ಕಬ್ಬಿಗಿಂತ ಸಿಹಿ: ಜೋಳದ ದಂಟಿನಿಂದ ಬೆಲ್ಲ ರೆಡಿ ಮಾಡಿದ ಬಾಗಲಕೋಟೆ ರೈತ ಮಹಾಲಿಂಗಪ್ಪ!

Published : Oct 05, 2025, 11:55 AM IST
Mahalingappa Itnal

ಸಾರಾಂಶ

ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪರಂಪರಾಗತವಾಗಿ ಕಬ್ಬಿನಿಂದ ಬೆಲ್ಲ ತಯಾರಿಸಲಾಗುತ್ತಿತ್ತು.

ಹುಬ್ಬಳ್ಳಿ (ಅ.05): ಪ್ರಗತಿಪರ ರೈತ ಮಹಾಲಿಂಗಪ್ಪ ಇಟ್ನಾಳ ಅವರು ಜೋಳದ ದಂಟಿನಿಂದ ಬೆಲ್ಲ ತಯಾರಿಸುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬಾಗಲಕೋಟೆ ಜಿಲ್ಲೆಯ ರೈತ ಮಾಹಿತಿ ನೀಡಿದರು. ಪರಂಪರಾಗತವಾಗಿ ಕಬ್ಬಿನಿಂದ ಬೆಲ್ಲ ತಯಾರಿಸಲಾಗುತ್ತಿತ್ತು. ಪ್ರಪ್ರಥಮ ಬಾರಿಗೆ ಸಿಹಿ ಜೋಳದ ದಂಟಿನಿಂದ ಬೆಲ್ಲ ತಯಾರಿಸಬಹುದು ಎಂಬುದನ್ನು ಸಾಧಿಸಿ ತೋರಿಸಿದ್ದೇನೆ ಎಂದರು. ಇಷ್ಟು ದಿನ ರೈತರು ತಮ್ಮ ಜಾನುವಾರುಗಳಿಗೆ ಅಗತ್ಯವಾದ ಜೋಳದ ದಂಟನ್ನು ಇಟ್ಟುಕೊಂಡು ಉಳಿದದ್ದನ್ನು ಮಾರಾಟ ಮಾಡುತ್ತಿದ್ದರು.

ಇಲ್ಲವೇ, ಸುಟ್ಟು ಹಾಕುತ್ತಿದ್ದರು, ಆದರೆ, ಇದೀಗ ಜೋಳ ಬೆಳೆದ 120 ದಿನಗಳ ಒಳಗಾಗಿ ಕಟಾವು ಮಾಡಿ ಕೊಟ್ಟರೆ ಪ್ರತಿ ಟನ್‌ಗೆ ₹3,000 ಲಾಭ ಗಳಿಸಬಹುದಾಗಿದೆ ಎಂದರು. ಈಗಾಗಲೇ ಜೋಳದ ದಂಟಿನಿಂದ ತಯಾರಿಸಿದ ಬೆಲ್ಲವನ್ನು ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿಸಲಾಗಿದೆ. ಕಬ್ಬಿನ ಬೆಲ್ಲಕ್ಕಿಂತ ಜೋಳದಿಂದ ತಯಾರಿಸಿದ ಬೆಲ್ಲ ಉತ್ತಮ ಎಂಬುದು ಸಾಬೀತಾಗಿದೆ. ಇತ್ತೀಚೆಗೆ ಅಭಿವೃದ್ಧಿಗೊಂಡಿರುವ ಹೊಸ ತಳಿಯ ಸಿಹಿ ಜೋಳಗಳಲ್ಲಿ ಕಡ್ಡಿಯ ಗಾತ್ರ ದೊಡ್ಡದಾಗಿದ್ದು, ಸಿಹಿಯ ಅಂಶವೂ ಹೆಚ್ಚಾಗಿದೆ. ಇದೇ ವೈಶಿಷ್ಟ್ಯವನ್ನು ಗಮನಿಸಿ, ಕಬ್ಬಿನಿಂದ ಬೆಲ್ಲ ತಯಾರಿಸುವ ವಿಧಾನವನ್ನು ಅಳವಡಿಸಿಕೊಂಡು ಜೋಳದ ದಂಟಿನಿಂದ ಬೆಲ್ಲ ತಯಾರಿಕೆಯಲ್ಲಿ ಯಶಸ್ವಿ ಆಗಿರುವುದಾಗಿ ತಿಳಿಸಿದರು.

ಶೇ.70ರಷ್ಟು ಸಿಹಿ

ಅ.8ರಂದು ಕೃಷಿ ವಿಜ್ಞಾನಿಗಳ ಸಮ್ಮುಖದಲ್ಲಿ ಮತ್ತೊಮ್ಮೆ ಜೋಳದ ದಂಟಿನಿಂದ ರಸ ತೆಗೆದು ಬೆಲ್ಲ ತಯಾರಿಸುವ ಮೂಲಕ ಪ್ರಾತ್ಯಕ್ಷಿಕೆ ಮಾಡಿ ತೋರಿಸಲಾಗುವುದು. ಕಬ್ಬಿಗೆ ಹೋಲಿಸಿದರೆ ಜೋಳದ ದಂಟಿನಿಂದ ತಯಾರಿಸಿದ ಬೆಲ್ಲ ಶೇ.70ರಷ್ಟು ಸಿಹಿಯಾಗಿದೆ. ಈ ವೇಳೆ ಬೆಲ್ಲವನ್ನು ಹೆಚ್ಚಿನ ದಿನ ಸಂಗ್ರಹಿಸುವ ನಿಟ್ಟಿನಲ್ಲಿ ಕೃಷಿ ವಿವಿಯ ತಜ್ಞರಿಂದ ಸಲಹೆ ಪಡೆದು ಆ ನಿಟ್ಟಿನಲ್ಲಿ ಪ್ಯಾಕಿಂಗ್ ಮತ್ತು ಮಾರಾಟ, ಬೆಲೆ ನಿಗದಿ ಬಗ್ಗೆ ನಿರ್ಧಾರ ಮಾಡಲಾಗುವುದು ಎಂದು ವಿವರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ಅಪಾರ್ಟ್‌ಮೆಂಟ್‌ನ 16 ಕುಟುಂಬಗಳಿಗೆ ರೌಡಿಸಂ ದರ್ಶನ; ಮಾಟ-ಮಂತ್ರ ಮಾಡಿಸಿ ಕಿರುಕುಳ!
'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ