ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುವ ವೇಳೆ ಜೇನು ನೊಣಗಳ ದಾಳಿ: ಕೃಷಿಕ ಸಾವು

Published : Mar 16, 2026, 01:44 PM IST
chikkamagaluru honey bee atatck

ಸಾರಾಂಶ

ತೋಟದಲ್ಲಿ ಕೆಲಸ ಮಾಡುತ್ತಿದ್ದ 61 ವರ್ಷದ ಕೃಷಿಕರೊಬ್ಬರ ಮೇಲೆ ಜೇನುಹುಳುಗಳು ದಾಳಿ ಮಾಡಿದ ಪರಿಣಾಮ ಅವರು ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ನಡೆದಿದೆ.

ಜೇನು ನೊಣಗಳ ದಾಳಿಗೆ ರೈತ ಬಲಿ

ಚಿಕ್ಕಮಗಳೂರು: ಜೇನುಹುಳುಗಳ ದಾಳಿಗೆ ತುತ್ತಾದ ಕೃಷಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣದಲ್ಲಿ ನಡೆದಿದೆ. 61 ವರ್ಷ ಕೃಷಿಕ ಕರಿಯಾ ನಾಯ್ಕ ಮೃತಪಟ್ಟವರು. ನಿನ್ನೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಕರಿಯಾ ನಾಯ್ಕ ಅವರ ಮೇಲೆ ಏಕಾಏಕಿ ಜೇನುಹುಳುಗಳು ದಾಳಿ ಮಾಡಿದ್ದವು. ಇದರಿಂದ ಕೃಷಿಕ ಕರಿಯನಾಯ್ಕ ಅವರು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಸಖರಾಯಪಟ್ಟಣ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರಿಗೆ ಕರೆದೊಯ್ಯುವ ವೇಳೆ ಅವರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕರಿಯಾ ನಾಯ್ಕ ಸಾವನ್ನಪ್ಪಿದ್ದು, ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ:  ಚೀಟಿ ಹೆಸರಲ್ಲಿ ಜನರಿಗೆ ಲಕ್ಷ ಲಕ್ಷ ರೂ. ನಾಮ ಹಾಕಿದ್ದ ಬಳ್ಳಾರಿಯ ವೆಂಕಟೇಶನ ಕಡೆಗೂ ಬಂಧಿಸಿದ ಪೊಲೀಸರು

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚೀಟಿ ಹೆಸರಲ್ಲಿ ಜನರಿಗೆ ಲಕ್ಷ ಲಕ್ಷ ರೂ. ನಾಮ ಹಾಕಿದ್ದ ಬಳ್ಳಾರಿಯ ವೆಂಕಟೇಶನ ಕಡೆಗೂ ಬಂಧಿಸಿದ ಪೊಲೀಸರು
ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110 ಅಡಿಗೆ ಕುಸಿತ: ಬೆಂಗಳೂರು-ಮೈಸೂರಿಗೆ ಕುಡಿಯುವ ನೀರಿನ ಆತಂಕ ಇದೆಯೇ?