ಸಾಲಮನ್ನಾಕ್ಕಾಗಿ ರೈತರಿಂದ ಬಂದ್

By Web DeskFirst Published Jul 15, 2018, 9:44 AM IST
Highlights

 ರೈತರ ಸಂಪೂರ್ಣ ಸಾಲಮನ್ನಾ  ಮಾಡಬೇಕೆಂದು ಒತ್ತಾಯಿಸಿ ರೈತ ಹುತಾತ್ಮ ದಿನಾಚರಣೆ ದಿನವಾದ ಜುಲೈ 21 ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಚಳವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಉದ್ದೇಶಿಸಿದೆ. 
 

ಬೆಂಗಳೂರು: ರೈತರ ಸಂಪೂರ್ಣ ಸಾಲಮನ್ನಾ  ಮಾಡಬೇಕೆಂದು ಒತ್ತಾಯಿಸಿ ರೈತ ಹುತಾತ್ಮ ದಿನಾಚರಣೆ ದಿನವಾದ ಜುಲೈ 21 ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಚಳವಳಿ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಉದ್ದೇಶಿಸಿದೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪ್ರದಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ಅವರು, ಎಚ್ .ಡಿ.ಕುಮಾರಸ್ವಾಮಿಯವರು ಚುನಾವಣಾ ಪೂರ್ವದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿ ದ್ದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರವೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದರು. 

ಆದರೆ, ಇದೀಗ ಸುಸ್ತಿ ಬೆಳೆ ಸಾಲ 2 ಲಕ್ಷ ರು. ಮಾತ್ರ ಮನ್ನಾ ಮಾಡುತ್ತಿದ್ದಾರೆ. ಅದಕ್ಕೂ ಷರತ್ತುಗಳನ್ನು ಹಾಕುತ್ತಿದ್ದಾರೆ. ಇದು ಯಾವ ನ್ಯಾಯ? ಇದರಿಂದ ರೈತ ಸಮುದಾಯಕ್ಕೆ ಪ್ರಯೋಜನವಾಗುವುದಿಲ್ಲ ಎಂದರು. ರೈತರ ಬೆಳೆ ಸಾಲವನ್ನು ಒಂದೇ ಕಂತಿನಲ್ಲಿ ಮನ್ನಾ ಮಾಡಬೇಕು. ಅಂದು ಬೆಳಗ್ಗೆ 11 ರಿಂದ ಸಂಜೆ 5 ರವರೆಗೆ ಹೊಸಪೇಟೆ ಬಳಿಯ ಇಳಕಲ್ ಸರ್ಕಲ್ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು. 

ನಮ್ಮ ಬೇಡಿಕೆಗೆ ಸ್ಪಂದಿಸದಿದ್ದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭಾಗವಹಿಸುವ ಎಲ್ಲಾ ಸಾರ್ವಜನಿಕ ಸಭೆಗಳ ಮುಂದೆ ಕಪ್ಪು ಭಾವುಟ ಹಾರಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

(ಸಾಂದರ್ಬಿಕ ಚಿತ್ರ)

click me!