ಶರಣಾದ ರೈತ.

ಮೃತ ಹನುಮಂತಪ್ಪ ಹಾರಕನಾಳು ವಿಎಸ್‌ಎಸ್‌ಎನ್‌ ಹಾಗೂ ಇತರ ಬ್ಯಾಂಕುಗಳಲ್ಲಿ .2 ಲಕ್ಷ ಹಾಗೂ ಕೈಗಡ .2 ಲಕ್ಷ ಹೀಗೆ .4 ಲಕ್ಷ ಸಾಲವನ್ನು ಮಾಡಿದ್ದರು. ಜಮೀನಿನಲ್ಲಿ ಬೆಳೆ ಬರದೆ ಸಾಲ ತೀರಿಸುವ ಕುರಿತು ಚಿಂತಿತರಾಗಿದ್ದರು ಎಂದು ಹೇಳಲಾಗಿದೆ.

ಮಗುವಿನಂತೆ ಬೆಳೆಸಿದ್ದ ದ್ರಾಕ್ಷಿ ಬೆಳೆಗೆ ತಪ್ಪು ಔಷಧ ಸಿಂಪಡಣೆ: ಬೆಳೆ ನಾಶಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ರೈತ

ಸಾಲದಿಂದ ನೊಂದು ಕುದುರೆ ಹನುಮಂತಪ್ಪ ಮನೆಯಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣರಾಗಿದ್ದಾರೆ. ಮೃತರಿಗೆ ನಾಲ್ವರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧುಗಳಿದ್ದಾರೆ. ಮೃತ ರೈತನ ಮನೆಗೆ ಮುಖಂಡರಾದ ಎಚ್‌.ಎಂ. ಮಲ್ಲಿಕಾರ್ಜುನ, ತಾಪಂ ಮಾಜಿ ಸದಸ್ಯ ಎಚ್‌. ಚಂದ್ರಪ್ಪ, ವೈ.ಕೆ.ಬಿ. ದುರುಗಪ್ಪ, ಎಚ್‌. ವಸಂತಪ್ಪ, ಎಸ್‌.ಆರ್‌. ತಿಮ್ಮಣ್ಣ, ಕೆ. ಅಶೋಕ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹರಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪಿಎಸ್‌ಐ ಶಾಂತಮೂರ್ತಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್