ಹಳೇ ರಸಗೊಬ್ಬರ ಹಳೇದರದಲ್ಲೇ ಮಾರಾಟ

Kannadaprabha News   | Asianet News
Published : Apr 11, 2021, 07:57 AM IST
ಹಳೇ ರಸಗೊಬ್ಬರ  ಹಳೇದರದಲ್ಲೇ ಮಾರಾಟ

ಸಾರಾಂಶ

 ರೈತವಲಯದಿಂದ ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೀಗ ಹಳೆ ದಾಸ್ತಾನನ್ನು ಹಳೆ ದರಕ್ಕೆ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿ ಮತ್ತು ಆಮದುದಾರರ ಮನವೊಲಿಸಲು ತೀವ್ರ ಪ್ರಯತ್ನ ನಡೆಸಿದೆ.

ನವದೆಹಲಿ (ಏ.11):  ರಸಗೊಬ್ಬರ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿರುವುದಕ್ಕ ರೈತವಲಯದಿಂದ ಭಾರೀ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೀಗ ಹಳೆ ದಾಸ್ತಾನನ್ನು ಹಳೆ ದರಕ್ಕೆ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿ ಮತ್ತು ಆಮದುದಾರರ ಮನವೊಲಿಸಲು ತೀವ್ರ ಪ್ರಯತ್ನ ನಡೆಸಿದೆ. ಇಂದು ಇಲ್ಲಿ ಪತ್ರಿಕಾ ಹೇಳಿಕೆಯೊಂದನ್ನು ನೀಡಿರುವ ಸದಾನಂದ ಗೌಡ ಅವರು ಸಾರ್ವಜನಿಕ ವಲಯದ ರಸಗೊಬ್ಬರ ಕಂಪನಿಗಳ ಹೊರತಾಗಿ ಸಹಕಾರಿ ವಲಯದ IFCO ಕಂಪನಿಯು ಹಳೇ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡಲು ಒಪ್ಪಿಕೊಂಡಿದ್ದು ಈಗಾಗಲೇ ತನ್ನ ನಿರ್ಧಾರವನ್ನು ಕಾರ್ಯಗತಗೊಳಿಸಿದೆ ಎಂದಿದ್ದಾರೆ.

ಜೊತೆಗೆ ಸಚಿವ ಡಿ.ವಿ.ಸದಾನಂದ ಗೌಡ ಅವರು ಸೋಮವಾರ ಇಲ್ಲಿ ರಸಗೊಬ್ಬರ ಕಾರ್ಖಾನೆಗಳ ಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಯೂರಿಯಾ ಹೊರತಾದ ವಿವಿಧ ನಮೂನೆಯ ಪೋಷಕಾಂಶ ರಸಗೊಬ್ಬರ ಬೆಲೆಗಳಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವರು ಕರೆದಿರುವ ಈ ಸಭೆಗೆ ಮಹತ್ವ ಬಂದಿದೆ.

ರಸಗೊಬ್ಬರ ಭಾರಿ ದುಬಾರಿ : ರೈತರಿಗೆ ದೊಡ್ಡ ಶಾಕ್‌ .

ಭಾರತವು ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾವಸ್ತುಗಳನ್ನು ಬಹುತೇಕವಾಗಿ ಆಮದು ಮಾಡಿಕೊಳ್ಳುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ತೀವ್ರವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಸಗೊಬ್ಬರ ಉತ್ಪಾದನಾ ವೆಚ್ಚವೂ ಅದೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಎಲ್ಲ ರಸಗೊಬ್ಬರ ಕಂಪನಿಗಳು ತಮ್ಮ ಉತ್ಪನ್ನಗಳ ಬೆಲೆ ಹೆಚ್ಚಿಸಿವೆ. ಆದಾಗ್ಯೂ ಹಳೆ ದಾಸ್ತಾನನ್ನು ಹಳೆ ದರದಲ್ಲಿಯೇ ಮಾರಾಟ ಮಾಡುವಂತೆ ರಸಗೊಬ್ಬರ ಕಂಪನಿಗಳು ಹಾಗೂ ಆಮದುದಾರರ ಮನ ಒಲಿಸಲು ಕೇಂದ್ರ ಸರ್ಕಾರವು ತೀವ್ರ ಪ್ರಯತ್ನ ನಡೆಸಿದೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲಿ ಹಳೆ ದಸ್ತಾನು ಸುಮಾರು ಒಂದುವರೆ ತಿಂಗಳಿಗೆ ಸಾಕಾಗುವಷ್ಟಿದೆ. IFCO ಬಳಿ 11.26 ಲಕ್ಷ ಟನ್‌ ಎನ್ಪಿಕೆ, ಡಿಏಪಿ ಮತ್ತಿತರ ನಮೂನೆಯ ಪೋಷಕಾಂಶಯುಕ್ತ ರಸಗೊಬ್ಬರಗಳ ಹಳೆ ದಸ್ತಾನು ಇದೆ. ರಾಜ್ಯದಲ್ಲಿಯೇ 1.22 ಲಕ್ಷ ಟನ್‌ ದಾಸ್ತಾನಿದೆ. 50 ಕೆಜಿ ಡಿಎಪಿ ಮೂಟೆಯೊಂದಕ್ಕೆ 1200ಗೆ (ಹಳೆ ದರ) ಮಾರಾಟಮಾಡಲಾಗುತ್ತಿದೆ. ಅದೇ ರೀತಿ ಎನ್ಪಿಕೆ-10-26-26 ನಮೂನೆ ರಸಗೊಬ್ಬರ ಮೂಟೆಗೆ .1175, ಎನ್ಪಿಕೆ-12-32-16ಗೆ .1185, ಎನ್ಪಿ-20-20.0.13ಗೆ .925 ಹಾಗೂ 15:15:15 ನಮೂನೆ ರಸಗೊಬ್ಬರಕ್ಕೆ .1025 ಬೆಲೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಹಳೇ ದಾಸ್ತಾನು ಮುಗಿಯುವ ತನಕ ಹಳೆ ದರವೇ ಇರಲಿದ್ದು ರೈತರು ಇದರ ಉಪಯೋಗ ಪಡೆಯಬೇಕಿದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಕಣ | ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ಉದ್ಯೋಗದ ನವಯುಗ!
ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!