
ಶಿವಮೊಗ್ಗ (ಡಿ.11) : ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರದ ಅಕ್ರಮಗಳನ್ನು ಪ್ರಶ್ನಿಸುವ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಬೆಂಬಲಿತ ಗೂಂಡಾಗಳಿಂದ ಹಾಡಹಗಲೇ ದಾಳಿಗಳಾಗುತ್ತಿವೆ. ಕಲಬುರಗಿ, ಬೆಳಗಾವಿ ಹಲ್ಲೆ ಪ್ರಕರಣ ಬೆನ್ನಲ್ಲೇ ಇದೀಗ ಭದ್ರಾವತಿಯ ನಮ್ಮ ಬಿಜೆಪಿ ಮುಖಂಡ ಗೋಕುಲ್ ಕೃಷ್ಣನ್ ಅವರ ಮೇಲೆ ನಡೆದಿರುವ ದಾಳಿ ಆತಂಕಕಾರಿ ಘಟನೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರಾವತಿ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧ ಪೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದುಕೊಂಡಿರುವ ಬಿವೈ ವಿಜಯೇಂದ್ರ ಅವರು, ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತಿದ್ದಾರೆ. ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮ ದಂಧೆಗಳಿಗೆ ಸ್ಥಳೀಯ ಶಾಸಕರ ಕೈವಾಡ ಇರುವ ಬಗ್ಗೆ ಜಾಲತಾಣದಲ್ಲಿ ಗೋಕುಲ್ ಕೃಷ್ಣನ್ ಪ್ರಶ್ನಿಸಿದ್ದೇ, ಈ ದಾಳಿ ನಡೆಯಲು ಕಾರಣವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಹಲ್ಲೆ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿರುವಂತಿದೆ. ತಕ್ಷಣವೇ ಭದ್ರಾತಿಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ನಮ್ಮ ಕಾರ್ಯಕರ್ತನಿಗೆ ರಕ್ಷಣೆ ನೀಡಿ, ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಮಯದಲ್ಲಿ ಎಂಪಿಎಂ ಕಾರ್ಖಾನೆ ಆರಂಭಿಸುವುದಾಗಿ ಭರವಸೆ ನೀಡಿದ್ದ ಭದ್ರಾವತಿ ಶಾಸಕ. ಆದರೆ ಈ ವಿಚಾರದಲ್ಲಿ ಮಾತುಕೊಟ್ಟಂತೆ ನಡೆಯದಿದ್ದಕ್ಕೆ ಬಿಜೆಪಿ ಕಾರ್ಯಕರ್ತ ಫೇಸ್‌ಬುಕ್ ಪೋಸ್ಟ್‌ನಲ್ಲಿ ಶಾಸಕರ ವಿರುದ್ಧ ದನಿ ಎತ್ತಿದ್ದ. ಒಸಿ ಮತ್ತು ಮಟ್ಕಾ ನಿಲ್ಲಿಸಿ ಕಾರ್ಖಾನೆ ಆರಂಭಿಸಿ ಎಂದು ಗೋಕುಲ್ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದರು. ಇದೇ ವಿಚಾರಕ್ಕೆ ಕಿಡಿಗೇಡಿ ಬೈಕ್‌ನಲ್ಲಿ ಬಂದು ಗೋಕುಲ್ ಕೃಷ್ಣನ್ಗೆ ಸೇರಿದ ಕಾರಿನ ಗಾಜು ಒಡೆದಿದ್ದರು. ಈ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ನಿನ್ನೆ ತಡರಾತ್ರಿ ಕಿಡಿಗೇಡಿಗಳು ಗೋಕುಲ್ ಕೃಷ್ಣನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ