Nipah Virus ಹರಡುವ ಆತಂಕ; ಕೇರಳ-ಕರ್ನಾಟಕ ಗಡಿಯಲ್ಲಿ ಹೈ ಅಲರ್ಟ್!

By Ravi JanekalFirst Published Sep 14, 2023, 4:59 PM IST
Highlights

ನೆರೆ ರಾಜ್ಯ ಕೇರಳದಲ್ಲಿ ಇದೀಗ ನಿಫಾ ವೈರಸ್ ಕಾಣಿಸಿಕೊಂಡಿದೆ. ನಿಫಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಡಿಯಲ್ಲಿ ಹೈ ಅಲರ್ಟ್ ಕೈಗೊಳ್ಳುವಂತೆ ಸೂಚಿಸಿದ ಬೆನ್ನಲ್ಲೆ  ಚಾಮರಾಜನಗರ ಜಿಲ್ಲೆಯ ಆರೋಗ್ಯ ಇಲಾಖೆ ಕೂಡ ಜಿಲ್ಲೆಯ  ಕೇರಳ  ಗಡಿಯಾದಂತಹ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ  ಕಟ್ಟೆಚ್ಚರಗೊಳಿಸಿದೆ. 

- ಪುಟ್ಟರಾಜು ಆರ್‌ಸಿ 

ಚಾಮರಾಜನಗರ (ಸೆ.14): ನೆರೆ ರಾಜ್ಯ ಕೇರಳದಲ್ಲಿ ಇದೀಗ ನಿಫಾ ವೈರಸ್ ಕಾಣಿಸಿಕೊಂಡಿದೆ. ನಿಫಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಈ ಹಿನ್ನಲೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಗಡಿಯಲ್ಲಿ ಹೈ ಅಲರ್ಟ್ ಕೈಗೊಳ್ಳುವಂತೆ ಸೂಚಿಸಿದ ಬೆನ್ನಲ್ಲೆ  ಚಾಮರಾಜನಗರ ಜಿಲ್ಲೆಯ ಆರೋಗ್ಯ ಇಲಾಖೆ ಕೂಡ ಜಿಲ್ಲೆಯ  ಕೇರಳ  ಗಡಿಯಾದಂತಹ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ  ಕಟ್ಟೆಚ್ಚರಗೊಳಿಸಿದೆ. 

ಹೌದು ಕೇರಳದಲ್ಲಿ ಇಬ್ಬರು ಮಕ್ಕಳು ನಿಫಾ ವೈರಸ್ ಗೆ ಮೃತಪಟ್ಟ ಹಿನ್ನೆಲೆಯಲ್ಲಿ ಕೇರಳ ಗಡಿ ಹಂಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ (Moolehole checkpost)ನಲ್ಲಿ ಆರೋಗ್ಯ ಇಲಾಖೆ(health department of karnataka) ಅಲರ್ಟ್ ಗೆ ಮುಂದಾಗಿದೆ.  ಮೂಲೆಹೊಳೆ ಚೆಕ್ ಪೋಸ್ಟ್ ನಲ್ಲಿ ವಾಹನಗಳ ತಪಾಸಣೆ ನಡೆಸಲು ನಿರ್ಧರಿಸಲಾಗಿದೆ. 

ಕೇರಳಕ್ಕೆ ಮತ್ತೆ ಕಾಲಿಟ್ಟ ನಿಫಾ ವೈರಸ್‌, ಇಬ್ಬರು ಸಾವು ಕಂಡ ಬೆನ್ನಲ್ಲಿಯೇ ಆರೋಗ್ಯ ಇಲಾಖೆ ಅಲರ್ಟ್‌!

ಕೇರಳದಿಂದ ಬರುವ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಟ್ಟಿದ್ದು ಬರುವಂತಹ ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದ್ದು ನೆಗಡಿ, ಕೆಮ್ಮು, ಜ್ವರದ ಲಕ್ಷಣಗಳು ಕಂಡು ಬಂದರೆ ಅಂತಹವರಿಗೆ ಚಿಕಿತ್ಸೆ ನೀಡಲು ಸರ್ವಸನ್ನದ್ಧವಾಗಿದ್ದು, ಹಂದಿ ಸೇರಿದಂತೆ ಮಾಂಸಾಹಾರ ಪದಾರ್ಥ ಸಾಗಿಸುವ ವಾಹನಗಳ ಮೇಲೆ ನಿಗಾ ಇಡಲಾಗಿದೆ. ಗಡಿ ಜಿಲ್ಲೆಯ ಗುಂಡ್ಲುಪೇಟೆಯಿಂದ ಪ್ರತಿನಿತ್ಯ ಕೂಲಿ ಕೆಲಸ ಹಾಗು ಇನ್ನಿತರ ವಯಕ್ತಿಕ ಕೆಲಸಗಳಿಂದಾಗಿ ಕೇರಳಕ್ಕೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿ ಇರುವುದರಿಂದ ಹಾಗು ಕೇರಳದಿಂದ ಬಂದು ಇಲ್ಲಿ ಜಮೀನು ಪಡೆದು ವ್ಯವಸಾಯ ಮಾಡುತ್ತಿರುವ ಜಮೀನು ಮಾಲೀಕರು ಪ್ರತಿದಿನ ಕೇರಳಕ್ಕೆ ಹೋಗಿ ಬರುವುದರಿಂದ  ಗಡಿಗೆ ಹೊಂದಿಕೊಂಡಂತೆ ಇರುವ ಗುಂಡ್ಲುಪೇಟೆಯ ಸುಮಾರು 158 ಕಾಡಂಚಿನ ಗ್ರಾಮಗಳಲ್ಲಿ ಮನೆ-ಮನೆ ಸರ್ವೇ ನಡೆಸಿ ರೋಗ ಲಕ್ಷಣಗಳು ಕಂಡು ಬಂದವರ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ.

ಇನ್ನೂ ಗಡಿಯಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ  'ನಿಫಾ ವೈರಸ್' ಲಕ್ಷಣಗಳು ಕಾಣಿಸಿಕೊಂಡ್ರೆ ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆ(Gundlupete government hospital)ಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐದು ಹಾಸಿಗೆಗಳ ವಿಶೇಷ ವಾರ್ಡ್ ನಿರ್ಮಾಣ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ. 

ಹಣ್ಣುಗಳನ್ನು ತಿನ್ನೋ ಮುನ್ನ ಹುಷಾರ್‌, ಮತ್ತೆ ಹರಡುತ್ತಿದೆ ಮಾರಣಾಂತಿಕ ನಿಫಾ !

ಒಟ್ನಲ್ಲಿ ಕೇರಳದಲ್ಲಿ ಕಾಣಿಸಿಕೊಂಡ ನಿಫಾ ವೈರಸ್ ನಿಂದ ಚಾಮರಾಜನಗರ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು,ಕಟ್ಟೆಚ್ಚರ ಮೂಲಕ ನಿಫಾ ತಡೆಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಮುಂದಾಗಿದೆ.

click me!