ಖಾಸಗಿ ಸಾಲದಿಂದ ಆತ್ಮಹತ್ಯೆಗೀಡಾದ ರೈತರಿಗೆ ಸರ್ಕಾರದಿಂದ ಪರಿಹಾರ

By Kannadaprabha NewsFirst Published Jun 12, 2021, 8:24 AM IST
Highlights
  • ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ
  • ಪರಿಹಾರ ನೀಡುವ ಪ್ರಸ್ತಾವನೆ ಮುಖ್ಯಮಂತ್ರಿಗಳ ಬಳಿ ಪರಿಶೀಲನೆಯಲ್ಲಿ
  • ಪ್ರಸ್ತಾವನೆ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ 

ಬೆಂಗಳೂರು (ಜೂ.12):  ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಕುರಿತ ಪ್ರಸ್ತಾವನೆ ಮುಖ್ಯಮಂತ್ರಿಗಳ ಬಳಿ ಪರಿಶೀಲನೆಯಲ್ಲಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರಿಗೆ ಪ್ರಧಾನಮಂತ್ರಿ ಫಸಲ… ಬಿಮಾ ಯೋಜನೆಯಡಿ 2016ರಿಂದ ಬೆಳೆ ನಷ್ಟವಿಮೆ ಪರಿಹಾರ ವಿತರಿಸಿಲ್ಲ ಎಂದು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಪುಟ್ಟ ಮಕ್ಕಳ ಫೀಸ್ ಕಟ್ಟೋಕೋ EMI, ಸಾಲ, ನೇರ ವ್ಯಾಪಾರಕ್ಕಿಳಿದ ಶಿಕ್ಷಣ ಸಂಸ್ಥೆಗಳು! ...

ಅರ್ಜಿಯ ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ, ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲ ತೀರಿಸಲಾಗದೆ ಅಥವಾ ಕಿರುಕುಳ ತಡೆಯಲಾರದೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ಪರಿಹಾರ ಕೊಡಬೇಕಾಗುತ್ತದೆ. ಈ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿತ್ತು.

ರೈತರಿಗೆ ಗುಡ್‌ನ್ಯೂಸ್: ಭತ್ತ ಸೇರಿ 14 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ! ...

ಶುಕ್ರವಾರ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಜಯ  ಕುಮಾರ್‌ ಎ. ಪಾಟೀಲ ಹಾಜರಾಗಿ, ಖಾಸಗಿ ಲೇವಾದೇವಿಯವರಿಂದ ಪಡೆದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರ ಕುಟುಂಬಗಳಿಗೆ ಪರಿಹಾರ ಕಲ್ಪಿಸುವ ಪ್ರಸ್ತಾವನೆ ಮುಖ್ಯಮಂತ್ರಿಗಳ ಮುಂದೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದರು.

ಅದನ್ನು ಪರಿಗಣಿಸಿದ ಪೀಠ, ಪ್ರಸ್ತಾವನೆ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಜೂ.30ರ ಒಳಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ, ವಿಚಾರಣೆಯನ್ನು ಜು.2ಕ್ಕೆ ಮುಂದೂಡಿತು.

click me!