ನೌಕರರ ಆಯ್ಕೆ ಅನುಸಾರ ನಿಗದಿತ ಅರ್ಹತೆ ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರದಿಂದ ಖಚಿತಪಡಿಸಿಕೊಂಡು ಆಯಾ ಇಲಾಖೆಗಳ ಮುಖ್ಯಸ್ಥರು ಆ.31ರ ಒಳಗೆ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವ ಮೊದಲು ದಾಖಲೆಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ದೃಢೀಕರಿಸಬೇಕು ಎಂದು ಟಿಪ್ಪಣಿಯಲ್ಲಿ ತಿಳಿಸಿದ ಆರ್ಥಿಕ ಇಲಾಖೆ
ಬೆಂಗಳೂರು(ಜು.09): ರಾಜ್ಯ ಸರ್ಕಾರಿ ಸೇವೆಗೆ 2006ರ ಏ. 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಆಗಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆಗೆ ಒಳಪಡಿಸಲು ಎಲ್ಲ ಇಲಾಖೆಗಳಿಂದ 'ಕ್ರೋಢಿಕೃತ ಮಾಹಿತಿ' ಯನ್ನು ಆರ್ಥಿಕ ಇಲಾಖೆ ಕೋರಿದೆ.
ನೌಕರರ ಆಯ್ಕೆ ಅನುಸಾರ ನಿಗದಿತ ಅರ್ಹತೆ ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರದಿಂದ ಖಚಿತಪಡಿಸಿಕೊಂಡು ಆಯಾ ಇಲಾಖೆಗಳ ಮುಖ್ಯಸ್ಥರು ಆ.31ರ ಒಳಗೆ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವ ಮೊದಲು ದಾಖಲೆಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ದೃಢೀಕರಿಸಬೇಕು ಎಂದು ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ತಿಳಿಸಲಾಗಿದೆ.
ಏಳನೇ ವೇತನ, ಹಳೇ ಪಿಂಚಣಿ ಜಾರಿಗೆ ಸಿಎಂ ಸಿದ್ಧತೆ: ಮಾಜಿ ಸಚಿವ ಆಂಜನೇಯ
ಇದರಿಂದ ಸುಮಾರು 8 ಸಾವಿರಕ್ಕೂ ಹೆಚ್ಚು ನೌಕರರು ಹಳೇ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸಾಧ್ಯತೆ ಇದೆ.