ರಾಜ್ಯದ 230 ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ

Published : Oct 30, 2024, 12:36 PM IST
ರಾಜ್ಯದ 230  ಗೋಲ್‌ಗಪ್ಪಾ ಘಟಕ ಮೇಲೆ ಆಹಾರ ಇಲಾಖೆ ದಾಳಿ

ಸಾರಾಂಶ

ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ 165 ಘಟಕಗಳಲ್ಲಿ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ.  

ಬೆಂಗಳೂರು (ಅ.30): ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ 165 ಘಟಕಗಳಲ್ಲಿ ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಗೋಲ್‌ಗಪ್ಪಾ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ, ಹಾರ್ಪಿಕ್ ಬಳಕೆ ಮಾಡಲಾಗುತ್ತಿರುವ ಕುರಿತಂತೆ ಅ. 22ರಂದು 'ಕನ್ನಡಪ್ರಭ' ದಿನಪತ್ರಿಕೆ ವರದಿ ಮಾಡಿತ್ತು. 

ಆ ವರದಿ ಆಧರಿಸಿ ಸಿಎಂರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ.ವೈಷ್ಣವಿ ಅವರು, ರಾಜ್ಯದಲ್ಲಿ ಗೋಲ್‌ ಗಪ್ಪಾಘಟಕಗಳಲ್ಲಿ ನೈರ್ಮಲ್ಯ ಕಾಪಾಡಲಾಗುತ್ತಿದೆಯೇ ಮತ್ತು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ವಸ್ತುಗಳನ್ನು ಬಳಸಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿ ಗಳು ರಾಜ್ಯಾದ್ಯಂತ 230 ಗೋಲ್‌ಗಪ್ಪಾ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. 

ನ್ಯಾಷನಲ್ ಲಾ ಸ್ಕೂಲ್ ಕನ್ನಡಿಗರ ಮೀಸಲಾತಿ ಹೋರಾಟಕ್ಕೆ ಹಿನ್ನಡೆ

ಈ ವೇಳೆ 12 ಘಟಕಗಳು ನೈರ್ಮಲ್ಯ ಕಾಪಾಡದೆ ಗೋಲ್‌ಗಪ್ಪಾ ತಯಾರಿಸುತ್ತಿದ್ದದ್ದು ಕಂಡು ಬಂದಿದ್ದು, ಆ ಘಟಕಗಳ ಮಾಲೀಕರಿಂದ 13000 ರು. ದಂಡ ವಸೂಲಿ ಮಾಡಿ ಕ್ರಮ ಕೈಗೊಂಡಿದ್ದಾರೆ. ಉಳಿದಂತೆ 165 ಘಟಕಗಳಲ್ಲಿ ಗೋಲ್‌ಗಪ್ಪಾ ಸೇರಿದಂತೆ ಇನ್ನಿತರ ಆಹಾರ ಪದಾರ್ಥಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಬಳಸಲಾಗುತ್ತಿದೆಯೇ ಎಂಬುದು ತಿಳಿದು ಬರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!