
ಬೆಂಗಳೂರು (ಆ.09): ರಾಜ್ಯದ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಒಟ್ಟು 7 ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ತುಂಗಭದ್ರಾ, ನಾರಾಯಣಪುರ ಜಲಾಶಯಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ತೀರ ಪ್ರದೇಶಗಳು ಮುಳುಗಡೆ ಭೀತಿಯನ್ನು ಎದುರಿಸುತ್ತಿವೆ. ಕೊಡಗು, ಚಿಕ್ಕಮಗಳೂರು, ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಉತ್ತಮ ಮಳೆ ಸುರಿದಿದ್ದು ಮಳೆ ಸಂಬಂಧಿ ಕಾರಣಕ್ಕೆ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ.
ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಶಾಲೆಯಿಂದ ಮನೆಗೆ ಹಿಂದುರುಗುತ್ತಿದ್ದ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ(7) ಕಾಲುಸಂಕ ದಾಟುವಾಗ ವೇಳೆ ಕಾಲು ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಿಂದ ವರದಿಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಭದ್ರಾಪುರ ಶಾಲೆಯ ಕಟ್ಟಡ ಸೋಮವಾರ ನಸುಕಿನಲ್ಲಿ ಕುಸಿದಿದೆ. ಶಾಲೆ ಆರಂಭಕ್ಕೆ ಮುನ್ನವೇ ಕಟ್ಟಣ ಕುಸಿದಿರುವುದರಿಂದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು, 20ಕ್ಕೂ ಅಧಿಕ ಮನೆ ಜಲಾವೃತಗೊಂಡಿವೆ. ಬಳ್ಳಾರಿ ನಾಲಾ ಉಕ್ಕಿ ಹರಿಯುತ್ತಿರುವುದರಿಂದ ನೂರಾರು ಎಕರೆ ಭತ್ತದ ಬೆಳೆ ಮುಳುಗಡೆಯಾಗಿದೆ.
Chikkamagaluru;ಕುದುರೆಮುಖ ವ್ಯಾಪ್ತಿಯಲ್ಲಿ ಭಾರೀ ಮಳೆ ಹಿನ್ನೆಲೆ, ಹೆಬ್ಬಾಳೆ ಸೇತುವೆ ಮುಳುಗಡೆ
ಡ್ಯಾಂ ನೀರಿಂದ ಪ್ರವಾಹ: ಮಲೆನಾಡಿನಲ್ಲಿ ಮಳೆ ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಂದಿದ್ದು ಸುಮಾರು 1 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕಗಳು ಜಲಾವೃತವಾಗಿದ್ದು, ಗಂಗಾವತಿ- ಕಂಪ್ಲಿ ಸೇತುವೆ ಮುಳುಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತೆ 1 ಲಕ್ಷ ಕ್ಯುಸೆಕ್ ನೀರು ಹರಿಬಿಡಲಾದ ಹಿನ್ನೆಲೆಯಲ್ಲಿ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ನದಿ ತೀರದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.
ಮಳೆಗೆ ಮತ್ತಷ್ಟುರಸ್ತೆ ಕುಸಿತ: ಸಮೀಪದ ನೀಲಗುಂದ ಅಂತೂರ ಬೆಂತೂರ ಗ್ರಾಮಗಳ ಸಂಪರ್ಕ ಕಲ್ಪಿಸುವ ರಸ್ತೆ ಮಳೆಯಿಂದಾಗಿ ಮತ್ತಷ್ಟುಕುಸಿತವಾಗಿದ್ದು, ವಾಹನಗಳ ಸಂಚಾರ ಅಪಾಯ ಮಟ್ಟಕ್ಕೆ ಬಂದು ನಿಂತಿದೆ. ಕಳೆದ ವರ್ಷ ಜೂನ್‌ನಲ್ಲಿ ಸುರಿದ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಭೂಮಿ ಕುಸಿದು ರಸ್ತೆ ಹಾಳಾಗಿತ್ತು. ಆಗ ದುರಸ್ತೆ ಕಾಮಗಾರಿ ಆರಂಭಿಸಿದ್ದ ಲೋಕೋಪಯೋಗಿ ಇಲಾಖೆ ಈವರೆಗೂ ಕಾಮಗಾರಿ ಪೂರ್ಣವಾಗಿಲ್ಲ, ಮತ್ತೇ ಈ ವರ್ಷ ಸತತ ಮಳೆಯಿಂದಾಗಿ ಮುಕ್ಕಾಲು ಭಾಗದಷ್ಟುರಸ್ತೆ ಕುಸಿತವಾಗಿದೆ. ಇದರಿಂದ ವಾಹನಗಳ ಸಂಚಾರವು ಅಪಾಯಮಟ್ಟದಲ್ಲಿದೆ. ರಸ್ತೆ ಪಕ್ಕದಲ್ಲಿ ದೊಡ್ಡ ಕಾಲುವೆ ಇದ್ದು ಕಲ್ಲಿನ ಪರಸಿ ಕಲ್ಲುಗಳನ್ನ ಕಿತ್ತು ರಸ್ತೆ ಬದಿ ಹಾಕಲಾಗಿದೆ.
Chitradurga Heavy Rain: ಜಿಟಿ ಜಿಟಿ ಮಳೆಗೆ ಕಂಗಾಲಾದ ಕೋಟೆನಾಡಿನ ಅನ್ನದಾತ
ಮಣ್ಣು ಕುಸಿತದಿಂದಾಗಿ ರಾತ್ರಿ ಹೊತ್ತು ವಾಹನಗಳು ಆಯತಪ್ಪಿ ಬೀಳುವ ಆತಂಕ ಎದುರಾಗಿದೆ. ಹೊಲಗಳಿಗೆ ಹೋಗುವ ದಾರಿ ಕಡಿತಗೊಂಡು ಚಕ್ಕಡಿ, ಟ್ರ್ಯಾಕ್ಟರ್ ಹೋಗದೆ ಕೃಷಿ ಕೆಲಸಕ್ಕು ಸಮಸ್ಯೆಯಾಗಿದೆ. ಸಾರಿಗೆ ಬಸ್, ಸ್ಕೂಲ್ ವಾಹನಗಳು ಹೆಚ್ಚು ಸಂಚಾರ ಮಾಡುತ್ತಿದ್ದು ಈ ಮಾರ್ಗ ಬಿಟ್ಟು ಬೇರೆ ದಾರಿ ಇಲ್ಲಾಗಿದೆ. ದುರಸ್ತೆ ಕಾಮಗಾರಿ ಪೂರ್ಣ ಮಾಡಬೇಕು ಎಂದು ಹಲವು ಬಾರಿ ಒತ್ತಾಯಿಸಿದ್ದೇವೆ, ಆದರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಮಹಾಂತೇಶ ತಿರ್ಲಾಪೂರ ಆರೋಪಿಸಿದರು. ಅಪಘಾತಗಳು ಸಂಭವಿಸುವ ಮುನ್ನ ರಸ್ತೆ ದುರಸ್ತೆ ಕಾಮಗಾರಿ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ