ಅಪಘಾತ: ಕರ್ನಾಟಕ ಪ್ರವಾಸದಲ್ಲಿದ್ದ ಮುಂಬೈನ ಐವರು ಸಾವು

Nov 17, 2018, 1:49 PM IST

ಹುಬ್ಬಳ್ಳಿ[ನ.17]: ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮುಂಬೈ ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್‌ನಲ್ಲಿದ್ದ ಮುಂಬೈ ಮೂಲದ ಐವರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ರವಾನಿಸಲಾಗಿದೆ. 

ಬಸ್‌ನಲ್ಲಿದ್ದ ಪ್ರಯಾಣಿಕರು ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯ ಪ್ರವಾಸಕ್ಕೆ ನಡೆಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಹುಬ್ಬಳ್ಳಿಯಿಂದ ಹಂಪಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿ‌ದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಘಟನೆಯ ಮಹಿತಿ ಲಭ್ಯವಾಗುತ್ತಿದ್ದಂತೆಯೇ ಅಣ್ಣಿಗೇರಿ ಠಾಣೆ ಪೋಲಿಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಮುಂದುವರೆಸಿದ್ದಾರೆ.