ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ; ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!

By Kannadaprabha News  |  First Published Aug 1, 2024, 4:05 PM IST

ಭ್ರೂಣ ಹತ್ಯೆಮಾಡಿಸಿದ ಪ್ರಿಯಕರ ಹಾಗೂ ಆತನ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಓರ್ವ ಮಹಿಳೆ ಪತ್ರ ಬರೆದಿರುವ ಘಟನೆ ನಡೆದಿದೆ.


ರಾಮನಗರ (ಆ.1): ಭ್ರೂಣ ಹತ್ಯೆಮಾಡಿಸಿದ ಪ್ರಿಯಕರ ಹಾಗೂ ಆತನ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಓರ್ವ ಮಹಿಳೆ ಪತ್ರ ಬರೆದಿರುವ ಘಟನೆ ನಡೆದಿದೆ.

ಪ್ರಿಯಕರ ಮತ್ತು ಪೊಲೀಸರಿಂದ ಅನ್ಯಾಯಕ್ಕೊಳಗಾಗಿದ್ದೇನೆ ಎಂದು ಜಿಲ್ಲೆಯ ಮಾಗಡಿ ಮೂಲದ ಮಹಿಳೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಪತ್ರ ಬರೆದಿದ್ದಾರೆ. ಒಂದು ವೇಳೆ ನ್ಯಾಯ ಸಿಗದಿದ್ದರೆ ಎಸ್​ಪಿ ಕಚೇರಿ ಎದುರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆ ಎಚ್ಚರಿಕೆ ಕೂಡ ನೀಡಿದ್ದಾರೆ.

Latest Videos

undefined

ಮೈತ್ರಿ ಪಾದಯಾತ್ರೆಗೆ ಬ್ರೇಕ್ ಹಾಕಿದ ಕೇಂದ್ರ ಸಚಿವ HDK : ಚುನಾವಣಾ ಮೈತ್ರಿ ಬೇರೆ ರಾಜಕೀಯ ಬೇರೆ ಎಂದ ದಳಪತಿ!

ಭ್ರೂಣ ಹತ್ಯೆಮಾಡಿಸಿದ್ದ ಪ್ರಿಯಕರ ದಯಾನಂದ(23) ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆ(Ramanagara women police station)ಗೆ ಮಹಿಳೆ ದೂರು ನೀಡಿದ್ದರು. ಇನ್ನು ಮಧ್ಯವರ್ತಿ ಮೂಲಕ ರಾಮನಗರ ಮಹಿಳಾ ಠಾಣೆ ವೃತ್ತ ನಿರೀಕ್ಷಕರು 1.40 ಲಕ್ಷ ರು. ಲಂಚ ಪಡೆದು ಯಾವುದೇ ಕ್ರಮ ಕೈಗೊಂಡಿಲ್ಲ. ರಾಮನಗರ ಪೊಲೀಸರು ಲಂಚ ಪಡೆದು ಅವನನ್ನು ಬಿಟ್ಟುಬಿಟ್ಟಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ. ಕಳೆದ 4 ತಿಂಗಳಿಂದ ಪೊಲೀಸ್ ಠಾಣೆಗೆ ಅಲೆದಾಡಿ ಬೇಸತ್ತು ಹೋಗಿದ್ದೇನೆ. ನ್ಯಾಯ ಸಿಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

5 ವರ್ಷಗಳಿಂದ ಪತಿಯಿಂದ ದೂರವಿದ್ದ ಮಹಿಳೆ, ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ದಯಾನಂದ್ ಪರಿಚಯವಾಗಿದ್ದರು. ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿದ ಲೈಂಗಿಕ ಸಂಪರ್ಕ ಬೆಳೆಸಿದ್ದನು.

ಮಹಿಳೆ ಗರ್ಭಿಣಿ ಎಂದು ತಿಳಿದ ಪ್ರಿಯಕರ ದಯಾನಂದ ಬಲವಂತವಾಗಿ ಗರ್ಭಪಾತ ಮಾಡಿಸಿ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲ. ಆತನ ವಿರುದ್ಧ ಭ್ರೂಣಹತ್ಯೆ ಪ್ರಕರಣ ದಾಖಲಿಸಿ ಕ್ರಮಕ್ಕೆ ಮಹಿಳೆ ಆಗ್ರಹಿಸಿದ್ದಾರೆ. ವಂಚನ ವಿರುದ್ದ ಕ್ರಮ ಕೈಗೊಳ್ಳದ ಪೊಲೀಸರು, ಪ್ರಿಯಕರನಿಂದ ವಂಚನೆಗಾಗಿದ್ದು ನನಗೆ ನ್ಯಾಯ ಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಏನಿದೆ ?

ಕರ್ನಾಟಕ ರಾಜ್ಯ ಪೊಲೀಸ್‌ ಅಧಿಕಾರಿಗಳು ಒಬ್ಬ ಹೆಣ್ಣು ಮಗಳಿಗೆ ನ್ಯಾಯ ಕೊಡಿಸಲು ಆಗದ ಪರಿಸ್ಥಿತಿಯಲ್ಲಿದ್ದಾರೆ. ಕಾರಣ ಕಳೆದ ಮೂರ್ನಾಲ್ಕು ತಿಂಗಳಿನಿಂದಲೂ ನಾನು ನ್ಯಾಯಕ್ಕಾಗಿ ಠಾಣೆ ಮೆಟ್ಟಿಲು ಹತ್ತಿಇಳಿಯುತ್ತಿದ್ದೇನೆ. ದಯಾನಂದ ಎಂಬ ವ್ಯಕ್ತಿ ನನ್ನನ್ನು ಮದುವೆ ಪ್ರೀತಿಸುತ್ತಿರುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದನು. ಗರ್ಭಿಣಿಯಾಗಿರುವ ವಿಷಯ ತಿಳಿದು ನನಗೆ ಗರ್ಭಪಾತದ ಮಾತ್ರೆಗಳನ್ನು ಬಲವಂತವಾಗಿ ತಿನ್ನಿಸಿ ಗರ್ಭಪಾತ ಮಾಡಿಸಿದ ಬಳಿಕ, ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ. ಪೊಲೀಸರು ನನಗೆ ನ್ಯಾಯ ಕೊಡಿಸುತ್ತಲ್ಲ. ಬದಲಿಗೆ ಆರೋಪಿ ಜೊತೆ ನಿಲ್ಲುತ್ತಿದ್ದಾರೆಂದು ಆರೋಪಿಸಿದ್ದಾರೆ.

ಹಾರ್ದಿಕ್ ಪಾಂಡ್ಯಾ ಇಲ್ಲದೆ ಮಗನ ಹುಟ್ಟುಹಬ್ಬ ಆಚರಿಸಿದ ನತಾಶಾ

ದಯವಿಟ್ಟು ತಾವು ನನಗೆ ನ್ಯಾಯ ದೊರಕಿಸಿ ಕೊಡುವಂತೆ ಕೇಳಿಕೊಳ್ಳುತ್ತಿದ್ದೇನೆ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ದಯಮಾಡಿ ನನಗೆ ನ್ಯಾಯ ಕೊಡಿಸಿ ಎಂದು ನೊಂದ ಮಹಿಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

click me!