ರಾಜ್ಯದಲ್ಲಿ ಇ-ವಾಹನ ಕ್ಷೇತ್ರ ಅಭಿವೃದ್ಧಿಗೆ ಒತ್ತು : ಎಚ್‌.ಡಿ. ಕುಮಾರಸ್ವಾಮಿ

Kannadaprabha News   | Kannada Prabha
Published : Mar 05, 2026, 05:07 AM IST
HD Kumaraswamy

ಸಾರಾಂಶ

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗಾಗಿ ಸಂಶೋಧನೆ, ಉತ್ಪಾದನೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗಾಗಿ ಸಂಶೋಧನೆ, ಉತ್ಪಾದನೆ ಹಾಗೂ ಉದ್ಯೋಗ ಸೃಷ್ಟಿಗೆ ಒತ್ತು ನೀಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬುಧವಾರ ನಗರದ ಎಚ್‌ಎಂಟಿ ಭವನದಲ್ಲಿನ ತಮ್ಮ ಕಚೇರಿಯಲ್ಲಿ ಕರ್ನಾಟಕ ಕೈಗಾರಿಕೆ ಮತ್ತು ವಾಣಿಜ್ಯ ಮಂಡಳಿ (ಎಫ್‌ಕೆಸಿಸಿಐ) ಪದಾಧಿಕಾರಿಗಳು ಮತ್ತು ಕೈಗಾರಿಕೋದ್ಯಮಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.

ಈಗಾಗಲೇ ಮಂಡ್ಯ ಜಿಲ್ಲೆಯಲ್ಲಿ 500 ಕೋಟಿ ರು. ವೆಚ್ಚದಲ್ಲಿ ಜಾಗತಿಕ ಮಟ್ಟದ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ(ಎಆರ್‌ಎಐ) ಪರೀಕ್ಷಾ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ರಾಜ್ಯದ ಮುಖ್ಯಮಂತ್ರಿಗೆ ಸ್ವತಃ ನಾನೇ ಪತ್ರ ಬರೆದಿದ್ದೇನೆ. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಈ ತರಬೇತಿ ಕೇಂದ್ರಕ್ಕೆ ಕಳೆದ ಬಜೆಟ್ ನಲ್ಲಿ 500 ಕೋಟಿ ರು. ಮೀಸಲಿಡಲಾಗಿದೆ. ಅಗತ್ಯಬಿದ್ದರೆ ಇನ್ನೂ 500 ಕೋಟಿ ರು. ಹೂಡಿಕೆಗೆ ಕೇಂದ್ರ ತಯಾರಿದೆ ಎಂದು ಸಚಿವರು ಹೇಳಿದರು.

ಕಂಪನಿಗಳು ಕರ್ನಾಟಕದಲ್ಲಿ ಹುಟ್ಟಿಕೊಳ್ಳುತ್ತಿವೆ

ಕಂಪನಿಗಳು ಕರ್ನಾಟಕದಲ್ಲಿ ಹುಟ್ಟಿಕೊಳ್ಳುತ್ತಿವೆ, ಆದರೆ ಬೇರೆ ರಾಜ್ಯಗಳಲ್ಲಿ ಉತ್ಪಾದನೆ ಮಾಡುತ್ತಿವೆ. ಇಂತಹ ಪರಿಸ್ಥಿತಿಯಿಂದ ಕರ್ನಾಟಕವನ್ನು ಹೊರತರಬೇಕಿದೆ. ಅದಕ್ಕೆ ಎಆರ್‌ಎಐ ಕೇಂದ್ರ ದೊಡ್ಡ ಮಟ್ಟದ ಕೊಡುಗೆ ನೀಡುತ್ತದೆ. ಆಟೋಮೊಬೈಲ್ ಪರೀಕ್ಷಾ ಕೇಂದ್ರ ಬರುವುದರ ಜತೆಗೆ ಆ ಮೂಲಕ ಸಂಶೋಧನೆ, ಉತ್ಪಾದನೆಗೂ ಮುಂದಿನ ದಿನಗಳಲ್ಲಿ ಅವಕಾಶಗಳು ತೆರೆದುಕೊಳ್ಳಲಿವೆ ಎಂದು ತಿಳಿಸಿದರು.

ಸಾವಿರಾರು ಉದ್ಯೋಗ ಸೃಷ್ಟಿ

ಸ್ಥಳೀಯ ಮಟ್ಟದಲ್ಲಿ ಹೆಚ್ಚು ಉದ್ಯೋಗ ಸೃಷ್ಟಿ ಆಗಬೇಕು ಎಂಬುದು ಪ್ರಧಾನಿಗಳ ದೂರದೃಷ್ಟಿ. ಆ ನಿಟ್ಟಿನಲ್ಲಿ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡುತ್ತಿದ್ದೇವೆ. ರಾಜ್ಯದಲ್ಲಿ ಎಆರ್‌ಎಐ ಪರೀಕ್ಷಾ ಕೇಂದ್ರ ಸ್ಥಾಪನೆಯಿಂದ ಸಾವಿರಾರು ಸಂಖ್ಯೆಯಷ್ಟು ಉದ್ಯೋಗ ಸೃಷ್ಟಿಯಾಗುತ್ತವೆ. ಪರೋಕ್ಷ ಉದ್ಯೋಗಗಳನ್ನು ಬೃಹತ್ ಪ್ರಮಾಣದಲ್ಲಿ ಸೃಷ್ಟಿಸಿ ದೊಡ್ಡ ಮಟ್ಟದ ಆಟೋ ಇಕೋ ಸಿಸ್ಟಮ್ ನಿರ್ಮಾಣಕ್ಕೆ ನಾಂದಿ ಹಾಡುತ್ತದೆ. ಹೀಗಾಗಿ ಈ ಯೋಜನೆಗೆ ರಾಜ್ಯ ಸರ್ಕಾರದ ಸಹಕಾರವನ್ನು ಕೋರಿದ್ದೇವೆ ಎಂದು ಹೇಳಿದರು.

ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಹಿರಿಯ ಉಪಾಧ್ಯಕ್ಷ ಟಿ. ಸಾಯಿರಾಂ ಪ್ರಸಾದ್, ಉಪಾಧ್ಯಕ್ಷ ಬಿ.ಪಿ. ಶಶಿಧರ್, ಗ್ರೀನ್ ಎನರ್ಜಿ ಸಮಿತಿ ಅಧ್ಯಕ್ಷ ರಮೇಶ್ ಶಿವಣ್ಣ, ಮಾಜಿ ಅಧ್ಯಕ್ಷ ಎಸ್.ಸಂಪತ್ ರಾಮನ್ ಸೇರಿದಂತೆ ಕೈಗಾರಿಕೋದ್ಯಮಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೇಶದಲ್ಲಿ 70 ದಿನಕ್ಕೆ ಆಗವಷ್ಟು ತೈಲ ದಾಸ್ತಾನು ಇದೆ: ಜೋಶಿ
ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಪ್ರತಿಷ್ಠಿತ ಯುಗಾದಿ ಪುರಸ್ಕಾರ ಪ್ರಕಟ