ಇಂದಿನಿಂದ ಕಾಲುಬಾಯಿ ಲಸಿಕೆ ಅಭಿಯಾನ: ಚವ್ಹಾಣ್‌

By Kannadaprabha NewsFirst Published Nov 7, 2022, 10:17 AM IST
Highlights
  • ಇಂದಿನಿಂದ ಕಾಲುಬಾಯಿ ಲಸಿಕೆ ಅಭಿಯಾನ: ಚವ್ಹಾಣ್‌
  • ಡಿ.7ರವರೆಗೆ ಒಂದು ತಿಂಗಳು ಉಚಿತ ಲಸಿಕೆ ನೀಡಿಕೆ

ಬೆಂಗಳೂರು (ನ.7) : ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ನ.7ರಿಂದ ಡಿಸೆಂಬರ್‌ 7ರವರೆಗೆ ಒಂದು ತಿಂಗಳ ಕಾಲ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ಎಲ್ಲಾ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಉಚಿತ ಲಸಿಕೆ ಅಭಿಯಾನ ಜಾರಿಗೊಳಿಸಲಾಗುತ್ತಿದೆ. ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆಗೊಳಿಸಲು ಪ್ರತಿ ಆರು ತಿಂಗಳಿಗೊಮ್ಮೆ ರೋಗದ ವಿರುದ್ಧ ಲಸಿಕೆ ಹಾಕಿಸುವುದು ಪರ್ಯಾಯವಾಗಿದೆ. ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್‌ ಮತ್ತು ಸೂಜಿ ಬಳಸಲು ತಿಳಿಸಲಾಗಿದೆ. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸುವಂತೆ ಅವರು ಪಶುಪಾಲನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರುಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದರು. ನಾನು ಕೂಡ ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ್‌ ರೂಪಾಲಾ ಅವರನ್ನು ಭೇಟಿ ಮಾಡಿ ಒಂದು ಕೋಟಿ ಲಸಿಕೆ ನೀಡುವಂತೆ ಮನವಿ ಮಾಡಿದ್ದಕ್ಕೆ ಕೇಂದ್ರ ಸರ್ಕಾರವು ಸ್ಪಂದಿಸಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Rabies: ಉಚಿತ ರೇಬಿಸ್‌ ಲಸಿಕೆ ಅಭಿಯಾನ: ಸಚಿವ ಚವ್ಹಾಣ್‌

click me!