
ಕೊಪ್ಪಳ (ಸೆ.18): ದಲಿತ ಮಹಿಳೆಗೆ ಅಪಮಾನ ಮಾಡಿದ್ದಾರೆ ಎನ್ನುವ ಆರೋಪದಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಂಗಳವಾರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ದಸರಾ ಹಬ್ಬದಲ್ಲಿ ಚಾಮುಂಡಿ ದೇವಿಗೆ ಸನಾತನ ಧರ್ಮದವರು ಮಾತ್ರ ಹೂವು ಮುಡಿಸಬೇಕು. ನಮ್ಮಲ್ಲಿ ದಲಿತ ಹೆಣ್ಣು ಮಕ್ಕಳಿಗೂ ಅವಕಾಶವಿಲ್ಲ. ಹೀಗಿರುವಾಗ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅವಕಾಶ ನೀಡಿರುವ ಕ್ರಮ ಸರಿಯಲ್ಲ ಎಂದು ಹೇಳಿಕೆ ನೀಡಿದ್ದರು
ಇದನ್ನೂ ಓದಿ: ನಾಳೆ ನಾನು ಸಿಎಂ ಆಗುವಾಗ ಜೆಸಿಬಿ ಸಮೇತ ಪ್ರಮಾಣ ವಚನ ಸ್ವೀಕರಿಸುವೆ: ಯತ್ನಾಳ್
ಈ ಮೂಲಕ ಸಾರ್ವಜನಿಕವಾಗಿ ದಲಿತ ಹೆಣ್ಣು ಮಕ್ಕಳಿಗೆ ಹಾಗೂ ಇಡೀ ದಲಿತ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಗುತ್ತಿಗೆದಾರ, ದಲಿತ ಮುಖಂಡ ಮಲ್ಲಿಕಾರ್ಜುನ ಪೂಜಾರ ದೂರಿನನ್ವಯ ಕೇಸ್ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ