ಕೊಡಗಿನ ಇತಿಹಾಸದಲ್ಲೇ ಮೊದಲ ಬಾರಿಗೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್! ಏನಿದು ಪ್ರಕರಣ?

Published : Dec 10, 2025, 04:53 PM IST
First Death Sentence in Kodagu History in ponnampete urder case

ಸಾರಾಂಶ

ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಮೊದಲ ಬಾರಿಗೆ, ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಆರೋಪಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಆರೋಪಿ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ.

ಕೊಡಗು (ಡಿ.10): ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯವು ಸಾಮೂಹಿಕ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ಒಂದೇ ಕುಟುಂಬದ ನಾಲ್ವರ ಹತ್ಯೆ ಆರೋಪಿಗೆ ಗಲ್ಲು:

2024 ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ ಕೊಳತೋಡು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೇರಳ ಮೂಲದ ಗಿರೀಶ್ (37) ಎಂಬಾತ ಬರ್ಬರವಾಗಿ ಹತ್ಯೆ ಮಾಡಿದ್ದ. ಮೃತಪಟ್ಟವರನ್ನು ನಾಗಿ (35), ಆಕೆಯ ಆರು ವರ್ಷದ ಮಗಳು ಕಾವೇರಿ (7), ಹಾಗೂ ನಾಗಿಯ ಅಜ್ಜ-ಅಜ್ಜಿ ಕರಿಯ (75) ಮತ್ತು ಗೌರಿ (70) ಎಂದು ಗುರುತಿಸಲಾಗಿತ್ತು. ಆರೋಪಿ ಗಿರೀಶ್ ಕತ್ತಿಯಿಂದ ನಾಲ್ವರನ್ನೂ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದ.

ಕಾನೂನು ಪ್ರಕ್ರಿಯೆ:

ಪ್ರಕರಣದ ಭೀಕರತೆ ಮತ್ತು ಗಂಭೀರತೆಯನ್ನು ಮನಗಂಡ ಪೊನ್ನಂಪೇಟೆ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಆರೋಪಿ ಗಿರೀಶ್‌ನನ್ನು ಬಂಧಿಸಿದ್ದರು. ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಈ ಮಹತ್ವದ ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಯಾಸೀನ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಎಲ್ಲಾ ಸಾಕ್ಷ್ಯ ಮತ್ತು ವಾದಗಳನ್ನು ಪರಿಶೀಲಿಸಿದ ವಿರಾಜಪೇಟೆ ಸೆಷನ್ಸ್ ನ್ಯಾಯಾಲಯವು, ಆರೋಪಿ ಗಿರೀಶ್‌ನ ಅಪರಾಧವು ಗಂಭೀರ ಸ್ವರೂಪದ್ದು ಎಂದು ಪರಿಗಣಿಸಿ, ಆತನಿಗೆ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಮೂಲಕ ಕೊಡಗಿನ ನ್ಯಾಯಾಂಗ ಇತಿಹಾಸದಲ್ಲಿ ಮೊದಲ ಬಾರಿಗೆ ಮರಣದಂಡನೆಯ ತೀರ್ಪು ಪ್ರಕಟವಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!