ಸಚಿವ ಮುನಿರತ್ನ ಅವರು ನನ್ನ ವಿರುದ್ಧ 50 ಕೋಟಿ ರು. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿರುವುದು ತುಂಬಾ ಸಂತಸದ ಸಂಗತಿ. ಅವರನ್ನು ಕೈಮುಗಿದು ಪ್ರಾರ್ಥಿಸುತ್ತೇನೆ. ಮೊದಲು ಮೊಕದ್ದಮೆ ದಾಖಲಿಸಲಿ.
ಬೆಂಗಳೂರು (ಆ.26): ಸಚಿವ ಮುನಿರತ್ನ ಅವರು ನನ್ನ ವಿರುದ್ಧ 50 ಕೋಟಿ ರು. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿರುವುದು ತುಂಬಾ ಸಂತಸದ ಸಂಗತಿ. ಅವರನ್ನು ಕೈಮುಗಿದು ಪ್ರಾರ್ಥಿಸುತ್ತೇನೆ. ಮೊದಲು ಮೊಕದ್ದಮೆ ದಾಖಲಿಸಲಿ. ನ್ಯಾಯಾಲಯಕ್ಕೆ ಎಲ್ಲಾ ರೀತಿಯ ದಾಖಲೆಗಳನ್ನೂ ಸಲ್ಲಿಸುತ್ತೇವೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ತಿರುಗೇಟು ನೀಡಿದ್ದಾರೆ.
ನಾವು ಈಗಾಗಲೇ ಆಯ್ದ ಮೂರ್ನಾಲ್ಕು ಸಚಿವರು, ಐದಾರು ಶಾಸಕರ ಭ್ರಷ್ಟಾಚಾರದ ಬಗ್ಗೆ ದಾಖಲೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಅದಕ್ಕೆ ಸಚಿವರೇ ವೇದಿಕೆ ಒದಗಿಸುವುದಾದರೆ ನಾವು ಯಾಕೆ ಬೇಡ ಎನ್ನಬೇಕು. ದಯವಿಟ್ಟು ನ್ಯಾಯಾಲಯದಲ್ಲಿ ಅವರು ದೂರು ದಾಖಲಿಸಲಿ ಎಂದೂ ಅವರು ಸವಾಲು ಹಾಕಿದರು.
ಕಮಿಷನ್ ಆರೋಪ: ಕೆಂಪಣ್ಣ ಮೇಲೆ 50 ಕೋಟಿ ಮಾನನಷ್ಟ ಕೇಸ್ ಹಾಕುವೆ, ಮುನಿರತ್ನ
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಂಪಣ್ಣ, ಸಚಿವರು ನಮಗೆ ಏಳು ದಿನ ಗಡುವು ನೀಡಿದ್ದಾರೆ. ನಮ್ಮ ಬಳಿ ಇರುವ ದಾಖಲೆಗಳನ್ನು ಸರ್ಕಾರಕ್ಕಾಗಲಿ ಅಥವಾ ಸರ್ಕಾರದ ಅಧೀನದ ಸಂಸ್ಥೆಗಳಿಗಾಗಲಿ ನೀಡಿದರೆ ಯಾವುದೇ ಪ್ರಯೋಜನವಿಲ್ಲ ಎಂದು ಕಾಯುತ್ತಿದ್ದೆವು. ಇದೀಗ ಅವರೇ ನ್ಯಾಯಾಲಯಕ್ಕೆ ಹೋಗಿ ನಮ್ಮ ದಾಖಲೆ ಬಿಡುಗಡೆ ಮಾಡಲು ಉತ್ತಮ ವೇದಿಕೆ ಒದಗಿಸುತ್ತಿದ್ದಾರೆ. ನಮ್ಮ ಬಳಿ ಇರುವ ಎಲ್ಲಾ ದಾಖಲೆಗಳನ್ನೂ ನಾವು ಒದಗಿಸುತ್ತೇವೆ. ಅದರ ಆಧಾರದ ಮೇಲೆ ನ್ಯಾಯಾಲಯವೇ ಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.
ಮುನಿರತ್ನ ರಾಜೀನಾಮೆ ನೀಡಲಿ: ನಾವು ನ್ಯಾಯಾಲಯಕ್ಕೆ ದಾಖಲೆ ಸಲ್ಲಿಸಿದ ಬಳಿಕ ಅವರು ಆರೋಪಮುಕ್ತವಾಗುವವರೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದರಿಂದ ಸರ್ಕಾರವೂ ಭ್ರಷ್ಟಾಚಾರದ ಬಗ್ಗೆ ಯಾವ ನಿಲುವು ಹೊಂದಿದೆ ಎಂಬುದು ಬಯಲಾಗುತ್ತದೆ. ಅಂತಿಮವಾಗಿ ನಮ್ಮ ತಪ್ಪಿದ್ದರೆ ನಮಗೆ ಶಿಕ್ಷೆಯಾಗುತ್ತದೆ. ಅವರ ತಪ್ಪಿದ್ದರೆ ಅವರಿಗೆ ಶಿಕ್ಷೆಯಾಗುತ್ತದೆ ಎಂದರು.
ನಾವು ಈಗಾಗಲೇ ಆಯ್ದ ಮೂರ್ನಾಲ್ಕು ಸಚಿವರು, ಐದಾರು ಶಾಸಕರ ಭ್ರಷ್ಟಾಚಾರದ ಬಗ್ಗೆ ದಾಖಲೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಅದಕ್ಕೆ ಸಚಿವರೇ ವೇದಿಕೆ ಒದಗಿಸುವುದಾದರೆ ನಾವು ಯಾಕೆ ಬೇಡ ಎನ್ನಬೇಕು. ದಯವಿಟ್ಟು ನ್ಯಾಯಾಲಯದಲ್ಲಿ ಅವರು ದೂರು ದಾಖಲಿಸಲಿ.
- ಕೆಂಪಣ್ಣ, ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ
ಸರ್ಕಾರದ ವಿರುದ್ಧ ಕಮಿಷನ್ ಆರೋಪ; ಕೆಂಪಣ್ಣ ವಿರೋಧ ಪಕ್ಷದ ಬಳಿ ದೂರು ಕೊಡುವುದು ಎಷ್ಟು ಸರಿ? ಕೋಟ ಪ್ರಶ್ನೆ
ಕೆಲಸ ನಿಲ್ಲಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿ: ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲ ಎಂದು ಒಂದು ವರ್ಷ ಕೆಲಸ ನಿಲ್ಲಿಸಿದರೆ ತಂತಾನೇ ಎಲ್ಲವೂ ಸರಿಯಾಗುತ್ತದೆ. ಟೆಂಡರ್‌ನಲ್ಲಿ ಭಾಗವಹಿಸುವುದನ್ನು ಬಿಟ್ಟು ಸರ್ಕಾರಕ್ಕೆ ಬಿಸಿ ಮುಟ್ಟಿಸಿ, ಪರ್ಸಂಟೇಜ್ ವಿರುದ್ಧ ಬೀದಿಗೆ ಇಳಿಯಿರಿ. ತನಿಖೆ, ಒತ್ತಾಯ, ಹೇಳಿಕೆ, ಪ್ರತಿಹೇಳಿಕೆ ಇವೆಲ್ಲಾ ಸಮಯ ವ್ಯರ್ಥ ಆಗುವುದಕ್ಕೆ ಅಷ್ಟೇ. ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಯಾರಿಗೂ ಕಮಿಷನ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇದಕ್ಕೆ ಕಾಂಗ್ರೆಸ್, ಬಿಜೆಪಿ ಯಾರೂ ಹೊರತಲ್ಲ.
- ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ