'ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ' ಎಂದು ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಮಂಡ್ಯ (ಡಿ.26): ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಸಂಕೀರ್ತನಾ ಯಾತ್ರೆಯಲ್ಲಿ 'ಮುಸ್ಲಿಂ ಮಹಿಳೆಯರಿಗೆ ಮೊದಲು ಶಾಶ್ವತವಾದ ಗಂಡನಿರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿರುವುದು ಮೋದಿ ಸರ್ಕಾರ. ಮುಸ್ಲಿಂ ಮಹಿಳೆಯರು ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡುತ್ತಿದ್ದಾರೆ' ಎಂದು ಹೇಳಿಕೆ ಕೊಟ್ಟ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಮಂಡ್ಯದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ದೂರು ನೀಡಿದ್ದಾರೆ. ಅವರ ದೂರಿನ ಅನ್ವಯ ವಿವಾದಾತ್ಮಕ ಹೇಳಿಕೆ ಕುರಿತು ಎಫ್‌ಐಆರ್ ದಾಖಲಿಸಲಾಗಿದೆ.
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 354, 294, 509, 506, 153A, 295, 295 A, 298 ರ ಅಡಿ ಪ್ರಕರಣ ದಾಖಲಿಸಲಾಗಿದೆ. ಪ್ರಭಾಕರ ಭಟ್ ಅವರು ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಮುಸ್ಲಿಂರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದರು.
ರೈತರ ಹಾಲು ಖರೀದಿ ದರ 4 ರೂ. ತಗ್ಗಿಸಿದ ಕೆಎಂಎಫ್: ಬರದ ನಡುವೆಯೂ ರೈತರಿಗೆ ಬರೆ ಎಳೆದ ಸರ್ಕಾರ!
ಡಿಸೆಂಬರ್ 24 ರಂದು ನಡೆದ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನ ಉದ್ದೇಶಿಸಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಅವರು 'ಮುಸ್ಲಿಂ ಮಹಿಳೆಯರಿಗೆ ಮೊದಲು ಶಾಶ್ವತವಾದ ಗಂಡನಿರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿರುವುದು ಮೋದಿ ಸರ್ಕಾರ. ಮುಸ್ಲಿಂ ಮಹಿಳೆಯರು ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡುತ್ತಿದ್ದಾರೆ' ಎಮದು ಹೇಳಿದ್ದರು. ಆದ್ದರಿಂದ ದೂರನ್ನು ನೀಡುವಾಗ ಮಹಿಳೆಯರನ್ನ ಚುಡಾಯಿಸಿ, ಲೈಂಕಿಗವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಲು ಕುಮ್ಮಕ್ಕು ನೀಡಿದ್ದಾರೆ. ಸಾವು ನೋವುಗಳನ್ನ ಪ್ರಚೋದಿಸಿದ ವೃತ್ತಿಪರ ಕ್ರಿಮನಲ್ ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಾಜ್ಮಾ ದೂರು ದಾಖಲಿಸಿದ್ದಾರೆ.
ರೈತರ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ ಖಡಕ್ ವಾರ್ನಿಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ!
ಚಾಮರಾಜನಗರದಲ್ಲೂ ದೂರು ದಾಖಲು: ಮಂಡ್ಯದಲ್ಲಿ ಮಾತ್ರವಲ್ಲದೇ ಚಾಮರಾಜನಗರದ ಪೊಲೀಸ್ ಠಾಣೆಯಲ್ಲಿಯೂ ವುಮೆನ್ ಇಂಡಿಯಾ ಮೂವ್‌ಮೆಂಟ್ (ಡಬ್ಲ್ಯೂಐಎಂ) ವತಿಯಿಂದಲೂ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಪ್ರಭಾಕರ್ ಭಟ್ ಅವರು ಮುಸ್ಲಿಂ ಮಹಿಳೆಯರಿಗೆ ಅವಮಾನ ಮಾಡುವ ಉದ್ದೇಶದಿಂದಲೇ ಇಂತಹ ಹೇಳಿಕೆ ನೀಡಿದ್ದಾರೆ. ಇದರಿಂದ ನಮ್ಮ ಸಮುದಾಯದ ಮಹಿಳೆಯರಿಗೆ ನೋವುಂಟಾಗಿದೆ. ಇನ್ನು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್‌ಗೆ ಆಲ್ಕೈದಾ ಸಂಪರ್ಕವಿದೆ ಎಂದು ಹೇಳಿ ಯುವತಿಯ ತೇಜೋವಧೆ ಮಾಡಿದ್ದಾರೆ. ಮುಸ್ಲಿಂ ಮಹಿಳೆಯರ ಮೇಲೆ ನಿಂದನಾತ್ಮಕ ಹೇಳಿಕೆ ಕೊಟ್ಟ ಪ್ರಭಾಕರ್ ಭಟ್ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ಡಬ್ಲ್ಯೂಐಎಂ ಸಂಘಟನೆಯ ಅಧ್ಯಕ್ಷೆ ರೇಷ್ಮಾ ಬಾನು, ಕಾರ್ಯದರ್ಶಿ ರುಮಾನ್ ತಾಜ್ ಸೇರಿ ಹಲವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.